ಬೆಂಗಳೂರು: ಬಳ್ಳಾರಿ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಬೆರಳಚ್ಚುಗಾರ, ಬೆರಳಚ್ಚು ನಕಲುಗಾರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 21 ಹುದ್ದೆಗಳ ನೇಮಕಾತಿ ನಡೆಯಲಿದೆ. ಈ ಹುದ್ದೆ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
ಹುದ್ದೆ ವಿವರ: ಒಟ್ಟು 21 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಟೈಪಿಸ್ಟ್ - 13
ಟೈಪಿಸ್ಟ್- ಕಾಪಿಸ್ಟ್ - 8
ವಿದ್ಯಾರ್ಹತೆ: ಹುದ್ದೆಗಳಿಗೆ ಪಿಯುಸಿ ಅಥವಾ ಕಮರ್ಷಿಯಲ್ ಪ್ರಾಕ್ಟಿಸ್ನಲ್ಲಿ ಡಿಪ್ಲೊಮಾ ಪದವಿಯಲ್ಲಿ ಉತ್ತೀರ್ಣರಾಗಿರಬೇಕು. ಜೊತೆಗೆ ಕರ್ನಾಟಕ ಫ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಿಂದ ನಡೆಸುವ ಕನ್ನಡ ಮತ್ತು ಇಂಗ್ಲಿಷ್ ಟೈಪಿಂಗ್ ಪರೀಕ್ಷೆಯಲ್ಲಿ ಹಿರಿಯ ದರ್ಜೆಯಲ್ಲಿ ಉತ್ತೀರ್ಣರಾಗಿರಬೇಕು. ಜೊತೆಗೆ ಸಾಮಾನ್ಯ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
ವಯೋಮಿತಿ: ಈ ಹುದ್ದೆಗೆ ಅಭ್ಯರ್ಥಿಗಳು ಕನಿಷ್ಠ 18, ಗರಿಷ್ಠ 35 ವರ್ಷ ವಯೋಮಿತಿ ಮೀರಿರಬಾರದು. ಪ.ಜಾ, ಪ.ಪಂ, ಪ್ರವರ್ಗ 1 ಅಭ್ಯರ್ಥಿಗಳಿಗೆ 5 ವರ್ಷ, ಪ್ರವರ್ಗ 2ಎ, 2ಬಿ, 3ಎ ಮತ್ತು 3 ಬಿ ಅಭ್ಯರ್ಥಿಗಳಿಗೆ 3 ಅಭ್ಯರ್ಥಿಗಳು. ವಿಕಲಚೇತನ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.
ಅರ್ಜಿ ಶುಲ್ಕ: ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಶುಲ್ಕ ಸಲ್ಲಿಸಬೇಕು. ಪ.ಜಾ, ಪ.ಪಂ, ವಿಕಲ ಚೇತನ ಅಭ್ಯರ್ಥಿಗಳಿಗೆ 100 ರೂ, ಸಾಮಾನ್ಯ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 250 ರೂ ಅರ್ಜಿ ಶುಲ್ಕ ಪಾವತಿ ಮಾಡಬೇಕು.
ಆಯ್ಕೆ ಪ್ರಕ್ರಿಯೆ: ಟೈಪಿಂಗ್ ಪರೀಕ್ಷೆ, ಕೌಶಲ್ಯ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು. ಈ ಹುದ್ದೆಗೆ ಅಭ್ಯರ್ಥಿಗಳಿಗೆ ಏಪ್ರಿಲ್ 6 ಅರ್ಜಿ ಸಲ್ಲಿಕೆ ಮಾಡಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೇಯ ದಿನಾಂಕ ಮೇ 6 ಆಗಿದೆ. ಈ ಹುದ್ದೆ ಕುರಿತು ಸಂಪೂರ್ಣ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆ ballari.dcourts.gov.in ಭೇಟಿ ನೀಡಿ.
ಅರ್ಜಿ ಸಲ್ಲಿಕೆಗೆ ಇನ್ನೆರಡೇ ದಿನ ಅವಕಾಶ: ಬೆಳಗಾವಿ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ 41 ಹುದ್ದೆಗಳ ಭರ್ತಿಗೆ ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಏಪ್ರಿಲ್ 14 ಆಗಿದೆ. ಸ್ಟೆನೋಗ್ರಾಫರ್ 5, ಟೈಪಿಸ್ಟ್- 1, ಪ್ರೊಸೆಸ್ ಸರ್ವರ್ -2, ಜವಾನ- 33 ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಈ ಹುದ್ದೆ ಕುರಿತು ವಿವರ, ಅರ್ಜಿ ಸಲ್ಲಿಕೆ ಸೇರಿದಂತೆ ಸಂಪೂರ್ಣ ಮಾಹಿತಿಗೆ ಕೆಳಗಿನ ಲಿಂಕ್ ಕ್ಲಿಕ್ ಮಾಡಿ.
ಬೆಳಗಾವಿ ಜಿಲ್ಲಾ ನ್ಯಾಯಾಲಯದಲ್ಲಿ ನೇಮಕಾತಿ; ಟೈಪಿಸ್ಟ್, ಜವಾನ ಹುದ್ದೆಗೆ ಅರ್ಜಿ ಆಹ್ವಾನ