ETV Bharat / education-and-career

ಭಾರತೀಯ ನೌಕಾ ಸೇನಾ ನೇಮಕಾತಿಗೆ ಅಧಿಸೂಚನೆ ಹೊರಡಿಸಿದ ಎಸ್​​ಎಸ್​ಸಿ - ಭಾರತೀಯ ನೌಕ ಸೇನಾ ನೇಮಕಾತಿಗೆ

ಭಾರತೀಯ ನೌಕಾ ಸೇನೆ ಮತ್ತು ಭಾರತೀಯ ಕೋಸ್ಟ್​ ಗಾರ್ಡ್​ನಲ್ಲಿರುವ ಹುದ್ದೆಗಳ ಕುರಿತ ಮಾಹಿತಿ ಇಲ್ಲಿದೆ

indian cost guard and indian Navy job notification

author img

By ETV Bharat Karnataka Team

Published : Feb 21, 2024, 11:26 AM IST

ಬೆಂಗಳೂರು: ಭಾರತೀಯ ನೌಕಾ ಸೇನಾ ನೇಮಕಾತಿಗೆ ಸಿಬ್ಬಂದಿ ನೇಮಕಾತಿ ಆಯೋಗ ಅಧಿಸೂಚನೆ ಹೊರಡಿಸಿದೆ. ಒಟ್ಟು 254 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಯಲ್ಲಿ ಆಸಕ್ತಿ ಹೊಂದಿರುವ ಪದವೀಧರರು ಅರ್ಜಿ ಸಲ್ಲಿಸಬಹುದಾಗಿದೆ.

ಭಾರತೀಯ ನೌಕ ಸೇನಾ ನೇಮಕಾತಿ ಅಧಿಸೂಚನೆ
ಭಾರತೀಯ ನೌಕ ಸೇನಾ ನೇಮಕಾತಿ ಅಧಿಸೂಚನೆ

ಹುದ್ದೆಗಳ ವಿವರ:

  • ಜನರಲ್​ ಸರ್ವೀಸ್ - 54
  • ಪೈಲಟ್​ - 20
  • ನೌಕಾ ವಾಯು ಕಾರ್ಯಾಚರಣೆ ಅಧಿಕಾರಿ - 18
  • ಏರ್​ ಟ್ರಾಫಿಕ್​ ಕಂಟ್ರೋಲರ್​​ - 8
  • ಲಾಜಿಸ್ಟಿಕ್ಸ್​​​ - 30
  • ಎನ್​ಎಐಸಿ - 10
  • ಶಿಕ್ಷಣ - 18
  • ಇಂಜಿನಿಯರಿಂಗ್​ ಬ್ರಾಂಚ್​​ - 30
  • ನೌಕಾ ನಿರ್ಮಾತೃ - 20

ವಿದ್ಯಾರ್ಹತೆ : ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿಇ, ಬಿಟೆಕ್​​, ಎಂಬಿಎ, ಎಂಎಸ್ಸಿ, ಎಂಟೆಕ್​ ಪದವಿ ಹೊಂದಿರಬೇಕು.

ಆಯ್ಕೆ: ಈ ಹುದ್ದೆಗೆ ಅಭ್ಯರ್ಥಿಗಳನ್ನು ಮೆರಿಟ್​ ಪಟ್ಟಿ, ದಾಖಲಾತಿ ಪರಿಶೀಲನೆ, ವೈದ್ಯಕೀಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಈ ಹುದ್ದೆಗೆ ಫೆಬ್ರವರಿ 24 ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಮಾರ್ಚ್​ 10 ಆಗಿದೆ. ಈ ಹುದ್ದೆ ಕುರಿತು ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆ ಸೇರಿದಂತೆ ಇನ್ನಿತರ ಮಾಹಿತಿಗೆ ಅಭ್ಯರ್ಥಿಗಳು joinindiannavy.gov.in ಇಲ್ಲಿಗೆ ಭೇಟಿ ನೀಡಬಹುದು.

ಭಾರತೀಯ ಕೋಸ್ಟ್​​ ಗಾರ್ಡ್​ ನೇಮಕಾತಿ: ಭಾರತೀಯ ಕೋಸ್ಟ್​ ಗಾರ್ಡ್​​ನಲ್ಲಿ ಗ್ರೂಪ್​ ಎ ಗೆಜೆಡೆಡ್​​ ಆಫೀಸರ್​ ಮಟ್ಟದ ಅಸಿಸ್ಟಂಟ್​ ಕಮಾಂಡೆಟ್​ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 70 ಹುದ್ದೆಗಳ ನೇಮಕಾತಿ ನಡೆಯಲಿದೆ. ಇಂಜಿನಿಯರಿಂಗ್​ ಪದವಿ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ವಯೋಮಿತಿ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 21 ಮತ್ತು ಗರಿಷ್ಠ 25 ವರ್ಷ ವಯೋಮಿತಿ ಮೀರಿರಬಾರದು. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪ.ಜಾ, ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.

ಅರ್ಜಿ ಸಲ್ಲಿಕೆ: ಈ ಹುದ್ದೆಗಳಿಗೆ ಅನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಎಲ್ಲ ಅಭ್ಯರ್ಥಿಗಳಿಗೂ 300 ರೂ ಅರ್ಜಿಶುಲ್ಕ ನಿಗದಿಪಡಿಸಲಾಗಿದೆ.

ಆಯ್ಕೆ: ಈ ಹುದ್ದೆಗೆ 5 ಹಂತದಲ್ಲಿ ಅಭ್ಯರ್ಥಿಗಳ ಆಯ್ಕೆಯನ್ನು ನಡೆಸಲಾಗುವುದು. ಈ ಹುದ್ದೆಗೆ ಫೆ 19ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಮಾರ್ಚ್​ 6 ಆಗಿದೆ. ಈ ಹುದ್ದೆ ಕುರಿತು ಸಂಪೂರ್ಣ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ ಅಭ್ಯರ್ಥಿಗಳು indiancoastguard.gov.in ಇಲ್ಲಿಗೆ ಭೇಟಿ ನೀಡಬಹುದಾಗಿದೆ.

ಇದನ್ನೂ ಓದಿ: ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ನೇಮಕಾತಿ; 490 ಜೂನಿಯರ್​ ಎಕ್ಸಿಕ್ಯೂಟಿವ್ ಹುದ್ದೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.