ಬೆಂಗಳೂರು: ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತ (ಹೆಸ್ಕಾಂ)ನಲ್ಲಿ 338 ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಒಂದು ವರ್ಷದ ಅವಧಿಯ ನೇಮಕಾತಿಗೆ ಅರ್ಹ ಪದವೀಧರರು ಮತ್ತು ಡಿಪ್ಲೊಮಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ವಿವರ:
- ಪದವೀಧರ ಅಪ್ರೆಂಟಿಸ್ ಹುದ್ದೆಗಳು - 200
- ಡಿಪ್ಲೊಮಾ ಅಪ್ರೆಂಟಿಸ್ ಹುದ್ದೆಗಳು - 138
ವಿದ್ಯಾರ್ಹತೆ: ಪದವೀಧರ ಅಪ್ರೆಂಟಿಸ್‌ಗೆ ಎಲೆಕ್ಟ್ರಾನಿಕ್ ಮತ್ತು ಎಲೆಕ್ಟ್ರಿಕಲ್ ವಿಷಯದಲ್ಲಿ ಬಿಇ ಅಥವಾ ಬಿ.ಟೆಕ್ ಪದವಿ ಹೊಂದಿರಬೇಕು.
ಡಿಪ್ಲೊಮಾ ಅಪ್ರೆಂಟಿಸ್ ಹುದ್ದೆ: ಎಲೆಕ್ಟ್ರಾನಿಕ್ ಮತ್ತು ಎಲೆಕ್ಟ್ರಿಕಲ್ ವಿಷಯದಲ್ಲಿ 3 ವರ್ಷದ ಡಿಪ್ಲೊಮಾ ಪದವಿ ಹೊಂದಿರಬೇಕು.
ವಯೋಮಿತಿ: ಅಪ್ರೆಂಟಿಸ್ಶಿಪ್ ನಿಯಮದ ಪ್ರಕಾರ.
ವೇತನ: ಪದವೀಧರ ಅಪ್ರೆಂಟಿಸ್ -9,000 ಹಾಗೂ ಡಿಪ್ಲೊಮಾ ಅಪ್ರೆಂಟಿಸ್‌ಗೆ 8,000 ರೂ ಸ್ಟೈಫಂಡ್ ನೀಡಲಾಗುತ್ತದೆ.
ಆಯ್ಕೆ ಹೇಗೆ?: ಈ ಹುದ್ದೆಗಳ ಅವಧಿ ಒಂದು ವರ್ಷ. ಅಭ್ಯರ್ಥಿಗಳನ್ನು ಮೆರಿಟ್, ದಾಖಲಾತಿ ಪರಿಶೀಲನೆಯ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಕೆ ವಿಧಾನ: ರಾಷ್ಟ್ರೀಯ ವೆಬ್ ಪೋರ್ಟಲ್ ಎನ್ಎಟಿ ಮೂಲಕ ಅರ್ಜಿ ಸಲ್ಲಿಸಬೇಕು. nars.education.gov.in/ ಇಲ್ಲಿಗೆ ಭೇಟಿ ನೀಡಿ ನೋಂದಣಿ ನಡೆಸಬೇಕು. ಎರಡನೇ ಹಂತದ ಲಾಗಿನ್‌ನಲ್ಲಿ ಹೆಸ್ಕಾಂ ಅಪ್ರೆಂಟಿಸ್ ಹುದ್ದೆಗೆ ಅರ್ಜಿ ಸಲ್ಲಿಸಬೇಕು. ಇದಕ್ಕೆ ಯಾವುದೇ ಶುಲ್ಕವಿಲ್ಲ. ಅರ್ಜಿ ಸಲ್ಲಿಸಲು ಕಡೇಯ ದಿನ ಆಗಸ್ಟ್ 20. ಈ ಕುರಿತು ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ ಅಭ್ಯರ್ಥಿಗಳು hescom.karnataka.gov.in ಇಲ್ಲಿಗೆ ಭೇಟಿ ನೀಡಬಹುದು.

ವಿಜಯಪುರದಲ್ಲಿ ನರ್ಸ್ ಹುದ್ದೆಗಳ ನೇಮಕಾತಿ: ವಿಜಯಪುರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ನರ್ಸ್ ಮತ್ತು ಕಿರಿಯ ಪ್ರಯೋಗಾಲಯ ಸಹಾಯಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
ಸ್ಟಾಫ್ ನರ್ಸ್- 55 ಮತ್ತು ಕಿರಿಯ ಪ್ರಯೋಗಾಲಯ ತಂತ್ರಜ್ಞರು- 15 ಹುದ್ದೆಗಳಿವೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ನರ್ಸಿಂಗ್ನಲ್ಲಿ ಡಿಪ್ಲೊಮಾ ಅಥವಾ ಬಿಎಸ್ಸಿ ನರ್ಸಿಂಗ್ ಪೂರ್ಣಗೊಳಿಸಿರಬೇಕು. ಕಿರಿಯ ಪ್ರಯೋಗಾಲಯ ತಂತ್ರಜ್ಞರ ಹುದ್ದೆಗೆ ಅಭ್ಯರ್ಥಿಗಳು 10ನೇ ತರಗತಿಯೊಂದಿಗೆ ಲ್ಯಾಬ್ ಟೆಕ್ನಿಷಿಯನ್ನಲ್ಲಿ ಡಿಪ್ಲೊಮಾ ಪದವಿ ಹೊಂದಿರಬೇಕು.
ವಿಜಯಪುರದ ಜಿಲ್ಲಾಡಳಿತ ವೆಬ್ತಾಣದಲ್ಲಿ ಲಭ್ಯವಿರುವ ಅಧಿಕೃತ ಅಧಿಸೂಚನೆಯೊಂದಿಗೆ ನೀಡಲಾಗಿರುವ ನಿಗದಿತ ಅರ್ಜಿಗಳನ್ನು ಪಡೆದು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಕೆಳಗಿನ ವಿಳಾಸಕ್ಕೆ ಸಲ್ಲಿಸಬೇಕು.
ವಿಳಾಸ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯದ ಸಭಾ ಭವನ ವಿಜಯಪುರ.
ಈ ಕುರಿತು ಹೆಚ್ಚಿನ ಮಾಹಿತಿಗೆ vijayapura.nic.in ಇಲ್ಲಿಗೆ ಭೇಟಿ ನೀಡಿ.
ಇದನ್ನೂ ಓದಿ: ಐಟಿಐ ತೇರ್ಗಡೆಯಾದವರಿಗೆ ದುಬೈ ಶಿಪ್ ಯಾರ್ಡ್ನಲ್ಲಿ ತರಬೇತಿ: ಅರ್ಜಿ ಆಹ್ವಾನ