ETV Bharat / education-and-career

ಧಾರವಾಡದಲ್ಲಿದೆ ಪಿಯುಸಿ ಆದವರಿಗೆ ಉದ್ಯೋಗಾವಕಾಶ: ಇಲ್ಲಿದೆ ಹುದ್ದೆಗಳ ವಿವರ - DHARAWAD ZP RECRUITMENT

ಒಟ್ಟು 32 ಹುದ್ದೆಗಳ ನೇಮಕಾತಿ ನಡೆಯಲಿದ್ದು, ಪಿಯುಸಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

Dharwad ZP Notification for Gram Panchayat Library Supervisor post
ಸಾಂದರ್ಭಿಕ ಚಿತ್ರ (ಈಟಿವಿ ಭಾರತ್​)
author img

By ETV Bharat Karnataka Team

Published : Nov 6, 2024, 3:24 PM IST

ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯತ್​ನಿಂದ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 32 ಹುದ್ದೆಗಳ ನೇಮಕಾತಿ ನಡೆಯಲಿದ್ದು, ಪಿಯುಸಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಹುದ್ದೆ ವಿವರ: ಜಿಲ್ಲೆಯ ಧಾರವಾಡ ತಾಲೂಕಿನಲ್ಲಿ 7, ಹುಬ್ಬಳ್ಳಿ ತಾಲೂಕಿನಲ್ಲಿ 7, ಕುಂದಗೋಳ ತಾಲೂಕಿನಲ್ಲಿ 6, ನವಲಗುಂದ ತಾಲೂಕಿನಲ್ಲಿ 6, ಕಲಘಟಗಿ ತಾಲೂಕಿನಲ್ಲಿ 2, ಆಳ್ನಾವರ ತಾಲೂಕಿನಲ್ಲಿ 2, ಅಣ್ಣಿಗೇರಿ ತಾಲೂಕಿನಲ್ಲಿ 2 ಹುದ್ದೆಗಳ ಭರ್ತಿ ನಡೆಸಲಾಗುವುದು.

ವಿದ್ಯಾರ್ಹತೆ: ಪಿಯುಸಿ, ಸರ್ಟಿಫಿಕೇಷನ್​ ಕೋರ್ಸ್​ ಇನ್​​ ಲೈಬ್ರರಿ ಸೈನ್ಸ್​ ಪ್ರಮಾಣಪತ್ರ ಪಡೆದಿರಬೇಕು. ಕನಿಷ್ಠ 3 ತಿಂಗಳ ಕಂಪ್ಯೂಟರ್​ ಕೋರ್ಸ್​ ಉತ್ತೀರ್ಣರಾಗಿರಬೇಕು. ಸರ್ಟಿಫಿಕೇಷನ್​ ಕೋರ್ಸ್​ ಇನ್​ ಲೈಬ್ರರಿ ಸೈನ್ಸ್​ ಪದವಿ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸದೇ ಇದ್ದಲ್ಲಿ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳನ್ನು ಹುದ್ದೆಗೆ ಪರಿಗಣಿಸಲಾಗುತ್ತದೆ.

ವಿಶೇಷ ಸೂಚನೆ: ಅಭ್ಯರ್ಥಿಗಳು ಸಂಬಂಧಪಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಿವಾಸಿಗಳಾಗಿರಬೇಕು.

ವಯೋಮಿತಿ: ಕನಿಷ್ಠ 18, ಗರಿಷ್ಠ 35 ವರ್ಷಗಳ ವಯೋಮಿತಿ ಮೀರಿರಬಾರದು. ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ 1ರ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.

ಅರ್ಜಿ ಸಲ್ಲಿಕೆ: ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಕೆ ಮಾಡಬೇಕು. ಸಾಮಾನ್ಯ ಅಭ್ಯರ್ಥಿಗಳಿಗೆ 500 ರೂಪಾಯಿ, ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 300 ರೂ, ಪ.ಜಾ, ಪ.ಪಂ ಮತ್ತು ಪ್ರವರ್ಗ 1 ಹಾಗೂ ಮಾಜಿ ಸೈನಿಕರಿಗೆ 200 ರೂ. ಹಾಗೂ ವಿಶೇಷ ಚೇತನ ಅಭ್ಯರ್ಥಿಗಳಿಗೆ 100 ರೂ. ಅರ್ಜಿ ಶುಲ್ಕ ವಿಧಿಸಲಾಗಿದೆ.

ಈ ಹುದ್ದೆಗೆ ಮೆರಿಟ್​ ಮೇಲೆ ಅಭ್ಯರ್ಥಿಗಳ ಆಯ್ಕೆ ನಡೆಯಲಿದ್ದು, ನವೆಂಬರ್​​ 5ರಿಂದ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನ ಡಿಸೆಂಬರ್​ 4 ಆಗಿದೆ.

ಈ ಹುದ್ದೆ ಕುರಿತ ಮತ್ತಷ್ಟು ಮಾಹಿತಿ ಮತ್ತು ಅಧಿಕೃತ ಅಧಸೂಚನೆಗೆ ಅಭ್ಯರ್ಥಿಗಳು zpdharwad.karnataka.gov.in ಇಲ್ಲಿಗೆ ಭೇಟಿ ನೀಡಿ.

ಇದನ್ನೂ ಓದಿ: ಚಿಕ್ಕಮಗಳೂರು ಡಿಸಿಸಿ ಬ್ಯಾಂಕ್​ನಲ್ಲಿ ಉದ್ಯೋಗಾವಕಾಶ; FDA, SDA ಸೇರಿ 85 ಹುದ್ದೆಗಳ ಭರ್ತಿಗೆ ಅಧಿಸೂಚನೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.