ಬೆಂಗಳೂರು: ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಿಂದ ದೇಶಾದ್ಯಂತ 3000 ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಮರು ಅಧಿಸೂಚನೆ ಹೊರಡಿಸಲಾಗಿದೆ. ಅಪ್ರೆಂಟಿಸ್ಶಿಪ್ ಅವಧಿ ಒಂದು ವರ್ಷ ಆಗಿರಲಿದೆ. ಪದವೀಧರ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಕೆಗೆ ಅರ್ಹರಾಗಿದ್ದಾರೆ.
ಹುದ್ದೆ ವಿವರ: ದೇಶದ ವಿವಿಧ ಜಿಲ್ಲೆಗಳಿಗೆ ನಿರ್ದಿಷ್ಟ ಸ್ಥಾನಗಳನ್ನು ಹಂಚಿಕೆ ಮಾಡಲಾಗಿದೆ. ಅದರ ಅನುಸಾರ ಕರ್ನಾಟಕಕ್ಕೆ 110 ಹುದ್ದೆಗಳನ್ನು ನಿಗದಿಪಡಿಸಲಾಗಿದೆ.
ವಿದ್ಯಾರ್ಹತೆ: ಅಭ್ಯರ್ಥಿಗಳು ಅಧಿಕೃತ ವಿಶ್ವವಿದ್ಯಾಲಯದಿಂದ ಪದವಿಯನ್ನು ಪೂರ್ಣಗೊಳಿಸಿರಬೇಕು.
ವಯೋಮಿತಿ: ಅಭ್ಯರ್ಥಿಗಳು ಏಪ್ರಿಲ್ 1- 1996ರಿಂದ 31 ಮಾರ್ಚ್ 2004ರ ನಡುವೆ ಜನಿಸಿರಬೇಕು. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪ.ಜಾ, ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ, ವಿಕಲಚೇತನ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.
ಅರ್ಜಿ ಸಲ್ಲಿಕೆ: ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ವಿಕಲಚೇತನ ಅಭ್ಯರ್ಥಿಗಳಿಗೆ 400, ಪ.ಜಾ, ಪ.ಪಂ, ಮಹಿಳಾ ಅಭ್ಯರ್ಥಿಗಳಿಗೆ 600 ಮತ್ತು ಇತರ ಅಭ್ಯರ್ಥಿಗಳಿಗೆ 800 ರೂ ಅರ್ಜಿ ಶುಲ್ಕ ವಿಧಿಸಲಾಗಿದೆ.
ಆಯ್ಕೆ: ಆನ್ಲೈನ್ ಮೂಲಕ ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸಲಾಗುವುದು.
ಈ ಹುದ್ದೆಗೆ ಮರು ಅಧಿಸೂಚನೆ ಅನುಸಾರ ಅಭ್ಯರ್ಥಿಗಳು 6 ಜೂನ್ನಿಂದ ಅರ್ಜಿ ಸಲ್ಲಿಕೆ ಮಾಡಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆ ದಿನಾಂಕ ಜೂನ್ 17 ಆಗಿದೆ. ಈ ಹುದ್ದೆಗೆ ತಾತ್ಕಾಲಿಕ ಪರೀಕ್ಷೆ ಜೂನ್ 23ರಂದು ನಡೆಯಲಿದೆ.
ಈ ಹುದ್ದೆ ಕುರಿತು ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ ಅಭ್ಯರ್ಥಿಗಳು centralbankofindia.co.in ಭೇಟಿ ನೀಡಿ.
ಐಬಿಪಿಎಸ್ ನೇಮಕಾತಿ: ವಿವಿಧ ಪ್ರಾದೇಶಿಕ ಬ್ಯಾಂಕಿಂಗ್ ವಲಯದಲ್ಲಿನ (RRB) ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಇನ್ಸುಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ (IBPS) ಅಧಿಸೂಚನೆ ಹೊರಡಿಸಿದೆ. ಒಟ್ಟು 9,995 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಪದವಿ ವಿದ್ಯಾರ್ಹತೆ ಹೊಂದಿರುವ, ಕನಿಷ್ಠ 18 ಗರಿಷ್ಠ 40 ವರ್ಷ ವಯೋಮಾನದ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಮೀಸಲಾತಿ ಅಭ್ಯರ್ಥಿಗಳಿಗೆ 175 ರೂ. ಇತರ ಅಭ್ಯರ್ಥಿಗಳಿಗೆ 850 ರೂ ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. ಎರಡು ಹಂತದ ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು. ಜೂನ್ 7ರಿಂದ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆ ದಿನಾಂಕ ಜುಲೈ 27 ಆಗಿದೆ. ಅಧಿಕೃತ ಅಧಿಸೂಚನೆಗೆ ಅಭ್ಯರ್ಥಿಗಳು ibps.in ಇಲ್ಲಿಗೆ ಭೇಟಿ ನೀಡಿ.
ಇದನ್ನೂ ಓದಿ: ಅರ್ಹತೆ ಇದ್ದು ಕಷ್ಟಪಟ್ಟರೂ ನಿಮಿಷ್ಟದ ಕೆಲಸ ಸಿಗುತ್ತಿಲ್ವಾ; ಹಾಗಾದರೆ ಈ ಐದು ತಪ್ಪುಗಳನ್ನ ಸರಿ ಮಾಡಿಕೊಳ್ಳಿ