ಬೆಂಗಳೂರು: ಬಾಗಲಕೋಟೆ ಜಿಲ್ಲಾ ಪಂಚಾಯತ್ನಿಂದ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಜಿಲ್ಲೆಯ ಗ್ರಾಮ ಪಂಚಾಯತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳಲ್ಲಿ ಭರ್ತಿ ಪ್ರಕ್ರಿಯೆ ನಡೆಯಲಿದೆ.
ಹುದ್ದೆಗಳ ವಿವರ: ಒಟ್ಟು ನಾಲ್ಕು ಹುದ್ದೆಗಳು ಈ ಕೆಳಗಿನ ಗ್ರಾಮ ಪಂಚಾಯತ್ಗಳಲ್ಲಿ ಖಾಲಿ ಇದೆ. ಬಾದಾಮಿಯ ಹಾಲಿಗೇರಿಯಲ್ಲಿ 1, ಬಾಗಲಕೋಟೆಯ ದೇವನಾಳ ಗ್ರಾಮ ಪಂಚಾಯತ್ನಲ್ಲಿ ಒಂದು, ಹುನಗುಂದದ ಹಾವರಗಿಯಲ್ಲಿ ಒಂದು ಹಾಗೂ ಜಮಖಂಡಿಯ ಕಂಕಣವಾಡಿ ಗ್ರಾಮ ಪಂಚಾಯತಿಯಲ್ಲಿ ಒಂದು ಹುದ್ದೆ ಇದೆ.
ವಿದ್ಯಾರ್ಹತೆ: ಪಿಯುಸಿ. ಸರ್ಟಿಫಿಕೇಷನ್ ಕೋರ್ಸ್ ಇನ್ ಲೈಬ್ರರಿ ಸೈನ್ಸ್ ಪ್ರಮಾಣಪತ್ರ ಪಡೆದಿರಬೇಕು. ಕನಿಷ್ಠ 3 ತಿಂಗಳ ಕಂಪ್ಯೂಟರ್ ಕೋರ್ಸ್ ಉತ್ತೀರ್ಣರಾಗಿರಬೇಕು. ಸರ್ಟಿಫಿಕೇಷನ್ ಕೋರ್ಸ್ ಇನ್ ಲೈಬ್ರರಿ ಸೈನ್ಸ್ ಪದವಿ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸದೇ ಇದ್ದಲ್ಲಿ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳನ್ನು ಪರಿಗಣಿಸಲಾಗುತ್ತದೆ.
ವಿಶೇಷ ಸೂಚನೆ: ಅಭ್ಯರ್ಥಿಗಳು ಸಂಬಂಧಪಟ್ಟ ಗ್ರಾಮ ಪಂಚಾಯತ್ ವ್ಯಾಪ್ತಿಯ ನಿವಾಸಿಯಾಗಿರಬೇಕು.
ವೇತನ: ಗ್ರಾಮ ಪಂಚಾಯತ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಮೇಲ್ವಿಚಾರಕರಿಗೆ ಸರ್ಕಾರ ನಿಗದಿಸಿರುವ ಗೌರವ ಸಂಭಾವನೆ.
ವಯೋಮಿತಿ: ಕನಿಷ್ಠ 18 ವರ್ಷ. ಗರಿಷ್ಠ 35 ವರ್ಷ ವಯೋಮಿತಿ. ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪ.ಜಾತಿ, ಪ.ಪಂ ಮತ್ತು ಪ್ರವರ್ಗ 1 ಅಭ್ಯರ್ಥಿಗಳಿಗೆ 5 ವರ್ಷದವರೆಗೆ ವಯೋಮಿತಿ ಸಡಿಲಿಕೆ ಇದೆ.
ಆಯ್ಕೆ: ಮೆರಿಟ್ ಆಧಾರದ ಮೇಲೆ ದಾಖಲಾತಿ ಪರಿಶೀಲನೆ ನಡೆಸಿ ಬಳಿಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಕೆ: ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಸಾಮಾನ್ಯ ಅಭ್ಯರ್ಥಿಗಳಿಗೆ 500 ರೂ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 300 ರೂ ಹಾಗೂ ಪ.ಜಾ, ಪ.ಪಂ, ಪ್ರವರ್ಗ 1 ಅಭ್ಯರ್ಥಿಗಳಿಗೆ 200 ರೂ. ವಿಶೇಷಚೇತನ ಅಭ್ಯರ್ಥಿಗಳಿಗೆ 100 ರೂ ಅರ್ಜಿ ಶುಲ್ಕವಿದೆ.
ಅರ್ಜಿ ಸಲ್ಲಿಕೆಗೆ ಕಡೇಯ ದಿನ ಸೆಪ್ಟೆಂಬರ್ 6. ಈ ಕುರಿತ ಹೆಚ್ಚಿನ ಮಾಹಿತಿಗೆ bagalkot.nic.in ಇಲ್ಲಿಗೆ ಭೇಟಿ ನೀಡಿ.
ಇದನ್ನೂ ಓದಿ: ಕೊಂಕಣ್ ರೈಲ್ವೆ ನೇಮಕಾತಿ: ಸ್ಟೇಷನ್ ಮಾಸ್ಟರ್ ಸೇರಿದಂತೆ ಹಲವು ಹುದ್ದೆಗಳು