ಬೆಂಗಳೂರು: ಪ್ರಸ್ತಕ ಶೈಕ್ಷಣಿಕ ಸಾಲಿಗೆ ಮಂಗಳೂರು ವಿಶ್ವವಿದ್ಯಾಲಯದಲ್ಲಿ ಅತಿಥಿ ಉಪನ್ಯಾಸಕರ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಮಂಗಳೂರು ವಿವಿ ಹಾಗು ಅದರ ವ್ಯಾಪ್ತಿಯ ಕಾಲೇಜುಗಳಲ್ಲಿರುವ ಪೂರ್ಣಕಾಲಿಕ ಮತ್ತು ಅರೆಕಾಲಿಕ ಹುದ್ದೆಗಳು ಇವಾಗಿವೆ.
ಹುದ್ದೆಗಳ ವಿವರ: ಇಂಗ್ಲಿಷ್, ಕನ್ನಡ, ಹಿಂದಿ, ಸಂಸ್ಕೃತ, ಇತಿಹಾಸ, ಅರ್ಥಶಾಸ್ತ್ರ, ರಾಜ್ಯಶಾಸ್ಯ, ಸಮಾಜಶಾಸ್ತ್ರ, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ, ಭೂಗೋಳಶಾಸ್ತ್ರ, ದೈಹಿಕ ಶಿಕ್ಷಣ, ರಸಯನಶಾಸ್ತ್ರ, ಭೌತಿಕ ಶಾಸ್ತ್ರ, ಮೈಕ್ರೋಬಯಾಲಜಿ, ಮಥಮೆಟಿಕ್ಸ್, ಕಂಪ್ಯೂಟರ್ ಸೈನ್ಸ್/ಬಿಸಿಎ, ಸಸ್ಯಶಾಸ್ತ್ರ, ಪ್ರಾಣಿಶಾಸ್ತ್ರ, ಕಾಮರ್ಸ್, ಬಿಬಿಎ ಕೋರ್ಸ್ಗಳಿಗೆ ನೇಮಕಾತಿ ನಡೆಯಲಿದೆ.
ವಿದ್ಯಾರ್ಹತೆ: ಸಂಬಂಧಪಟ್ಟ ವಿಷಯದಲ್ಲಿ ಸ್ನಾತಕೋತ್ತರ ಪದವಿ.
ಆಯ್ಕೆ: ಯುಜಿಸಿ ನಿಗದಿತ ಮಾನದಂಡ ಮತ್ತು ಕರ್ನಾಟಕ ಸರ್ಕಾರದ ಮೀಸಲಾತಿ ಆದೇಶದ ಅನುಸಾರ ಆಯ್ಕೆ ಪ್ರಕ್ರಿಯೆ.
ಅರ್ಜಿ ಸಲ್ಲಿಕೆ: ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವಾಗ ಎಸ್ಎಸ್ಎಲ್ಸಿ ಅಂಕಪಟ್ಟಿ, ಸ್ನಾತಕ ಮತ್ತು ಸ್ನಾತಕೋತ್ತರ ಪದವಿ ಪ್ರಮಾಣ ಪತ್ರ, ಯುಜಿಸಿ, ಎನ್ಇಟಿ, ಎಸ್ಎಲ್ಇಟಿ ಉತ್ತೀರ್ಣತೆ ಅಥವಾ ಪಿಎಚ್ಡಿ ಅಥವಾ ಎಂಫಿಲ್ ಪದವಿ ಪ್ರಮಾಣ ಪತ್ರ, ಸಂಶೋಧನಾ ಪತ್ರಿಕೆಗಳನ್ನು ಲಗತ್ತಿಸುವುದು ಕಡ್ಡಾಯ.
ಈ ಹುದ್ದೆಗೆ 200 ರೂ ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ 1 ಅಭ್ಯರ್ಥಿಗಳು 100 ರೂ ಅರ್ಜಿ ಶುಲ್ಕ ಭರಿಸಬೇಕು.
ಅರ್ಜಿ ಸಲ್ಲಿಕೆ ವಿವರ ಮತ್ತು ಹುದ್ದೆಗಳ ಕುರಿತ ಸಂಪೂರ್ಣ ಮಾಹಿತಿ ಹಾಗೂ ಅಧಿಕೃತ ಅಧಿಸೂಚನೆಗೆ ಅಭ್ಯರ್ಥಿಗಳು mangaloreuniversity.ac.in ಇಲ್ಲಿಗೆ ಭೇಟಿ ನೀಡಿ.
ರಾಯಚೂರು ವಿವಿಯಲ್ಲಿ ಸಹಾಯಕ ಪ್ರಾಧ್ಯಾಪಕರ ಹುದ್ದೆ: ರಾಯಚೂರು ವಿಶ್ವವಿದ್ಯಾಲಯದಲ್ಲಿ ಪ್ರೊಫೆಸರ್ ಮತ್ತು ಅಸೋಸಿಯೇಟ್ ಪ್ರೊಫೆಸರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಥಶಾಸ್ತ್ರ, ಕಾಮರ್ಸ್, ಇಂಗ್ಲಿಷ್, ರಾಜ್ಯಶಾಸ್ತ್ರ, ಪ್ರಾಣಿಶಾಸ್ತ್ರ, ರಸಾಯನಶಾಸ್ತ್ರ, ಮೈಕ್ರೋಬಯೋಲಾಜಿ ಹುದ್ದೆಗಳಿಗೆ ನೇಮಕಾತಿ ನಡೆಸಲಾಗುವುದು.
ಪ್ರೊಫೆಸರ್ ಹುದ್ದೆಗೆ ಪಿಎಚ್ಡಿ ಪದವಿ, 10 ವರ್ಷ ಉದ್ಯೋಗ ಅನುಭವ ಹೊಂದಿರಬೇಕು. ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ಪಿಎಚ್ಡಿ ಜೊತೆಗೆ 8 ವರ್ಷ ಉದ್ಯೋಗ ಅನುಭವ ಹೊಂದಿರಬೇಕು.
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ. ಸ್ವವಿವರ ಸೇರಿದಂತೆ ಅಗತ್ಯ ದಾಖಲಾತಿಯೊಂದಿಗೆ ಕೆಳಗಿನ ವಿಳಾಸಕ್ಕೆ ಅರ್ಜಿ ಸಲ್ಲಿಸಬಹುದು.
ರಿಜಿಸ್ಟರ್, ರಾಯಚೂರು ವಿಶ್ವವಿದ್ಯಾಲಯ, ಕೃಷ್ಣ ತುಂಗಾ ಕ್ಯಾಂಪಸ್, ಮಂತ್ರಾಲಯ ರಸ್ತೆ, ಯೆರಗೆರ- 584133, ರಾಯಚೂರು.
ಈ ಹುದ್ದೆಗೆ ಅರ್ಜಿ ಸಲ್ಲಿಸಲು ಕಡೇಯ ದಿನಾಂಕ ಆಗಸ್ಟ್ 8. ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ raichuruniversity.ac.in ಇಲ್ಲಿಗೆ ಭೇಟಿ ನೀಡಿ.
ಇದನ್ನೂ ಓದಿ: ಚಿತ್ರದುರ್ಗ: 215 ಅಂಗನವಾಡಿ ಕಾರ್ಯಕರ್ತರು ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ