ಬೆಂಗಳೂರು: ಬೆಂಗಳೂರಿನಲ್ಲಿರುವ ರೈಲ್ ವೀಲ್ ಫ್ಯಾಕ್ಟರಿಯಲ್ಲಿ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ ರೈಲ್ವೆ ಸಚಿವಾಲಯ ಅಧಿಸೂಚನೆ ಹೊರಡಿಸಿದೆ. ಒಟ್ಟು 192 ಹುದ್ದೆಗಳಿಗೆ ಭರ್ತಿ ನಡೆಸಲಾಗುವುದು. 2023-24ನೇ ಸಾಲಿನ ಒಂದು ವರ್ಷದ ಅವಧಿಗೆ ಈ ನೇಮಕಾತಿ ನಡೆಯಲಿದೆ.
ಹುದ್ದೆ ವಿವರ: ರೈಲ್ ವ್ಹೀಲ್ ಫ್ಯಾಕ್ಟರಿಯಲ್ಲಿನ ಅಪ್ರೆಂಟಿಸ್ ಹುದ್ದೆಗಳ ಮಾಹಿತಿ ಹೀಗಿದೆ..
- ಫಿಟರ್ 85
- ಮೆಕಾನಿಸ್ಟ್ 31
- ಮೆಕಾನಿಕ್ (ಮೋಟರ್ ವೆಹಿಕಲ್) 8
- ಟ್ಯೂನರ್ 5
- ಸಿಎನ್ಸಿ ಪ್ರೋಗ್ರಾಮಿಂಗ್ ಅಂಡ್ ಅಪರೇಟರ್ 23
- ಎಲೆಕ್ಟ್ರಿಷಿಯನ್ 18
- ಎಲೆಕ್ಟ್ರಾನಿಕ್ ಮೆಕಾನಿಕ್ 22
ವಿದ್ಯಾಭ್ಯಾಸ: ಅಭ್ಯರ್ಥಿಗಳು 10ನೇ ತರಗತಿಯನ್ನು ಪೂರ್ಣಗೊಳಿಸಿರಬೇಕು.
ವೇತನ: 10,899 - 12261 ರೂ ಮಾಸಿಕ
ವಯೋಮಿತಿ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 15 ವರ್ಷ ಮತ್ತು ಗರಿಷ್ಠ 24 ವರ್ಷ ವಯೋಮಿತಿ ಮೀರಿರಬಾರದು. ಒಬಿಸಿ ಅಭ್ಯರ್ಥಿಗಳಿಗೆ 3 ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಹೊಂದಿರಬೇಕು.
ಅರ್ಜಿ ಸಲ್ಲಿಕೆ: ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ನಲ್ಲಿ ಲಭ್ಯವಿರುವ ಅರ್ಜಿಯನ್ನು ಪಡೆದು ಭರ್ತಿ ಮಾಡಿ, ಅಗತ್ಯ ದಾಖಲಾತಿ ನಕಲು ಪ್ರತಿಗಳೊಂದಿಗೆ ಈ ವಿಳಾಸಕ್ಕೆ ಕಳುಹಿಸಬಹುದಾಗಿದೆ.
ದಿ ಅಸಿಸ್ಟಂಟ್ ಪರ್ಸನಲ್ ಆಫೀಸರ್, ಪರ್ಸನಲ್ ಇಲಾಖೆ, ರೈಲ್ ವೀಲ್ ಫ್ಯಾಕ್ಟರಿ, ಯಲಹಂಕ, ಬೆಂಗಳೂರು- 560064.
ಈ ಹುದ್ದೆಗಳಿಗೆ ಫೆಬ್ರವರಿ 23ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಮಾರ್ಚ್ 22
ಈ ಹುದ್ದೆ ಕುರಿತ ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಪಡೆಯಲು rwf.indianrailways.gov.in ಇಲ್ಲಿಗೆ ಭೇಟಿ ನೀಡಬಹುದಾಗಿದೆ.
1000 ಗ್ರಾಮ ಆಡಳಿತಾಧಿಕಾರಿಗಳ ಹುದ್ದೆಗೆ ಅಧಿಸೂಚನೆ: ರಾಜ್ಯ ಸರ್ಕಾರದ ಕಂದಾಯ ಇಲಾಖೆಯಲ್ಲಿ ಸಾವಿರ ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಗಳ ಭರ್ತಿಗೆ ಕೆಇಎ ಅಧಿಸೂಚನೆ ಹೊರಡಿಸಿದೆ. ಪಿಯುಸಿ ಓದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. 21,400 - 42,000 ರೂ. ಮಾಸಿಕ ವೇತನ ನಿಗದಿಸಲಾಗಿದೆ. ಸಾಮಾನ್ಯ ಅಭ್ಯರ್ಥಿಗಳಿಗೆ 35 ವರ್ಷ ನಿಗದಿಸಲಾಗಿದೆ. ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 3 ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ 1 ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ. ಈ ಹುದ್ದೆಗೆ ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಏಪ್ರಿಲ್ 1 ಆಗಿದೆ. ಈ ಹುದ್ದೆ ಕುರಿತು ವಿವರವಾದ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆ ಸೇರಿದಂತೆ ಸಂಪೂರ್ಣ ವಿವರಗಳಿಗೆ kea.kar.nic.in ಇಲ್ಲಿಗೆ ಭೇಟಿ ನೀಡಬಹುದಾಗಿದೆ.
ಇದನ್ನೂ ಓದಿ: ಬಿಎಂಟಿಸಿಯಲ್ಲಿ 2,500 ಕಂಡಕ್ಟರ್ ಹುದ್ದೆಗಳ ಭರ್ತಿಗೆ ಅಧಿಸೂಚನೆ; ಇಲ್ಲಿದೆ ಸಂಪೂರ್ಣ ಮಾಹಿತಿ