ETV Bharat / education-and-career

ಜೆಸ್ಕಾಂನಲ್ಲಿ 221 ಅಪ್ರೆಂಟಿಸ್​ ಹುದ್ದೆ; ITI ಆಗಿದ್ರೆ ಅರ್ಜಿ ಸಲ್ಲಿಸಿ - Gescom Recruitment - GESCOM RECRUITMENT

ಒಟ್ಟು ಹುದ್ದೆ 221, ಕಲ್ಯಾಣ ಕರ್ನಾಟಕಕ್ಕೆ 177 ಹುದ್ದೆ ಮೀಸಲಾಗಿದ್ದು, ಕಲ್ಯಾಣ ಕರ್ನಾಟಕೇತರ ಅಭ್ಯರ್ಥಿಗಳಿಗೆ 44 ಹುದ್ದೆಗಳನ್ನು ಮೀಸಲಿರಿಸಲಾಗಿದೆ.

Gescom Recruitment for Apprentice for one year
ಜೆಸ್ಕಾಂ (ಈಟಿವಿ ಭಾರತ್​​)
author img

By ETV Bharat Karnataka Team

Published : Sep 11, 2024, 3:12 PM IST

ಬೆಂಗಳೂರು: ಗುಲಬರ್ಗಾ ವಿದ್ಯುತ್​ಚ್ಛಕ್ತಿ ಸರಬರಾಜು ಕಂಪನಿ ನಿಯಮಿತ (ಜೆಸ್ಕಾಂ)ನಲ್ಲಿ ಎಲೆಕ್ಟ್ರಿಷಿಯನ್​ ಅಪ್ರೆಂಟಿಸ್​ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಒಂದು ವರ್ಷದ ಅವಧಿಗೆ ಈ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆಗೆ ಇನ್ನೆರಡೇ ದಿನ ಬಾಕಿಯಿದೆ. ಈ ಕುರಿತ ಮಾಹಿತಿ ಇಲ್ಲಿದೆ..

ಹುದ್ದೆ ವಿವರ: ಒಟ್ಟು ಹುದ್ದೆ 221, ಕಲ್ಯಾಣ ಕರ್ನಾಟಕಕ್ಕೆ 177 ಹುದ್ದೆ ಮೀಸಲಾಗಿದ್ದು, ಕಲ್ಯಾಣ ಕರ್ನಾಟಕೇತರ ಅಭ್ಯರ್ಥಿಗಳಿಗೆ 44 ಹುದ್ದೆಗಳನ್ನು ಮೀಸಲಿರಿಸಲಾಗಿದೆ.

Gescom Recruitment for Apprentice for one year
ಅಧಿಸೂಚನೆ (ಜೆಸ್ಕಾಂ)

ವಿದ್ಯಾರ್ಹತೆ: ಅಭ್ಯರ್ಥಿಗಳು ಐಟಿಐ ಮಾಡಿ, ರಾಷ್ಟ್ರೀಯ ವೃತ್ತಿ ಪ್ರಮಾಣಪತ್ರ (ಎನ್​ಸಿವಿಟಿ) ರಾಜ್ಯ ವೃತ್ತಿ ಪ್ರಮಾಣಪತ್ರ (ಎಸ್​ಸಿವಿಟಿ) ಅಂಕಪಟ್ಟಿಯನ್ನು ಹೊಂದಿರಬೇಕು.

ವಯೋಮಿತಿ: ಅಭ್ಯರ್ಥಿಗಳು ಕನಿಷ್ಠ 16, ಗರಿಷ್ಠ 25 ವರ್ಷ ಮೀರಿರಬಾರದು. ಪ.ಜಾ, ಪ.ಪಂ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ 30 ವರ್ಷ ಮೀರಿರಬಾರದು.

ಗೌರವಧನ: ಈ ಹುದ್ದೆ ವೇಳೆ ಅಭ್ಯರ್ಥಿಗಳಿಗೆ 5500 ರೂ ಗೌರವಧನ ನೀಡಲಾಗುವುದು.

ಆಯ್ಕೆ: ಅಭ್ಯರ್ಥಿಗಳನ್ನು ಮೆರಿಟ್​ ಮೇಲೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆ: ಅಭ್ಯರ್ಥಿಗಳು ತಮ್ಮ ಸಂಪೂರ್ಣ ವಿವರಗಳನ್ನೊಳಗೊಂಡ ಅರ್ಜಿಯನ್ನು ಅಗತ್ಯ ದಾಖಲೆಯೊಂದಿಗೆ ಈ ಕೆಳಗಿನನ ವಿಳಾಸಕ್ಕೆ ಸಲ್ಲಿಸಬೇಕು.

ಪ್ರಧಾನ ವ್ಯವಸ್ಥಾಪಕರು (ಆ ಮತ್ತು ಮಾಸಂಅ). ನಿಯಮ ಕಚೇರಿ, ಗುಲಬರ್ಗಾ ವಿದ್ಯತ್​ ಸರಬರಾಜು ಕಂಪನಿ ನಿಯಮಿತ, ಸ್ಟೇಷನ್​ ರೋಡ್​ ಕಲಬುರಗಿ- 585102.

ಈ ಹುದ್ದೆಗೆ ಅರ್ಜಿ ಸಲ್ಲಿಕೆಗೆ ಕಡೇಯ ದಿನ ಸೆಪ್ಟೆಂಬರ್​ 13 ಆಗಿದೆ.

ಈ ಹುದ್ದೆ ಕುರಿತ ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ ಅಭ್ಯರ್ಥಿಗಳು gescom.karnataka.gov.in ಇಲ್ಲಿಗೆ ಭೇಟಿ ನೀಡಬಹುದಾಗಿದೆ.

ಯಾದಗಿರಿಯಲ್ಲಿದೆ ಅಂಗನವಾಡಿ ಉದ್ಯೋಗ:

ಯಾದಗಿರಿಯಲ್ಲಿ 470 ಹುದ್ದೆ: ಜಿಲ್ಲೆಯಲ್ಲಿ 159 ಅಂಗನವಾಡಿ ಕಾರ್ಯಕರ್ತರು ಮತ್ತು 311 ಅಂಗನವಾಡಿ ಸಹಾಯಕರ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಶಹಾಪುರದಲ್ಲಿ - 124, ಸುರಪುರ - 221, ಯಾದಗಿರಿ - 54, ಗುರುಮಠಕಲ್​ - 71 ಹುದ್ದೆಗಳಿವೆ.

ವಿದ್ಯಾರ್ಹತೆ: ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ ಅಭ್ಯರ್ಥಿಗಳು ಪಿಯುಸಿ ಪೂರ್ಣಗೊಳಿಸಿರಬೇಕು. ಸಹಾಯಕರ ಹುದ್ದೆಗಳಿಗೆ ಅಭ್ಯರ್ಥಿಗಳು ಎಸ್​ಎಸ್​ಎಲ್​ಸಿ ಪೂರ್ಣಗೊಳಿಸಿರಬೇಕು.

ವಯೋಮಿತಿ: ಕನಿಷ್ಠ 19ರಿಂದ 35 ವರ್ಷ ವಯೋಮಿತಿ ಹೊಂದಿರಬೇಕು. ವಿಶೇಷಚೇತನ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಇದೆ. ಅಭ್ಯರ್ಥಿಗಳನ್ನು ಮೆರಿಟ್​ ಪಟ್ಟಿ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಂಗನವಾಡಿ ಕೇಂದ್ರದ ಆಯಾ ತಾಲೂಕು, ಗ್ರಾಮಾಂತರ ಪ್ರದೇಶಗಳಲ್ಲಿ ವಾಸಿಸುವ ಸ್ಥಳೀಯರು ಆಗಿರಬೇಕು. ಈ ಕುರಿತು ಹೆಚ್ಚಿನ ಮಾಹಿತಿಗೆ ಆಯಾ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳನ್ನು ಸಂಪರ್ಕಿಸಬಹುದು.

ಅರ್ಜಿ ಸಲ್ಲಿಕೆಗೆ ಕಡೆಯ ದಿನ ಸೆಪ್ಟೆಂಬರ್​ 13 ಆಗಿದೆ. ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಗಳು http://karnemakaone.kar.nic.in/abcd/ ಜಾಲತಾಣಕ್ಕೆ ಭೇಟಿ ನೀಡಿ.

ಇದನ್ನೂ ಓದಿ: MRPLನಲ್ಲಿ ಅಪ್ರೆಂಟಿಸ್​ ಹುದ್ದೆಗಳು; ಡಿಪ್ಲೊಮಾ ಆದವರಿಗೆ ಅವಕಾಶ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.