ಬೆಂಗಳೂರು: ವಿಶೇಷಚೇತನರು ಹಾಗೂ ಹಿರಿಯ ನಾಗರಿಕ ಸಬಲೀಕರಣ ಇಲಾಖೆಯ ವತಿಯಿಂದ 2024-25ನೇ ಸಾಲಿಗೆ ಗ್ರಾಮೀಣ ಪುನರ್ವಸತಿ ಯೋಜನೆಯಡಿ ನಗರ ಮತ್ತು ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅಧಿಸೂಚನೆ ಹೊರಡಿಸಲಾಗಿದೆ. ಬಿಬಿಎಂಪಿಯ 8 ವಲಯಗಳ ವಾರ್ಡ್‌ಗಳಲ್ಲಿ, ಪುರಸಭೆ ಮತ್ತು ನಗರ ಸಭೆಗಳಲ್ಲಿ ಈ ಹುದ್ದೆಗಳ ಭರ್ತಿ ಕಾರ್ಯ ನಡೆಯಲಿದೆ. ಮಾಸಿಕ ಗೌರವಧನ ಆಧಾರದಡಿ ನೇಮಕಾತಿ ಮಾಡಲಾಗುತ್ತದೆ. ಅರ್ಹ ವಿಶೇಷಚೇತನ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ವಿವರ: ನಗರ ಪುನರ್ವಸತಿ ಕಾರ್ಯಕರ್ತರು(ಯುಆರ್ಡಬ್ಲ್ಯೂ) ಮತ್ತು ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು (ವಿಆರ್ಡಬ್ಲ್ಯೂ), ನಗರ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅಭ್ಯರ್ಥಿ ಬಿಬಿಎಂಪಿ ವಾರ್ಡ್‌ಗಳಲ್ಲಿ ಸ್ಥಳೀಯವಾಗಿ ವಾಸವಿರಬೇಕು. ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅಭ್ಯರ್ಥಿಯು ಬೆಂಗಳೂರು ಗ್ರಾಮಾಂತರದಲ್ಲಿ ಸ್ಥಳೀಯವಾಗಿ ವಾಸವಿರಬೇಕು. ಶೇ.40ಕ್ಕಿಂತ ಹೆಚ್ಚು ಅಂಗವಿಕಲತೆ ಹೊಂದಿರಬೇಕು. (ಅಂಗವಿಕಲರ ಗುರುತಿನ ಚೀಟಿ ಪ್ರತಿಯನ್ನು ಲಗತ್ತಿಸಬೇಕು)
ವಿದ್ಯಾರ್ಹತೆ: ಎಸ್‌ಎಸ್‌ಎಲ್‌ಸಿಯಲ್ಲಿ ಉತ್ತೀರ್ಣ ಅಥವಾ ಅನುತ್ತೀರ್ಣರಾಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಕೆ ಮಾಡಬೇಕು. ಅಭ್ಯರ್ಥಿಗಳು 18ರಿಂದ 45 ವರ್ಷದೊಳಗಿರಬೇಕು. ಆರೋಗ್ಯವಂತರಾಗಿರಬೇಕು.
ಅರ್ಜಿ ಸಲ್ಲಿಕೆ: ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅಭ್ಯರ್ಥಿಗಳು ಬೆಂಗಳೂರು ನಗರ ಜಿಲ್ಲೆಯ ಬೆಂಗಳೂರು ದಕ್ಷಿಣ ತಾಲ್ಲೂಕು ವ್ಯಾಪ್ತಿಯಲ್ಲಿ ಬರುವ ಗ್ರಾಮ ಪಂಚಾಯಿತಿಗಳಾದ ಸೋಮನಗಳ್ಳಿ, ರಾಮೋಹಳ್ಳಿ, ಅಜ್ಜನಹಳ್ಳಿ ಮತ್ತು ಕೆ.ಗೊಲ್ಲಹಳ್ಳಿ, ಆನೇಕಲ್ ತಾಲ್ಲೂಕು ವ್ಯಾಪ್ತಿಯಲ್ಲಿ ಬರುವ ಗ್ರಾಮ ಪಂಚಾಯಿತಿಗಳಾದ ಬನ್ನೇರುಘಟ್ಟ, ಹಾರಗದ್ದೆ ಮತ್ತು ಹಂದೇನಹಳ್ಳಿ, ಯಲಹಂಕ ತಾಲ್ಲೂಕು ವ್ಯಾಪ್ತಿಯಲ್ಲಿ ಬರುವ ಗ್ರಾಮ ಪಂಚಾಯಿತಿಗಳಾದ ಚಿಕ್ಕಜಾಲ, ರಾಜಾನುಕುಂಟೆ, ಗಂಟಗಾನಹಳ್ಳಿ, ಸಾತನೂರು ಮತ್ತು ನೊನ್ನೇನಹಳ್ಳಿ, ಬೆಂಗಳೂರು ಪೂರ್ವ ತಾಲ್ಲೂಕು ವ್ಯಾಪ್ತಿಯಲ್ಲಿ ಬರುವ ಗ್ರಾಮ ಪಂಚಾಯಿತಿಗಳಲ್ಲಿ ಅರ್ಜಿ ಸಲ್ಲಿಸಬಹುದು.
ಯುಆರ್ಡಬ್ಲ್ಯೂ ಹುದ್ದೆಗೆ ಜಿಲ್ಲಾ ಅಂಗವಿಲಕರ ಕಲ್ಯಾಣಾಧಿಕಾರಿಗಳ ಕಚೇರಿ, ಸುಧಾರಣಾ ಸಂಸ್ಥೆಗಳ ಸಂಕೀರ್ಣ, ಹೊಸೂರು ರಸ್ತೆ, ಬೆಂಗಳೂರು 560029 ಇಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಕೆಗೆ ಕಡೇಯ ದಿನಾಂಕ ಆಗಸ್ಟ್ 9.
ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ www.dwd.ddwo@gamil.com ಅಥವಾ ದೂರವಾಣಿ ಸಂಖ್ಯೆ 080- 29752324ಗೆ ಸಂಪರ್ಕಿಸಬಹುದು.
ಇದನ್ನೂ ಓದಿ: ಗ್ರೂಪ್ ಸಿ ಹುದ್ದೆಗಳ ಭರ್ತಿ; ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಿಸಿದ ಕೆಪಿಎಸ್ಸಿ