ಬೆಂಗಳೂರು: ಗದಗ ಜಿಲ್ಲೆ ಮತ್ತು ತಾಲೂಕು ನಿರ್ವಹಣಾ ಘಟಕಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಹೊರಗುತ್ತಿಗೆ ಆಧಾರದ ಮೇಲೆ ಈ ಹುದ್ದೆಗಳ ನೇಮಕಾತಿ ನಡೆಸಲಾಗಿದೆ. 11 ತಿಂಗಳ ಅವಧಿಗೆ ತಾತ್ಕಾಲಿಕವಾಗಿ ಈ ಹುದ್ದೆ ನೇಮಕಾತಿ ನಡೆಯಲಿದೆ.
ಹುದ್ದೆ ವಿವರ: ಒಟ್ಟು 13 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
- ಜಿಲ್ಲಾ ಕಚೇರಿ ಸಹಾಯಕ - 1
- ಬ್ಲಾಕ್ ಮ್ಯಾನೇಜರ್ ಫಾರಂ ಲೈವ್ಲಿಹುಡ್ - 4
- ಬ್ಲಾಕ್ ಮ್ಯಾನೇಜರ್ ನಾನ್ ಫಾರಂ ಲೈವ್ಲಿಹುಡ್ - 1
- ಕ್ಲಸ್ಟರ್ ಸೂಪರ್ವೈಸರ್ - 2
- ಕ್ಲಸ್ಟರ್ ಸೂಪರ್ವೈಸರ್ ಸ್ಕಿಲ್ - 5
ವಿದ್ಯಾರ್ಹತೆ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪದವಿ ಮತ್ತು ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.
ವಯೋಮಿತಿ: ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 45 ವರ್ಷ ಮೀರಿರಬಾರದು.
ಅನುಭವ: ಅಭ್ಯರ್ಥಿಗಳು ಸಂಬಂಧಿಸಿದ ಕ್ಷೇತ್ರದಲ್ಲಿ ಕನಿಷ್ಠ ಮೂರು ವರ್ಷ ಹುದ್ದೆ ನಿರ್ವಹಣೆ ಅನುಭವ ಹೊಂದಿರಬೇಕು.
ಅಭ್ಯರ್ಥಿಗಳು ಕಂಪ್ಯೂಟರ್ ಜ್ಞಾನ ಮತ್ತು ಟೈಪಿಂಗ್ನಲ್ಲಿ ಪರಿಣತಿ ಹೊಂದಿರಬೇಕು.
ಅರ್ಜಿ ಸಲ್ಲಿಕೆ: ಈ ಹುದ್ದೆಗಳಿಗೆ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಅರ್ಜಿ ಶುಲ್ಕ ವಿನಾಯಿತಿ ನೀಡಲಾಗಿದೆ. ಅಭ್ಯರ್ಥಿಗಳು jobsksrlps.karnataka.gov.in ಈ ಲಿಂಕ್ನಲ್ಲಿ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ.
ಈ ಹುದ್ದೆಗೆ ಅರ್ಜಿ ಸಲ್ಲಿಕೆಗೆ ಜನವರಿ 15 ಕೊನೆಯ ದಿನವಾಗಿದೆ.
ಅಭ್ಯರ್ಥಿಗಳು ಈ ಹುದ್ದೆ ಕುರಿತು ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ ಗದಗ ಜಿಲ್ಲಾಡಳಿತದ ಅಧಿಕೃತ ಜಾಲತಾಣ gadag.nic.in ಇಲ್ಲಿಗೆ ಭೇಟಿ ನೀಡಬಹುದಾಗಿದೆ.
ಇದನ್ನೂ ಓದಿ: ಇಂಡಿಯನ್ ಮರ್ಚೆಂಟ್ ನೇವಿಯಲ್ಲಿ 1800 ಹುದ್ದೆಗಳ ನೇಮಕಾತಿ