ಬೆಂಗಳೂರು: ಗಡಿ ಭದ್ರತಾ ಪಡೆಯಲ್ಲಿರುವ ಖಾಲಿ ಇರುವ ಗ್ರೂಪ್ ಬಿ ಮತ್ತು ಗ್ರೂಪ್ ಸಿ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಒಟ್ಟು 141 ಹುದ್ದೆಗಳ ನೇಮಕಾತಿ ನಡೆಸಲಿದೆ. ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆ ವಿವರ: ಗ್ರೂಪ್ ಬಿ ಹುದ್ದೆಗಳಲ್ಲಿ ಪ್ಯಾರಾ ಮೆಡಿಕಲ್ ಸಿಬ್ಬಂದಿಗಳ ನೇಮಕಾತಿ ನಡೆಯಲಿದೆ. ಗ್ರೂಪ್ ಸಿ ಹುದ್ದೆಗಳಲ್ಲಿ ವಿವಿಧ ವಿಭಾಗದಲ್ಲಿ ಕಾನ್ಸ್ ಟೇಬಲ್ ಹುದ್ದೆಗಳ ಭರ್ತಿ ನಡೆಯಲಿದೆ.
ವಿದ್ಯಾರ್ಹತೆ: ಅಭ್ಯರ್ಥಿಗಳು ಹುದ್ದೆಗಳಿಗೆ ಅಗತ್ಯವಾದ ಶೈಕ್ಷಣಿಕ ಅರ್ಹತೆಯನ್ನು ಹೊಂದಿರಬೇಕು.
ವಯೋಮಿತಿ: ಗ್ರೂಪ್ ಬಿ ಹುದ್ದೆಗಳಿಗೆ ಅಭ್ಯರ್ಥಿಗಳು 18 ರಿಂದ 30 ವರ್ಷ ವಯೋಮಾನ ಮೀರಿರಬಾರದು. ಗ್ರೂಪ್ ಸಿ ಕಾನ್ಸ್ಟೇಬಲ್ ಹುದ್ದೆಗೆ ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 25 ಆಗಿದೆ.
ಅರ್ಜಿ ಸಲ್ಲಿಕೆ: ಈ ಹುದ್ದೆಗಳಿಗೆ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ನಡೆಸಲಾಗುವುದು. ಏಪ್ರಿಲ್ 18ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಜೂನ್ 17 ಆಗಿದೆ.
ಈ ಹುದ್ದೆ ಕುರಿತ ಅಧಿಕೃತ ಅಧಿಸೂಚನೆ ಮತ್ತು ಸಂಪೂರ್ಣ ಮಾಹಿತಿಗೆ bsf.nic.in ಭೇಟಿ ನೀಡಿ.
ಕೊಂಕಣ್ ರೈಲ್ವೆಯಲ್ಲಿ ತಾಂತ್ರಿಕ ಸಹಾಯಕರ ಹುದ್ದೆ;
ಕೊಂಕಣ್ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ನಲ್ಲಿ ಖಾಲಿ ಇರುವ 42 ತಾಂತ್ರಿಕ ಸಹಾಯಕ ಮತ್ತು ಸಹಾಯಕ ತಾಂತ್ರಿಕ ಸಹಾಯಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
ಎಲೆಕ್ಟ್ರಿಕಲ್, ಎಲೆಕ್ಟ್ರಾನಿಕ್ಸ್, ಮೆಕಾನಿಕಲ್ ಇಂಜಿನಿಯರಿಂಗ್ನಲ್ಲಿ ಡಿಪ್ಲೊಮಾ, ಐಟಿಐ ಪದವಿಯನ್ನು ಪಡೆದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 45 ವರ್ಷ ಆಗಿದೆ. ಒಬಿಸಿ ಅಭ್ಯರ್ಥಿಗಳಿಗೆ 3 ಮತ್ತು ಪ.ಜಾ, ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ. ಈ ಹುದ್ದೆಗೆ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು.
ವಾಕ್ ಇನ್ ನಡೆಯುವ ದಿನ: ಜೂನ್ 21ರಂದು ಈ ಹುದ್ದೆಗೆ ನೇರ ಸಂದರ್ಶನ ಈ ಕೆಳಗಿನ ವಿಳಾಸದಲ್ಲಿ ನಡೆಯಲಿದೆ.
ಎಕ್ಸಿಕ್ಯೂಟಿವ್ ಕ್ಲಬ್, ಕೊಂಕಣ್ ರೈಲ್ ವಿಹಾರ್, ಕೊಂಕಲ್ ರೈಲ್ ಕಾರ್ಪೊರೇಷನ್ ಲಿಮಿಟೆಡ್, ಸೀವುಡ್ಸ್ ರೈಲ್ವೆ ಸ್ಟೇಷನ್, ಸೆಕ್ಟರ್ 40, ಸೀವುಡ್ಸ್, (ಪಶ್ಚಿಮ), ನವಿ ಮುಂಬೈ
ಈ ಹುದ್ದೆ ಕುರಿತ ಹೆಚ್ಚಿನ ಮಾಹಿತಿಗೆ konkanrailway.com ಭೇಟಿ ನೀಡಿ.
ಇದನ್ನೂ ಓದಿ: ಲೈಬ್ರರಿ ಸೈನ್ಸ್ ಪದವಿ ಆದವರಿಗೆ ಬೆಂಗಳೂರಿನ ಐಐಎಸ್ಸಿಯಲ್ಲಿದೆ ಉದ್ಯೋಗಾವಕಾಶ