ETV Bharat / education-and-career

ಐಡಿಬಿಐ ಬ್ಯಾಂಕ್​ನಲ್ಲಿ 1000 ಹುದ್ದೆ ಭರ್ತಿಗೆ ಅಧಿಸೂಚನೆ; ಪದವಿ ಆದವರಿಗೆ ಅವಕಾಶ

1000 ಎಕ್ಸಿಕ್ಯೂಟಿವ್​ (ಸೇಲ್ಸ್​ ಅಂಡ್​ ಆಪರೇಷನ್​) ಹುದ್ದೆಗಳ ಭರ್ತಿಗೆ ದೇಶದೆಲ್ಲೆಡೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

Excutive post Jobs in Industrial Development Bank of India
ಐಡಿಬಿಐ (IANS)
author img

By ETV Bharat Karnataka Team

Published : Nov 7, 2024, 1:37 PM IST

ಬೆಂಗಳೂರು: ಇಂಡಸ್ಟ್ರಿಯಲ್​ ಡೆವಲಪ್​​ಮೆಂಟ್​ ಬ್ಯಾಂಕ್​ ಆಫ್​ ಇಂಡಿಯಾ (ಐಡಿಬಿಐ)ನಲ್ಲಿ 1000 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಗುತ್ತಿಗೆ ಆಧಾರದ ಮೇಲೆ ಈ ಹುದ್ದೆ ನೇಮಕಾತಿ ನಡೆಯಲಿದೆ. ಈ ಹುದ್ದೆಗಳ ಮಾಹಿತಿ ಇಲ್ಲಿದೆ.

ಹುದ್ದೆ ವಿವರ: 1000 ಎಕ್ಸಿಕ್ಯೂಟಿವ್​ (ಸೇಲ್ಸ್​ ಅಂಡ್​ ಆಪರೇಷನ್​) ಹುದ್ದೆಗಳ ಭರ್ತಿಗೆ ದೇಶದೆಲ್ಲೆಡೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ವಿದ್ಯಾರ್ಹತೆ: ಅಭ್ಯರ್ಥಿಗಳು ಅಧಿಕೃತ ವಿಶ್ವವಿದ್ಯಾಲಯಗಳಿಂದ ಪದವಿಯನ್ನು ಪೂರ್ಣಗೊಳಿಸಿರಬೇಕು.

ವಯೋಮಿತಿ: ಅಭ್ಯರ್ಥಿಗಳ ಕನಿಷ್ಠ ವಯಸ್ಸು 20 ಆಗಿದ್ದು, ಗರಿಷ್ಠ ವಯೋಮಿತಿ 25 ಮೀರಿರಬಾರದು. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪ.ಜಾ, ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ವಿಕಲಚೇತನ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.

ಅರ್ಜಿ ಸಲ್ಲಿಕೆ: ಈ ಹುದ್ದೆಗೆ ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಕೆ ಮಾಡಬೇಕಿದೆ. ಪ.ಜಾ, ಪ.ಪಂ ಮತ್ತು ವಿಕಲಚೇತನ ಅಭ್ಯರ್ಥಿಗೆ 250 ರೂ. ಹಾಗೂ ಇತರೆ ಅಭ್ಯರ್ಥಿಗಳಿಗೆ 1050 ರೂ. ಅರ್ಜಿ ಶುಲ್ಕ ವಿಧಿಸಲಾಗಿದೆ.

ವೇತನ: ಮಾಸಿಕ 29,000- 31,000 ರೂ ನಿಗದಿಸಲಾಗಿದೆ.

ಅಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಆನ್​ಲೈನ್​ ಪರೀಕ್ಷೆ, ದಾಖಲಾತಿ ಪರಿಶೀಲನೆ, ವೈಯಕ್ತಿಕ ಸಂದರ್ಶನ, ವೈದ್ಯಕೀಯ ಪರೀಕ್ಷೆ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ಈ ಹುದ್ದೆಗೆ ನವೆಂಬರ್​ 11ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ನವೆಂಬರ್​ 16 ಆಗಿದೆ. ಈ ಹುದ್ದೆಗಳಿಗೆ ಡಿಸೆಂಬರ್​ 1ರಂದು ಆನ್​ಲೈನ್​ ಪರೀಕ್ಷೆ ನಡೆಯುವ ಸಾಧ್ಯತೆ ಇದೆ.

ಈ ಹುದ್ದೆ ಕುರಿತು ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ ಅಭ್ಯರ್ಥಿಗಳು idbibank.in ಇಲ್ಲಿಗೆ ಭೇಟಿ ನೀಡಿ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.