ETV Bharat / education-and-career

ಚಿಕ್ಕಮಗಳೂರು ಡಿಸಿಸಿ ಬ್ಯಾಂಕ್​ನಲ್ಲಿ ಉದ್ಯೋಗಾವಕಾಶ; FDA, SDA ಸೇರಿ 85 ಹುದ್ದೆಗಳ ಭರ್ತಿಗೆ ಅಧಿಸೂಚನೆ - CHIKKAMAGALURU DCC BANK

ಒಟ್ಟು 85 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಈ ಹುದ್ದೆಗಳ ಕುರಿತ ವಿವರ ಇಲ್ಲಿದೆ.

Chikkamagaluru DCC Bank Notification For FDA SDA Jobs
ಉದ್ಯೋಗ ಮಾಹಿತಿ (ETV Bharat)
author img

By ETV Bharat Karnataka Team

Published : Nov 5, 2024, 2:03 PM IST

ಬೆಂಗಳೂರು: ಚಿಕ್ಕಮಗಳೂರು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್​ ನಿಯಮಿತದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 85 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಈ ಹುದ್ದೆಗಳ ಕುರಿತ ವಿವರ ಇಲ್ಲಿದೆ.

ಹುದ್ದೆ ವಿವರ:

  • ಸಹಾಯಕ ವ್ಯವಸ್ಥಾಪಕರು - 4
  • ಪ್ರಥಮ ದರ್ಜೆ ಸಹಾಯಕರು - 18
  • ಕಿರಿಯ ಸಹಾಯಕರು - 53
  • ಸಹಾಯಕರು - 10

ವಿದ್ಯಾರ್ಹತೆ: ಸಹಾಯಕ ವ್ಯವಸ್ಥಾಪಕರ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸ್ನಾತಕೋತ್ತರ ಪದವಿಯನ್ನು ಹೊಂದಿರಬೇಕು. ಕನ್ನಡ ಮತ್ತು ಆಂಗ್ಲ ಭಾಷೆಯಲ್ಲಿ ಓದಲು, ಬರೆಯಲು ಮತ್ತು ಮಾತನಾಡಲು ಬರಬೇಕು ಮತ್ತು ಕಂಪ್ಯೂಟರ್​ ಜ್ಞಾನ ಇರಬೇಕು.

ಪ್ರಥಮ ದರ್ಜೆ ಮತ್ತು ಕಿರಿಯ ಸಹಾಯಕರ ಹುದ್ದೆಗೆ ಅಭ್ಯರ್ಥಿಗಳು ಪದವಿಯನ್ನು ಹೊಂದಿರಬೇಕು. ಕನ್ನಡ ಮತ್ತು ಆಂಗ್ಲ ಭಾಷೆಯಲ್ಲಿ ಓದಲು, ಬರೆಯಲು ಮತ್ತು ಮಾತನಾಡಲು ಬರಬೇಕು. ಕಂಪ್ಯೂಟರ್​ ಜ್ಞಾನವಿರಬೇಕು.

ಸಹಾಯಕರ ಹುದ್ದೆಗಳ ಅಭ್ಯರ್ಥಿಗಳು ಎಸ್​ಎಸ್​ಎಲ್​ಸಿ ಉತ್ತೀರ್ಣರಾಗಿದ್ದು, ಕನ್ನಡವನ್ನು ಒಂದು ಭಾಷೆಯಾಗಿ ಓದಿರಬೇಕು.

ವಯೋಮಿತಿ: ಅಭ್ಯರ್ಥಿ ಕನಿಷ್ಠ 18 ವರ್ಷ ಮತ್ತು ಗರಿಷ್ಠ 35 ವರ್ಷ ವಯೋಮಿತಿ ಮೀರಿರಬಾರದು. ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗೆ 3 ವರ್ಷ ಮತ್ತು ಪ.ಜಾ, ಪ.ಪಂ ಮತ್ತು ಪ್ರವರ್ಗ 1 ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಮಾಡಿರಬೇಕು.

ಅರ್ಜಿ ಸಲ್ಲಿಕೆ: ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದಾಗಿದ್ದು, ಪ.ಜಾ, ಪ.ಪಂ, ಪ್ರವರ್ಗ 1, ವಿಕಲಚೇತನ ಮತ್ತು ನಿವೃತ್ತ ಸೇವಾ ಅಭ್ಯರ್ಥಿಗೆ 750 ರೂ. ಅರ್ಜಿ ಶುಲ್ಕ ಹಾಗೂ ಇತರೆ ಅಭ್ಯರ್ಥಿಗಳಿಗೆ 1500 ರೂ. ಅರ್ಜಿ ಶುಲ್ಕ ನಿಗದಿಸಲಾಗಿದೆ.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ನವೆಂಬರ್​ 27 ಆಗಿದೆ.

ಈ ಹುದ್ದೆಗಳ ಕುರಿತ ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆ chikkamagalurudccbank.com ಇಲ್ಲಿಗೆ ಭೇಟಿ ನೀಡಬಹುದಾಗಿದೆ.

ಇದನ್ನೂ ಓದಿ: ಚಾಮರಾಜನಗರ: 207 ಅಂಗನಾಡಿ ಕಾರ್ಯಕರ್ತರು- ಸಹಾಯಕಿಯರ ಹುದ್ದೆಗಳ ಭರ್ತಿಗೆ ಅಧಿಸೂಚನೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.