ಬೆಂಗಳೂರು: ದಾವಣಗೆರೆ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿನ ಗ್ರಾಮ ಪಂಚಾಯತ್ ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 16 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಈ ಹುದ್ದೆ ಅರ್ಜಿ ಸಲ್ಲಿಕೆ, ನೇಮಕಾತಿ ಪ್ರಕ್ರಿಯೆ ಸೇರಿದಂತೆ ಸಂಪೂರ್ಣ ಮಾಹಿತಿ ಇಲ್ಲಿದೆ..
ಹುದ್ದೆ ವಿವರ: ಜಿಲ್ಲೆಯ ತಾಲೂಕಿನಲ್ಲಿರುವ ಹುದ್ದೆಗಳ ವಿವರ
ಚನ್ನಗಿರಿ- 4
ದಾವಣಗೆರೆ - 8
ಹರಿಹರ- 4
ವಿದ್ಯಾರ್ಹತೆ: ಪಿಯುಸಿ ವಿದ್ಯಾರ್ಹತೆ. ಸರ್ಟಿಫಿಕೇಷನ್ ಕೋರ್ಸ್ ಇನ್ ಲೈಬ್ರರಿ ಸೈನ್ಸ್ ಪ್ರಮಾಣಪತ್ರ ಪಡೆದಿರಬೇಕು. ಕನಿಷ್ಠ 3 ತಿಂಗಳ ಕಂಪ್ಯೂಟರ್ ಕೋರ್ಸ್ ಉತ್ತೀರ್ಣರಾಗಿರಬೇಕು. ಸರ್ಟಿಫಿಕೇಷನ್ ಕೋರ್ಸ್ ಇನ್ ಲೈಬ್ರರಿ ಸೈನ್ಸ್ ಪದವಿ ಪಡದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸದಿದ್ದಲ್ಲಿ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳನ್ನು ಹುದ್ದೆಗೆ ಪರಿಗಣಿಸಲಾಗುತ್ತದೆ.
ವಿಶೇಷ ಸೂಚನೆ: ಅಭ್ಯರ್ಥಿಗಳು ಸಂಬಂಧಪಟ್ಟ ಗ್ರಾಮ ಪಂಚಾಯತ್ ವ್ಯಾಪ್ತಿಯ ನಿವಾಸಿಯಾಗಿರಬೇಕು.
ವೇತನ: ಮಾಸಿಕ 15,196 ರೂ. ಮಾಸಿಕ ವೇತನ ನಿಗದಿಸಲಾಗಿದೆ. ಕಾರ್ಮಿಕ ಇಲಾಖೆಯು ಕಾಲಕಾಲಕ್ಕೆ ನಿಗದಿಪಡಿಸಿರುವ ವ್ಯತ್ಯಯವಾಗುವ ತುಟ್ಟಿ ಭತ್ಯೆಯನ್ನು ಪಾವತಿಸಲಾಗುವುದು.
ವಯೋಮಿತಿ: ಕನಿಷ್ಠ 18 ವರ್ಷ, ಗರಿಷ್ಠ 35 ವರ್ಷ ವಯೋಮಿತಿ ಹೊಂದಿರಬೇಕು. ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪ.ಜಾತಿ, ಪ.ಪಂ ಮತ್ತು ಪ್ರವರ್ಗ 1 ಅಭ್ಯರ್ಥಿಗಳಿಗೆ 5 ವರ್ಷದವರೆಗೆ ವಯೋಮಿತಿ ಸಡಿಲಿಕೆ ಇದೆ.
ಆಯ್ಕೆ: ಮೆರಿಟ್ ಆಧಾರದ ಮೇಲೆ ದಾಖಲಾತಿ ಪರಿಶೀಲನೆ ಬಳಿಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಕೆ: ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಸಾಮಾನ್ಯ ಅಭ್ಯರ್ಥಿಗಳಿಗೆ 500 ರೂ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 300 ರೂ., ಪ.ಜಾ, ಪ.ಪಂ ಮತ್ತು ಪ್ರವರ್ಗ ಅಭ್ಯರ್ಥಿಗಳಿಗೆ 200 ರೂ. ಮತ್ತು ವಿಕಲಚೇತನ ಅಭ್ಯರ್ಥಿಗಳಿಗೆ 100 ರೂ. ಅರ್ಜಿ ಶುಲ್ಕ ನಿಗದಿಸಲಾಗಿದೆ.
ಈ ಹುದ್ದೆಗೆ ಜೂನ್ 29ರಿಂದ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಜುಲೈ 20 ಆಗಿದೆ.
ಈ ಹುದ್ದೆ ಕುರಿತು ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ davanagere.nic.inಗೆ ಭೇಟಿ ನೀಡಬಹುದು.
ಇದನ್ನೂ ಓದಿ: ಪೌರಾಡಳಿತ ನಿರ್ದೇಶನಾಲಯದಲ್ಲಿ ನೇಮಕಾತಿ; ಬೆಳಗಾವಿ- ಕಲಬುರಗಿಯಲ್ಲಿದೆ ಕೆಲಸ