ETV Bharat / education-and-career

CRPF, ರೈಲ್ವೆ ಭದ್ರತಾ ಪಡೆಯಲ್ಲಿ ನೇಮಕಾತಿ: ಇಲ್ಲಿದೆ ಮಾಹಿತಿ

author img

By ETV Bharat Karnataka Team

Published : Jan 19, 2024, 11:50 PM IST

ಸಿಆರ್​ಪಿಎಫ್​ ಮತ್ತು ರೈಲ್ವೆ ಭದ್ರತಾ ಪಡೆಯಲ್ಲಿ ಕಾನ್​ಸ್ಟೇಬಲ್​ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

Recruitment
ನೇಮಕಾತಿ ಮಾಹಿತಿ

ಬೆಂಗಳೂರು: ಕೇಂದ್ರ ಮೀಸಲು ಪೊಲೀಸ್​ ಪಡೆಯಿಂದ 169 ಕಾನ್​ಸ್ಟೇಬಲ್​​ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಗ್ರೂಪ್​ ಸಿ ಈ ಹುದ್ದೆಗಳನ್ನು ತಾತ್ಕಾಲಿಕವಾಗಿ ಭರ್ತಿ ಮಾಡಲಾಗುವುದು. ಈ ಹುದ್ದೆಗಳಿಗೆ ಕೇವಲ ಕ್ರೀಡಾ ಕೋಟಾ ಹೊಂದಿರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ.

ಹುದ್ದೆ ವಿವರ: ಕೇಂದ್ರ ಮೀಸಲು ಪೊಲೀಸ್​ ಪಡೆ (ಸಿಆರ್​ಪಿಎಫ್​​) ನಿಂದ 169 ಕಾನ್​ಸ್ಟೇಬಲ್​ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ವಿದ್ಯಾರ್ಹತೆ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10ನೇ ತರಗತಿ ವಿದ್ಯಾಭ್ಯಾಸವನ್ನು ಪೂರ್ಣಗೊಳಿಸಿರಬೇಕು. ವಿವಿಧ ಕ್ರೀಡಾ ಕ್ಷೇತ್ರದಲ್ಲಿ ರಾಜ್ಯ ಅಥವಾ ರಾಷ್ಟ್ರಮಟ್ಟದಲ್ಲಿ ಸಾಧನೆ ಮಾಡಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ವಯೋಮಿತಿ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಮತ್ತು ಗರಿಷ್ಠ 23 ವರ್ಷ ಮೀರಿರಬಾರದು. ಒಬಿಸಿ ಅಭ್ಯರ್ಥಿಗಳು 8 ವರ್ಷ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 10 ವರ್ಷ ಮೀರಿರಬಾರದು.

ವೇತನ: ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 21,700 ರಿಂದ 69,100 ರೂ.ವರೆಗೆ ವೇತನ ನಿಗದಿಸಲಾಗಿದೆ.

ಅರ್ಜಿ ಸಲ್ಲಿಕೆ: ಈ ಹುದ್ದೆಗೆ ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ವಿನಾಯಿತಿ ಪಡೆಯಲಾಗಿದೆ. ಒಬಿಸಿ ಮತ್ತು ಇತರೆ ಅಭ್ಯರ್ಥಿಗಳು 100 ರೂ. ಅರ್ಜಿ ಶುಲ್ಕ ವಿಧಿಸಲಾಗಿದೆ.

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ದೈಹಿಕ ಗುಣಮಟ್ಟ ಪರೀಕ್ಷೆ, ದಾಖಲಾತಿ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುವುದು. ಜನವರಿ 16ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಫೆಬ್ರವರಿ 15 ಆಗಿದೆ.

ಈ ಹುದ್ದೆ ಕುರಿತು ಸಂಪೂರ್ಣ ವಿವರ ಮತ್ತು ಅಧಿಕೃತ ಅಧಿಸೂಚನೆಗೆ ಅಭ್ಯರ್ಥಿಗಳು rect.crpf.gov.in ಅಥವಾ recruitment.crpf.gov.in ಇಲ್ಲಿಗೆ ಭೇಟಿ ನೀಡಬಹುದಾಗಿದೆ.

ರೈಲ್ವೆ ಭದ್ರತಾ ಪಡೆಯಲ್ಲಿ ನೇಮಕಾತಿ: ರೈಲ್ವೆ ಭದ್ರತಾ ಪಡೆಯಿಂದ 2,250 ಸಬ್​ ಇನ್ಸ್​​ಪೆಕ್ಟರ್​​ ಮತ್ತು ಕಾನ್​ಸ್ಟೇಬಲ್​ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಕಾನ್​ಸ್ಟೇಬಲ್​ ಹುದ್ದೆಗೆ ಎಸ್​​ಎಸ್​​ಎಲ್​ಸಿ ಉತ್ತೀರ್ಣರಾಗಿರಬೇಕು. ಸಬ್​ ಇನ್ಸ್​​ಪೆಕ್ಟರ್​ ಹುದ್ದೆಗೆ ಅಭ್ಯರ್ಥಿಗಳು ಪದವಿ ಪೂರ್ಣಗೊಳಿಸಿರಬೇಕು.

ವಯೋಮಿತಿ: ಕಾನ್​ಸ್ಟೇಬಲ್​ ಹುದ್ದೆಗೆ ಕನಿಷ್ಠ 18 ಮತ್ತು ಗರಿಷ್ಠ 25 ವರ್ಷ. ಸಬ್​ ಇನ್ಸ್​ಪೆಕ್ಟರ್​​ ಕನಿಷ್ಠ 20 ರಿಂದ ಗರಿಷ್ಠ 25 ವರ್ಷ ಪೂರ್ಣಗೊಂಡಿರಬೇಕು. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.

ಆಯ್ಕೆ ಪ್ರಕ್ರಿಯೆ: ಕಂಪ್ಯೂಟರ್​ ಆಧಾರಿತ ಪರೀಕ್ಷೆ, ದೈಹಿಕ ಕ್ಷಮತೆ ಪರೀಕ್ಷೆ ಮತ್ತು ದೈಹಿಕ ಸಾಮರ್ಥ್ಯ ಪರೀಕ್ಷೆ, ದಾಖಲಾತಿ ಪರಿಶೀಲನೆ ಮತ್ತು ಸಂದರ್ಶನದ ಮೂಲಕ ಆಯ್ಕೆ. ಜನವರಿ 6ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಜನವರಿ 31 ಕಡೇಯ ದಿನಾಂಕ. ಈ ಕುರಿತು ಸಂಪೂರ್ಣ ಮಾಹಿತಿ, ಅಧಿಕೃತ ಅಧಿಸೂಚನೆ ಮತ್ತು ಇನ್ನಿತರ ಮಾಹಿತಿಗೆ indianrailways.gov.in ಇಲ್ಲಿಗೆ ಭೇಟಿ ನೀಡಿ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.