ಬೆಂಗಳೂರು: ಚಿಕ್ಕಬಳ್ಳಾಪುರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ 6ನೇ ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಒಟ್ಟು 285 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ.
ಹುದ್ದೆ ವಿವರ:
- ಅಂಗನವಾಡಿ ಕಾರ್ಯಕರ್ತರು - 54
- ಮಿನಿ ಅಂಗನವಾಡಿ ಕಾರ್ಯಕರ್ತೆಯರು - 14
- ಅಂಗನವಾಡಿ ಸಹಾಯಕಿರು - 217
ಯಾವ ತಾಲೂಕಿನಲ್ಲಿ ಎಷ್ಟು ಎಷ್ಟು ಹುದ್ದೆ
- ಬಾಗೇಪಲ್ಲಿ: ಅಂಗನಾಡಿ ಕಾರ್ಯಕರ್ತೆಯರು - 8, ಮಿನಿ ಕಾರ್ಯಕರ್ತೆಯರು - 3, ಸಹಾಯಕಿಯರು - 24
- ಚಿಕ್ಕಬಳ್ಳಾಪುರ ತಾಲೂಕು: ಕಾರ್ಯಕರ್ತೆಯರು - 8, ಮಿನಿ ಕಾರ್ಯಕರ್ತೆಯರು - 2, ಸಹಾಯಕಿಯರು - 43.
- ಚಿಂತಾಮಣಿ ತಾಲೂಕು: ಕಾರ್ಯಕರ್ತೆಯರು - 11, ಮಿನಿ ಕಾರ್ಯಕರ್ತೆಯರು- 22, ಸಹಾಯಕಿಯರು - 2.
- ಗುಡಿಬಂಡೆ ತಾಲೂಕು: ಕಾರ್ಯಕರ್ತೆಯರು - 2, ಸಹಾಯಕಿಯರು - 12,
- ಶಿಡ್ಲಘಟ್ಟ ತಾಲೂಕು: ಕಾರ್ಯಕರ್ತೆಯರು - 3, ಮಿನಿ ಕಾರ್ಯಕರ್ತೆಯರು - 1, ಸಹಾಯಕಿಯರು 39.
ವಿದ್ಯಾರ್ಹತೆ: ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ ಅಭ್ಯರ್ಥಿಗಳು ಪಿಯುಸಿ ವ್ಯಾಸಂಗ ಪೂರ್ಣಗೊಳಿಸಿರಬೇಕು.
ಅಂಗನಾಡಿ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್ಎಸ್ಎಲ್ಸಿ ಪೂರ್ಣಗೊಳಿಸಿರಬೇಕು.
ವಯೋಮಿತಿ: ಅಭ್ಯರ್ಥಿಗಳು ಕನಿಷ್ಠ 19 ರಿಂದ 35 ವರ್ಷದ ವಯೋಮಿತಿ ಹೊಂದಿರಬೇಕು. ವಿಕಲಚೇತನ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.
ಈ ಹುದ್ದೆಗೆ ಅರ್ಜಿ ಸಲ್ಲಿಕೆ ಮಾಡುವ ಮುನ್ನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಲಭ್ಯವಿರುವ ಅಧಿಸೂಚನೆ ಪರಿಶೀಲಿಸಿ ಆನ್ಲೈನ್ ಮೂಲಕ ಅರ್ಜಿ ಭರ್ತಿಗೆ ಮುಂದಾಗುವಂತೆ ಅಭ್ಯರ್ಥಿಗಳಿಗೆ ತಿಳಿಸಲಾಗಿದೆ. ಈ ಹುದ್ದೆಗೆ ಅಭ್ಯರ್ಥಿಗಳನ್ನು ಮೆರಿಟ್ ಪಟ್ಟಿ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಈ ಹುದ್ದೆಗೆ ಅಭ್ಯರ್ಥಿಗಳು ಅರ್ಜಿ ಸಲ್ಲಿಕೆಗೆ ಕಡೇಯ ದಿನಾಂಕ ಅಕ್ಟೋಬರ್ 19 ಆಗಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಆಯಾ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳನ್ನು ಸಂಪರ್ಕಿಸಬಹುದು.
ಅಭ್ಯರ್ಥಿಗಳು ಈ ಜಾಲತಾಣದ http://karnemakaone.kar.nic.in/abcd/ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ.
ಇದನ್ನೂ ಓದಿ: RDSWDಯಲ್ಲಿ ಪದವೀಧರರಿಗೆ ಉದ್ಯೋಗಾವಕಾಶ; ಇಲ್ಲಿದೆ ಸಂಪೂರ್ಣ ಮಾಹಿತಿ