ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲಾ ನ್ಯಾಯಾಲಯದಲ್ಲಿ ವಯೋಮಿತಿ ಸಡಿಲಿಕೆಯೊಂದಿಗೆ ಟೈಪಿಸ್ಟ್ ಮತ್ತು ಜವಾನ ಹುದ್ದೆಗಳ ಭರ್ತಿಗೆ ಪರಿಷ್ಕೃತ ಅಧಿಸೂಚನೆ ಪ್ರಕಟಿಸಲಾಗಿದೆ. ಮೂರು ವರ್ಷದ ವಯೋಮಿತಿ ಸಡಿಲಿಕೆಯೊಂದಿಗೆ ನೇಮಕಾತಿ ನಡೆಯಲಿದೆ. ಒಟ್ಟು 58 ಹುದ್ದೆಗಳಿವೆ.
ಹುದ್ದೆಗಳ ವಿವರ: ಟೈಪಿಸ್ಟ್- 30, ಜವಾನ- 30 ಹುದ್ದೆಗಳು.
ಅರ್ಹತೆ: ಟೈಪಿಸ್ಟ್ ಹುದ್ದೆಗೆ ಅರ್ಜಿ ಸಲ್ಲಿಸುವ ಆಕಾಂಕ್ಷಿಗಳು ಪಿಯುಸಿ ಅಥವಾ ಡಿಪ್ಲೊಮಾ ಇನ್ ಕಮರ್ಷಿಯಲ್ ಪ್ರಾಕ್ಟಿಸ್ನಲ್ಲಿ ಉತ್ತೀರ್ಣರಾಗಿರಬೇಕು. ಕರ್ನಾಟಕ ಫ್ರೌಡ ಶಿಕ್ಷಣ ಪರೀಕ್ಷಾ ಮಂಡಳಿಯಿಂದ ನಡೆಸಲಾಗುವ ಟೈಪಿಂಗ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಜವಾನ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10ನೇ ತರಗತಿ ಪೂರ್ಣಗೊಳಿಸಿರಬೇಕು.
ವಯೋಮಿತಿ: ಕನಿಷ್ಠ 18 ವರ್ಷ ಮತ್ತು ಗರಿಷ್ಠ 38 ವರ್ಷ. ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ 1 ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಸಲಾಗಿದೆ.
ವೇತನ: ಜವಾನ ಹುದ್ದೆಗೆ 17,000-28,950 ರೂ., ಟೈಪಿಸ್ಟ್ ಹುದ್ದೆಗೆ 21,400-42,000 ರೂ. ಮಾಸಿಕ ವೇತನ.
ಅರ್ಜಿ ಸಲ್ಲಿಕೆ ಮತ್ತು ಶುಲ್ಕ: ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ವಿಶೇಷಚೇತನ ಹಾಗೂ ಪ್ರವರ್ಗ 1 ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ. ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 100 ರೂ. ಅರ್ಜಿ ಶುಲ್ಕ ಮತ್ತು ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 200 ರೂ. ಅರ್ಜಿ ಶುಲ್ಕವಿದೆ.
ಈ ಹುದ್ದೆಗೆ ಡಿಸೆಂಬರ್ 23ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಅರ್ಜಿ ಸಲ್ಲಿಕೆ ಮತ್ತು ಅರ್ಜಿ ಶುಲ್ಕ ಪಾವತಿಗೆ ಕಡೇಯ ದಿನಾಂಕ ಜನವರಿ 6. ಅಧಿಕೃತ ಅಧಿಸೂಚನೆ ಸೇರಿದಂತೆ ಇನ್ನಿತರ ಮಾಹಿತಿಗೆ bengalururural.dcourts.gov.in ಇಲ್ಲಿಗೆ ಭೇಟಿ ನೀಡಿ.
ಇದನ್ನೂ ಓದಿ: ದಕ್ಷಿಣ ಮಧ್ಯ ರೈಲ್ವೆಯಲ್ಲಿ 4,232 ಹುದ್ದೆಗಳ ನೇಮಕಾತಿಗೆ ಅರ್ಜಿ; 10ನೇ ತರಗತಿ ಆದವರಿಗೆ ಅವಕಾಶ