ಬೆಂಗಳೂರು: ಕರ್ನಾಟಕ ಮುನಿಸಿಪಲ್ ಡಾಟಾ ಸೊಸೈಟಿಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಗುತ್ತಿಗೆ ಆಧಾರದ ಮೇಲೆ ಈ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಈ ಹುದ್ದೆಗಳ ಕುರಿತ ಮಾಹಿತಿ ಇಲ್ಲಿದೆ.
ಹುದ್ದೆ ವಿವರ: ಒಟ್ಟು ಹುದ್ದೆಗಳು - 5
ಸಿಸ್ಟಂ ಅನಾಲಿಸ್ಟ್ - 1
ಸಾಫ್ಟ್ವೇರ್ ಡೆವಲಪರ್ - 4
ಎಸ್ಬಿಪಿಎಎಸ್ - 2
ವಿದ್ಯಾರ್ಹತೆ : ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿಟೆಕ್, ಎಂಸಿಎ ಮತ್ತು ಎಂಟೆಕ್ ಪದವಿ ಪೂರ್ಣಗೊಳಿಸಿರಬೇಕು.
ಈ ಹುದ್ದೆಗಳನ್ನು ತಾತ್ಕಾಲಿಕವಾಗಿ ಒಂದು ವರ್ಷದ ಅವಧಿಗೆ ನೇಮಕ ಮಾಡಲಾಗುತ್ತಿದೆ. ಅಭ್ಯರ್ಥಿಗಳ ಕಾರ್ಯಕ್ಷಮತೆ ಆಧಾರದ ಮೇಲೆ ಅರ್ಜಿ ವಿಸ್ತರಣೆ ಮಾಡಲಾಗುವುದು.
ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ನೇರ ಸಂದರ್ಶನದ ಕುರಿತು: ಸಂದರ್ಶನಕ್ಕೆ ಹಾಜರಾಗಲು ಬಯಸುವ ಅಭ್ಯರ್ಥಿಗಳು ಕೆಎಂಡಿಸಿಯ ಅಧಿಕೃತ ಜಾಲತಾಣದಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ಭರ್ತಿ ಮಾಡಿ, ಸಂಬಂಧಿಸಿದ ಎಲ್ಲಾ ದಾಖಲೆಗಳೊಂದಿಗೆ ಜನವರಿ 24 ಮತ್ತು ಫೆಬ್ರವರಿ 1ರಂದು ಕಚೇರಿಯಲ್ಲಿ ನೇರ ನೇಮಕಾತಿಗೆ ಹಾಜರಾಗಬಹುದು.
ಕಚೇರಿ ವಿಳಾಸ: ಕರ್ನಾಟಕ ಮುನಿಸಿಪಲ್ ಡಾಟಾ ಸೊಸೈಟಿ. ನಂಬ1-4, 6ನೇ ಮಹಡಿ, ಐಟಿ ಪಾರ್ಕ್, ರಾಜಾಜಿನಗರ ಇಂಡಸ್ಟ್ರಿಯಲ್ ಎಸ್ಟೇಟ್, ಬೆಂಗಳೂರು -560010.
ಈ ಹುದ್ದೆ ಕುರಿತು ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ ಅಭ್ಯರ್ಥಿಗಳು mrc.gov.in ಇಲ್ಲಿಗೆ ಭೇಟಿ ನೀಡಿ.
ಇದನ್ನೂ ಓದಿ: ಬೆಂಗಳೂರು ದೂರದರ್ಶನ ಕೇಂದ್ರದಲ್ಲಿದೆ ಉದ್ಯೋಗಾವಕಾಶ; 80,000 ರೂ ವೇತನ