ಬೆಂಗಳೂರು: ಬೀದರ್ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಮಿಷನ್ ಶಕ್ತಿ ಯೋಜನೆಯಡಿಯಲ್ಲಿ ಜಿಲ್ಲಾ ಮಹಿಳಾ ಸಬಲೀಕರಣ ಘಟಕದಲ್ಲಿ ಈ ಹುದ್ದೆಗಳನ್ನು ಸೃಷ್ಟಿಸಲಾಗಿದ್ದು, ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಹುದ್ದೆ ವಿವರ: ಒಟ್ಟು 2 ಹುದ್ದೆಗಳ ಭರ್ತಿ ನಡೆಯಲಿದೆ.
- ಜಿಲ್ಲಾ ಯೋಜನಾ ಸಂಯೋಜಕರು - 1
- ಆರ್ಥಿಕ ಜ್ಞಾನ ಮತ್ತು ಅಕೌಂಟೆಟ್ ಸ್ಪೆಷಾಲಿಸ್ಟ್ -1
ವಿದ್ಯಾರ್ಹತೆ: ಜಿಲ್ಲಾ ಯೋಜನಾ ಸಂಯೋಜಕರ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಮಾಜ ವಿಜ್ಞಾನ, ಲೈಫ್ ಸೈನ್ಸ್, ಮೆಡಿಸಿನ್, ಸೋಷಿಯಲ್ ವರ್ಕ್, ಗ್ರಾಮೀಣ ನಿರ್ವಹಣೆಯಲ್ಲಿ ಪದವಿಯನ್ನು ಹೊಂದಿರಬೇಕು.
ಆರ್ಥಿಕ ಜ್ಞಾನ ಮತ್ತು ಅಕೌಂಟೆಟ್ ಸ್ಪೆಷಲಿಸ್ಟ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬ್ಯಾಂಕಿಂಗ್, ಅರ್ಥಶಾಸ್ತ್ರದಲ್ಲಿ ಪದವಿಯನ್ನು ಹೊಂದಿರಬೇಕು.
ವಿಶೇಷ ಸೂಚನೆ: ಮೇಲ್ಕಂಡ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಈ ಕ್ಷೇತ್ರದಲ್ಲಿ ಸರ್ಕಾರ ಅಥವಾ ಸರ್ಕಾರೇತರ ಸಂಸ್ಥೆಗಳಲ್ಲಿ ಮೂರು ವರ್ಷ ಕೆಲಸದ ಅನುಭವ ಹೊಂದಿರಬೇಕು.
ಈ ಹುದ್ದೆಗಳನ್ನು ತಾತ್ಕಾಲಿಕವಾಗಿ 11 ತಿಂಗಳ ಗುತ್ತಿಗೆ ಅವಧಿಗೆ ನೇಮಕಾತಿ ಮಾಡಲಾಗುವುದು. ಅಭ್ಯರ್ಥಿಗಳ ಕಾರ್ಯಕ್ಷಮತೆ ಆಧಾರದ ಮೇಲೆ ಈ ಹುದ್ದೆ ವಿಸ್ತರಣೆ ನಡೆಯಲಿದೆ. ಇದು ಕೇಂದ್ರದ ಯೋಜನೆಯಾಗಿರುವ ಹಿನ್ನೆಲೆ ಅಭ್ಯರ್ಥಿಗಳು ಕನ್ನಡ ಮತ್ತು ಕಂಪ್ಯೂಟರ್ ಜ್ಞಾನವನ್ನು ಹೊಂದಿರುವುದು ಅಗತ್ಯವಾಗಿದೆ.
ಆಯ್ಕೆ ಪ್ರಕ್ರಿಯೆ: ಈ ಹುದ್ದೆಗೆ ಅಭ್ಯರ್ಥಿಗಳನ್ನು ಕಂಪ್ಯೂಟರ್, ಕೌಶಲ್ಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಕೆ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬೀದರ್ ಜಿಲ್ಲಾ ವೆಬ್ಸೈಟ್ನಲ್ಲಿ ಲಭ್ಯವಿರುವ ನಿಗದಿತ ಅರ್ಜಿಯನ್ನು ಪಡೆಯಬೇಕು. ಅರ್ಜಿ ಭರ್ತಿ ಮಾಡಿ ಇದರ ಜೊತೆಗೆ ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿದ ದಾಖಲಾತಿಯೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಅಂತಿಮ ದಿನದೊಳಗೆ ಅರ್ಜಿಯನ್ನು ಸಲ್ಲಿಸಬೇಕು.
ಉಪ ನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮೈಲೂರು ರೋಡ್, ಬೀದರ್.
ಈ ಹುದ್ದೆಗೆ ಫೆಬ್ರವರಿ 9ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಮಾರ್ಚ್ 5 ಆಗಿದೆ.
ಈ ಹುದ್ದೆ ಕುರಿತ ಸಂಪೂರ್ಣ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆ ಸೇರಿದಂತೆ ಇನ್ನಿತರ ಮಾಹಿತಿಗೆ bidar.nic.in ಭೇಟಿ ನೀಡಬಹುದು.
ಇದನ್ನೂ ಓದಿ: ಇಸ್ರೋ ನೇಮಕಾತಿ; ಡ್ರೈವರ್ ಡ್ರಾಫ್ಟ್ಮಾನ್ ಸೇರಿದಂತೆ 224 ಹುದ್ದೆಗಳಿಗೆ ಅರ್ಜಿ ಆಹ್ವಾನ