ETV Bharat / education-and-career

ರಾಜ್ಯ ಸಹಕಾರಿ ಅಪೆಕ್ಸ್​ ಬ್ಯಾಂಕ್ ನೇಮಕಾತಿ: 93 ಬ್ಯಾಂಕ್​ ಸಹಾಯಕರ ಹುದ್ದೆಗೆ ಅರ್ಜಿ ಆಹ್ವಾನ

author img

By ETV Bharat Karnataka Team

Published : Mar 15, 2024, 5:04 PM IST

ಯಾವುದೇ ವಿಷಯದಲ್ಲಿ ಪದವಿ ಆಗಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಕೆಗೆ ಮಾಡಬಹುದು.

Bank Assistant recruitment by Karnataka State Co Operative Apex Bank

ಬೆಂಗಳೂರು: ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್​ ಬ್ಯಾಂಕ್​ ನಿಯಮಿತದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಪ್ರಕಟಿಸಲಾಗಿದೆ. 93 ಬ್ಯಾಂಕ್​ ಸಹಾಯಕರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆ ಅರ್ಜಿ ಸಲ್ಲಿಕೆ, ವೇತನ ಸೇರಿದಂತೆ ಸಂಪೂರ್ಣ ಮಾಹಿತಿ ಇಲ್ಲಿದೆ.

ಅಧಿಸೂಚನೆ
ಅಧಿಸೂಚನೆ

ಹುದ್ದೆ ವಿವರ: ಒಟ್ಟು 93 ಬ್ಯಾಂಕ್​ ಸಹಾಯಕರ ಹುದ್ದೆಗಳ ಭರ್ತಿ ನಡೆಯಲಿದ್ದು, ಇದರಲ್ಲಿ 8 ಹುದ್ದೆಗಳು ಕಲ್ಯಾಣ ಕರ್ನಾಟಕ ಅಭ್ಯರ್ಥಿಗಳಿಗೆ ಮೀಸಲಾಗಿದೆ.

ವಿದ್ಯಾರ್ಹತೆ: ಅಭ್ಯರ್ಥಿಗಳು ಯಾವುದೇ ವಿಷಯದಲ್ಲಿ ಪದವಿ ಪೂರ್ಣಗೊಳಿಸಿರಬೇಕು. ಕನ್ನಡವನ್ನು ಸ್ಪಷ್ಟವಾಗಿ ಓದುವ, ಬರೆಯುವ, ಮಾತನಾಡುವ, ಅರ್ಥಮಾಡಿಕೊಳ್ಳುವ ಸಾಮರ್ಥ್ಯ ಹೊಂದಿರಬೇಕು. ಸಾಮಾನ್ಯ ಕಂಪ್ಯೂಟರ್​ ಜ್ಞಾನವನ್ನು ಹೊಂದಿರಬೇಕು.

ಸಹಕಾರ ವಿಷಯದಲ್ಲಿ ವಿದ್ಯಾರ್ಹತೆ ಮತ್ತು ಅನುಭವ ಹೊಂದಿರುವವರಿಗೆ ಆದ್ಯತೆ ನೀಡಲಾಗುವುದು.

ವಯೋಮಿತಿ: ಈ ಹುದ್ದೆಗಳಿಗೆ ಕನಿಷ್ಠ 18, ಗರಿಷ್ಠ 35 ವರ್ಷ. ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 3ವರ್ಷ ಮತ್ತು ಪ.ಜಾ, ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.

ವೇತನ: 28,425 -87,125 ರೂ ಮಾಸಿಕ

ಅರ್ಜಿ ಸಲ್ಲಿಕೆ: ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಕೆ ಮಾಡಲಾಗಿದೆ. ಸಾಮಾನ್ಯ ಮತ್ತು ಹಿಂದುಳಿದ ಅಭ್ಯರ್ಥಿಗಳಿಗೆ 1000 ಜೊತೆಗೆ ಜಿಎಸ್​ಟಿ ಮತ್ತು ಪ. ಜಾ, ಪ. ಪಂ ಅಭ್ಯರ್ಥಿಗಳಿಗೆ 500 ರೂ ಜೊತೆಗೆ ಜಿಎಸ್​ಟಿ ಅರ್ಜಿ ಶುಲ್ಕ ವಿಧಿಸಲಾಗುವುದು.

ಆಯ್ಕೆ ವಿಧಾನ: ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ಮತ್ತು ಮೌಖಿಕ ಸಂದರ್ಶನ ಮೂಲಕ ಆಯ್ಕೆ

ಈ ಹುದ್ದೆಗೆ ಮಾರ್ಚ್​​ 7ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೇಯ ದಿನ ಮೇ 6 ಆಗಿದೆ.

ಈ ಹುದ್ದೆ ಕುರಿತು ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ ಅಭ್ಯರ್ಥಿಗಳು karnatakaapex.com ಇಲ್ಲಿಗೆ ಭೇಟಿ ನೀಡಿದ್ದಾರೆ.

1930 ನರ್ಸಿಂಗ್​ ಹುದ್ದೆಗೆ ಯುಪಿಎಸ್​ಸಿ ಅಧಿಸೂಚನೆ: ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದ ಉದ್ಯೋಗಿ ರಾಜ್ಯ ವಿಮಾ ನಿಗಮದಲ್ಲಿ ಖಾಲಿ ಇರುವ 1930 ನರ್ಸಿಂಗ್​​ ಹುದ್ದೆಗಳ ಭರ್ತಿಗೆ ಕೇಂದ್ರ ಲೋಕಸೇವಾ ಆಯೋಗ ಅಧಿಸೂಚನೆ ಪ್ರಕಟಿಸಿದೆ.

ಡಿಪ್ಲೊಮಾ, ಬಿಎಸ್ಸಿ ನರ್ಸಿಂಗ್​ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಗರಿಷ್ಠ ವಯೋಮಿತಿ 30 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3, ಪ.ಜಾ, ಪ.ಪಂ ಅಭ್ಯರ್ಥಿಗಳಿಗೆ 5 ಮತ್ತು ವಿಕಲಚೇತನ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ. ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಪ.ಜಾ, ಪ. ಪಂ, ಮಹಿಳಾ ಮತ್ತು ವಿಕಲಚೇತನ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದ್ದು, ಇತರೆ ಅಭ್ಯರ್ಥಿಗಳಿಗೆ 25 ರೂ ಅರ್ಜಿ ಶುಲ್ಕ ವಿಧಿಸಲಾಗಿದೆ.

ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಆಯ್ಕೆ ಈ ಹುದ್ದೆಗೆ ಮಾರ್ಚ್​ 7 ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಅರ್ಜಿ ಸಲ್ಲಿಕೆ ಕಡೆಯ ದಿನಾಂಕ ಮಾರ್ಚ್​ 27 ಆಗಿದೆ. ಈ ಹುದ್ದೆ ಕುರಿತು ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ ಅಭ್ಯರ್ಥಿಗಳು upsconline.nic.in. ಇಲ್ಲಿಗೆ ಭೇಟಿ ನೀಡಬಹುದು

ಇದನ್ನೂ ಓದಿ: ಇನ್ನೂ ಇದೇ ಅವಕಾಶ, ಜಲಮಂಡಳಿ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.