ಬೆಂಗಳೂರು: ಪಂಜಾಬ್ ನ್ಯಾಷನಲ್ ಬ್ಯಾಂಕ್ನಲ್ಲಿ (ಪಿಎನ್ಬಿ) ಖಾಲಿ ಇರುವ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಒಂದು ವರ್ಷದ ತರಬೇತಿ ಹುದ್ದೆ ಇದಾಗಿದೆ. ಗ್ರಾಮೀಣ, ನಗರ ಮತ್ತು ಮೆಟ್ರೋ ನಗರಿಗಳಲ್ಲಿ ನೇಮಕಾತಿ ನಡೆಯುತ್ತದೆ. ಪದವಿ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ವಿವರ: ಪಿಎನ್ಬಿಯಿಂದ 2,700 ಅಪ್ರೆಂಟಿಸ್ ಹುದ್ದೆಗಳನ್ನು ದೇಶಾದ್ಯಂತ ಭರ್ತಿ ಮಾಡಲಾಗುತ್ತಿದೆ. ಇದರನುಸಾರ ಕರ್ನಾಟಕದಲ್ಲಿ 32 ಹುದ್ದೆಗಳನ್ನು ನಿಗದಿ ಮಾಡಲಾಗಿದೆ.
ವಿದ್ಯಾರ್ಹತೆ: ಅಂಗೀಕೃತ ವಿಶ್ವವಿದ್ಯಾಲಯದಲ್ಲಿ ಪದವಿ ಪೂರ್ಣಗೊಳಿಸಿರಬೇಕು.
ವಯೋಮಿತಿ: ಕನಿಷ್ಠ 20 ವರ್ಷ ಮತ್ತು ಗರಿಷ್ಠ 28 ವರ್ಷ ಮೀರಿರಬಾರದು. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪ.ಜಾ, ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ ಹಾಗೂ ವಿಶೇಷಚೇತನ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಇದೆ.
ವೇತನ: ಆಯ್ಕೆಯಾದ ಗ್ರಾಮೀಣ/ಅರೆ ನಗರದ ಅಭ್ಯರ್ಥಿಗಳಿಗೆ ಮಾಸಿಕ 10 ಸಾವಿರ ರೂ, ನಗರ ಪ್ರದೇಶದ ಅಭ್ಯರ್ಥಿಗಳಿಗೆ 12 ಸಾವಿರ ರೂ ಮತ್ತು ಮೆಟ್ರೋ ಅಭ್ಯರ್ಥಿಗಳಿಗೆ 15 ಸಾವಿರ ರೂ ನಿಗದಿಪಡಿಸಲಾಗಿದೆ. ಇದರ ಹೊರತಾಗಿ ಬ್ಯಾಂಕಿನ ಯಾವುದೇ ಭತ್ಯೆಗಳಿಗೆ ಇವರು ಅರ್ಹರಾಗಿರುವುದಿಲ್ಲ.
ಅರ್ಜಿ ಸಲ್ಲಿಕೆ: ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ವಿಶೇಷಚೇತನ ಅಭ್ಯರ್ಥಿಗಳಿಗೆ 472 ರೂ. ಪ.ಜಾ, ಪ.ಪಂ ಮತ್ತು ಮಹಿಳಾ ಅಭ್ಯರ್ಥಿಗಳಿಗೆ 708 ರೂ ಹಾಗೂ ಸಾಮಾನ್ಯ, ಒಬಿಸಿ ಅಭ್ಯರ್ಥಿಗಳಿಗೆ 944 ರೂ ಅರ್ಜಿ ಶುಲ್ಕವಿದೆ.
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ದಾಖಲಾತಿ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ. ಜೂನ್ 30ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಿದ್ದು, ಜುಲೈ 14 ಕಡೇಯ ದಿನ. ಜುಲೈ 28ರಂದು ಪರೀಕ್ಷೆ ನಡೆಯಲಿದೆ. ಈ ಕುರಿತು ಹೆಚ್ಚಿನ ಮಾಹಿತಿಗೆ pnbindia.in ಇಲ್ಲಿಗೆ ಭೇಟಿ ನೀಡಿ.
ಇದನ್ನೂ ಓದಿ: 6128 ಕ್ಲರಿಕಲ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಐಬಿಪಿಎಸ್