ಬೆಂಗಳೂರು: ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 1000 ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ದೇಶಾದ್ಯಂತ ಈ ನೇಮಕಾತಿ ನಡೆಯಲಿದ್ದು, ಪದವೀಧರ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆ ವಿವರ: ಕ್ರೆಡಿಟ್ ಆಫೀಸರ್ (ಅಸಿಸ್ಟೆಂಟ್ ಮ್ಯಾನೇಜರ್) - 1000 ಹುದ್ದೆಗಳು
ವಿದ್ಯಾರ್ಹತೆ: ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಲ್ಲಿ ಪದವಿಯನ್ನು ಪೂರ್ಣಗೊಳಿಸಿರಬೇಕು.
ವಯೋಮಿತಿ : ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 20 ಮತ್ತು ಗರಿಷ್ಠ 30 ವರ್ಷ ವಯೋಮಾನ ಮೀರಿರಬಾರದು. ಒಬಿಸಿ ಅಭ್ಯರ್ಥಿಗಳಿಗೆ 3 ಮತ್ತು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ, ವಿಕಲಚೇತನ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.
ಅರ್ಜಿ ಸಲ್ಲಿಕೆ : ಈ ಹುದ್ದೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಮಹಿಳಾ, ಪ.ಜಾ, ಪ.ಪಂ ಮತ್ತು ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ 150 ರೂ. ಅರ್ಜಿ ಶುಲ್ಕ ಮತ್ತು ಇತರೆ ಅಭ್ಯರ್ಥಿಗಳಿಗೆ 750 ರೂ. ಅರ್ಜಿ ಶುಲ್ಕವನ್ನು ನಿಗದಿಸಲಾಗಿದೆ.
ಆಯ್ಕೆ ಪ್ರಕ್ರಿಯೆ: ಆನ್ಲೈನ್ ಪರೀಕ್ಷೆ, ವಿವರಣಾತ್ಮಕ ಪರೀಕ್ಷೆ, ವೈಯಕ್ತಿಕ ಸಂದರ್ಶನದ ಮೂಲಕ ಹುದ್ದೆ ಆಯ್ಕೆ ಮಾಡಲಾಗುತ್ತದೆ.
ಈ ಹುದ್ದೆಗೆ ಜನವರಿ 30ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಫೆ. 20 ಆಗಿದೆ.
ಈ ಹುದ್ದೆ ಕುರಿತು ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ ಅಭ್ಯರ್ಥಿಗಳು centralbankofindia.co.in ಭೇಟಿ ನೀಡಿ.
ಇದನ್ನೂ ಓದಿ: ಉತ್ತರ ಕನ್ನಡ ಜಿಲ್ಲಾ ಪಂಚಾಯತ್‌ನಲ್ಲಿ ಡಾಟಾ ಎಂಟ್ರಿ, ತಾಂತ್ರಿಕ ಸಹಾಯಕರ ಉದ್ಯೋಗ
ಇದನ್ನೂ ಓದಿ: ಮೈಸೂರಿನ ಚಾಮುಂಡೇಶ್ವರಿ ವಿದ್ಯುತ್ ನಿಗಮದಲ್ಲಿ 250 ಅಪ್ರೆಂಟಿಸ್ ಹುದ್ದೆಗೆ ಅರ್ಜಿಗಳ ಆಹ್ವಾನ