ETV Bharat / education-and-career

ಬ್ಯಾಂಕ್​ಗಳಲ್ಲಿ ಉದ್ಯೋಗ​: 6,128 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಗಡುವು ವಿಸ್ತರಣೆ - IBPS

author img

By ETV Bharat Karnataka Team

Published : Jul 22, 2024, 12:35 PM IST

ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ದಿನಾಂಕವನ್ನು ಐಪಿಬಿಎಸ್ ವಿಸ್ತರಿಸಿದೆ.

IBPS Notification For 6128 clerk post july 29 is last date for apply
ಸಾಂದರ್ಭಿಕ ಚಿತ್ರ (ETV Bharat)

ಬೆಂಗಳೂರು: ಇನ್ಸುಟಿಟ್ಯೂಟ್​ ಆಫ್​ ಬ್ಯಾಂಕಿಂಗ್​ ಪರ್ಸನಲ್​ ಸೆಲೆಕ್ಷನ್​ (IBPS) ಅಧಿಸೂಚನೆ ಹೊರಡಿಸಿದ್ದ 6,128 ಕ್ಲರಿಕಲ್​ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಿಸಲಾಗಿದೆ. ಈ ಹಿಂದೆ ಮೂಲ ಅಧಿಸೂಚನೆಯಲ್ಲಿ ಅರ್ಜಿ ಸಲ್ಲಿಕೆಗೆ ಜುಲೈ 21 ಕಡೇಯ ದಿನವಾಗಿತ್ತು. ಇದೀಗ ಅಭ್ಯರ್ಥಿಗಳು ಜುಲೈ 28ರವರೆಗೂ ಅರ್ಜಿ ಸಲ್ಲಿಸಬಹುದು.

ಹುದ್ದೆಗಳ ವಿವರ: ಬ್ಯಾಂಕ್​ ಆಫ್​ ಬರೋಡಾ, ಕೆನರಾ ಬ್ಯಾಂಕ್​, ಯುಕೋ ಬ್ಯಾಂಕ್​, ಇಂಡಿಯನ್​ ಓವರ್​ಸೀಸ್​ ಬ್ಯಾಂಕ್​, ಬ್ಯಾಂಕ್​ ಆಫ್​ ಇಂಡಿ, ಸೆಂಟ್ರಲ್​ ಬ್ಯಾಂಕ್​ ಆಫ್​ ಇಂಡಿಯಾ, ಪಿಎನ್​ಬಿ, ಯುಬಿಐ, ಬ್ಯಾಂಕ್​ ಆಫ್​ ಮಹಾರಾಷ್ಟ್ರ, ಇಂಡಿಯನ್​ ಬ್ಯಾಂಕ್​, ಪಂಜಾಬ್​ ಮತ್ತು ಸಿಂಧ್​​ ಬ್ಯಾಂಕ್‌ಗಳಲ್ಲಿ ನೇಮಕಾತಿ ನಡೆಯಲಿದೆ. ಇವುಗಳಲ್ಲಿ ಕರ್ನಾಟಕಕ್ಕೆ 457 ಪೋಸ್ಟ್‌ಗಳಿವೆ.

ವಿದ್ಯಾರ್ಹತೆ: ಯಾವುದೇ ವಿಷಯದಲ್ಲಿ ಪದವಿ ಪೂರ್ಣಗೊಳಿಸಿರಬೇಕು.

ವಯೋಮಿತಿ: ಕನಿಷ್ಠ 20, ಗರಿಷ್ಠ 28 ವರ್ಷ ಪೂರ್ಣಗೊಳಿಸಿರಬೇಕು. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪ.ಜಾ, ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ, ವಿಶೇಷಚೇತನ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.

ಅರ್ಜಿ ಸಲ್ಲಿಕೆ: ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದು. ಪ.ಜಾ, ಪ.ಪಂ, ವಿಶೇಷಚೇತನ, ಇಎಸ್​ಎಂ ಅಭ್ಯರ್ಥಿಗಳಿಗೆ 175 ರೂ, ಇತರೆ ಅಭ್ಯರ್ಥಿಗಳಿಗೆ 850 ರೂ. ಅರ್ಜಿ ಶುಲ್ಕ ನಿಗದಿಸಲಾಗಿದೆ.

ಆಯ್ಕೆ ಪ್ರಕ್ರಿಯೆ: ಪ್ರಿಲಿಮ್ಸ್​ ಮತ್ತು ಮುಖ್ಯ ಪರೀಕ್ಷೆ ಮೂಲಕ ಆಯ್ಕೆ. ಬಳಿಕ ದಾಖಲಾತಿ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆ.

ಈ ಕುರಿತ ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ ಅಭ್ಯರ್ಥಿಗಳು ibps.in ಇಲ್ಲಿಗೆ ಭೇಟಿ ನೀಡಿ.

ಆರ್​ಆರ್​ಬಿ ಹುದ್ದೆಗಳು: ಕರ್ನಾಟಕ ಗ್ರಾಮೀಣ ಬ್ಯಾಂಕ್​ ಸೇರಿದಂತೆ ದೇಶದ ವಿವಿಧ ಪ್ರಾದೇಶಿಕ ಬ್ಯಾಂಕಿಂಗ್​ ವಲಯದಲ್ಲಿನ (RRB) 9,995 ಹುದ್ದೆಗಳಿಗೂ ಕೂಡ ಐಬಿಪಿಎಸ್​ ಅಧಿಸೂಚನೆ ಹೊರಡಿಸಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಜುಲೈ 27.

ನಿಗದಿತ ಹುದ್ದೆಗಳಲ್ಲಿ ಕರ್ನಾಟಕ ಗ್ರಾಮೀಣ​ ಬ್ಯಾಂಕ್​ನಲ್ಲಿ 386, ಕರ್ನಾಟಕ ವಿಕಾಸ್​ ಗ್ರಾಮೀಣ ಬ್ಯಾಂಕ್​ 200 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.

ಪದವಿ ಓದಿರುವ ಗರಿಷ್ಠ 40 ಮೀರಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದು. ಮೀಸಲಾತಿ ಅಭ್ಯರ್ಥಿಗಳಿಗೆ 175 ರೂ. ಇತರ ಅಭ್ಯರ್ಥಿಗಳಿಗೆ 850 ರೂ. ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. ಪ್ರಿಲಿಮ್ಸ್​ ಮತ್ತು ಮೇನ್ಸ್​ ಪರೀಕ್ಷೆ ಮೂಲಕ ಆಯ್ಕೆ ನಡೆಯಲಿದೆ. ಹೆಚ್ಚಿನ ಮಾಹಿತಿಗೆ ibps.in ಇಲ್ಲಿಗೆ ಭೇಟಿ ನೀಡಿ.

ಇದನ್ನೂ ಓದಿ: ಹಾವೇರಿ ಗ್ರಾಮ ಪಂಚಾಯತ್​ನಲ್ಲಿ ನೇಮಕಾತಿ: ಗ್ರಂಥಾಲಯ ಮೇಲ್ವಿಚಾರಕ ಹುದ್ದೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.