ETV Bharat / education-and-career

ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ; ಐಟಿಬಿಪಿಯಲ್ಲಿ ಹೆಡ್​ ಕಾನ್ಸ್​ಟೇಬಲ್ ಹುದ್ದೆ ಭರ್ತಿಗೆ ಅಧಿಸೂಚನೆ - ITBP Recruitment

author img

By ETV Bharat Karnataka Team

Published : Jun 26, 2024, 5:16 PM IST

ಪದವೀಧರ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ.

Indo Tibetan Border Police Force Recruitment for Head constable
ಐಟಿಬಿಪಿ ನೇಮಕಾತಿ (ಸಂಗ್ರಹ ಚಿತ್ರ)

ಬೆಂಗಳೂರು: ಇಂಡೋ ಟಿಬೇಟಿಯನ್​ ಗಡಿ ಪೊಲೀಸ್​ ಪಡೆಯಲ್ಲಿ ಖಾಲಿ ಇರುವ 112 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಶಿಕ್ಷಣ ಮತ್ತು ಒತ್ತಡ ಸಮಾಲೋಚನೆ ಹುದ್ದೆಗಳು ಇವಾಗಿದ್ದು, ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.

indo-tibetan-border-police-force-recruitment-for-head-constable
ಅಧಿಸೂಚನೆ (ಐಟಿಬಿಪಿ)

ಹುದ್ದೆ: 112 ಹೆಡ್​ ಕಾನ್ಸ್​ಟೇಬಲ್​ (ಶಿಕ್ಷಣ ಮತ್ತು ಒತ್ತಡ ಸಮಾಲೋಚಕರು)

  • ಪುರುಷ: 96
  • ಮಹಿಳೆಯರು : 16

ವಿದ್ಯಾರ್ಹತೆ: ಅಭ್ಯರ್ಥಿಗಳು ಸೈಕಾಲಾಜಿಯಲ್ಲಿ ಪದವಿ ಅಥವಾ ಪದವಿ ಅಥವಾ ಶಿಕ್ಷಣದಲ್ಲಿ ಪದವಿಯನ್ನು ಹೊಂದಿರಬೇಕು.

ವಯೋಮಿತಿ: ಅಭ್ಯರ್ಥಿಗಳು ಕನಿಷ್ಠ 20, ಗರಿಷ್ಠ ವಯೋಮಿತಿ 25 ವರ್ಷ. ಐಟಿಬಿಪಿ ನಿಯಮದ ಅನುಸಾರ ಮೀಸಲಾತಿ ಸಡಿಲಿಕೆ ಮಾಡಲಾಗಿದೆ.

ಅರ್ಜಿ ಸಲ್ಲಿಕೆ: ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಮಹಿಳಾ ಅಭ್ಯರ್ಥಿಗಳು ಮತ್ತು ನಿವೃತ್ತ ಸೇವಾಧಾರರಿಗೆ ಅರ್ಜಿ ಶುಲ್ಕ ವಿನಾಯಿತಿ ನೀಡಲಾಗಿದೆ. ಇತರೆ ಅಭ್ಯರ್ಥಿಗಳಿಗೆ 100 ರೂ. ಅರ್ಜಿ ಶುಲ್ಕ ನಿಗದಿಸಲಾಗಿದೆ.

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ದೈಹಿಕ ಸಾಮರ್ಥ್ಯ ಪರೀಕ್ಷೆ, ಲಿಖಿತ, ದಾಖಲಾತಿ ಪರಿಶೀಲನೆ, ವೈದ್ಯಕೀಯ ಪ್ರವೇಶಾತಿ, ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಈ ಹುದ್ದೆಗಳಿಗೆ ಅಭ್ಯರ್ಥಿಗಳು ಜುಲೈ 7ರಿಂದ ಅರ್ಜಿ ಸಲ್ಲಿಕೆ ಮಾಡಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನ ಆಗಸ್ಟ್​ 5 ಆಗಿದೆ.

ಈ ಹುದ್ದೆ ಕುರಿತು ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ ಅಭ್ಯರ್ಥಿಗಳು recruitment.itbpolice.nic.in ಭೇಟಿ ನೀಡಿ.

ಬಿಎಸ್​​ಎಫ್​ನಲ್ಲಿ ಹುದ್ದೆ; ಗಡಿ ಭದ್ರತಾ ಪಡೆಯಲ್ಲಿನ 1526 ಸಹಾಯಕ ಸಬ್​ ಇನ್ಸ್​​ಪೆಕ್ಟರ್​ (ಮಿನಿಸ್ಟ್ರಿಯಲ್​) ಮತ್ತು ಹೆಡ್​ ಕಾನ್ಸ್​ಟೇಬಲ್ (ಕ್ಲರ್ಕ್​)​ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. 243 ಸಹಾಯಕ ಸಬ್​ ಇನ್ಸ್​ಪೆಕ್ಟರ್​ ಮತ್ತು ವಾರೆಂಟ್​ ಆಫೀಸರ್​, 1283 ಹೆಡ್​​ ಕಾನ್ಸ್​ಟೇಬಲ್​​ ಮತ್ತು ಹವೀಲ್ದಾರ್​ (ಕ್ಲರ್ಕ್​) ಹುದ್ದೆಗಳ ನೇಮಕಾತಿ ನಡೆಯಲಿದೆ.

ಅಭ್ಯರ್ಥಿಗಳು ಪಿಯುಸಿ ಪೂರ್ಣಗೊಳಿಸಿರಬೇಕು. ಕ್ಲರ್ಕ್​ ಹುದ್ದೆಗಳ ನೇಮಕಾತಿ ಹಿನ್ನೆಲೆ ಅಭ್ಯರ್ಥಿಗಳು ಟೈಪಿಂಗ್​ ಅನುಭವ ಹೊಂದಿರಬೇಕು. ಅರ್ಜಿ ಸಲ್ಲಿಕೆಗೆ ಗರಿಷ್ಠ ವಯೋಮಿತಿ 25 ವರ್ಷ.

ಅಭ್ಯರ್ಥಿಗಳನ್ನು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಲಿಖಿತ ಪರೀಕ್ಷೆ, ದೈಹಿಕ ದಾರ್ಢ್ಯತೆ, ಕೌಶಲ್ಯ ಪರೀಕ್ಷೆ, ದಾಖಲಾತಿ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುವುದು.

ಈ ಹುದ್ದೆಗಳಿಗೆ ಅಭ್ಯರ್ಥಿಗಳು ಜೂನ್​ 9ರಿಂದ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಜುಲೈ 8 ಆಗಿದೆ. ಈ ಹುದ್ದೆ ಕುರಿತು ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ ಅಭ್ಯರ್ಥಿಗಳು rectt.bsf.gov.in ಇಲ್ಲಿಗೆ ಭೇಟಿ ನೀಡಬಹುದಾಗಿದೆ.

ಇದನ್ನೂ ಓದಿ: ಪಿಯುಸಿ, ಡಿಪ್ಲೊಮಾ ಅರ್ಹತೆ; ಇಂಡಿಯನ್ ಕೋಸ್ಟ್ ಗಾರ್ಡ್‌ನಲ್ಲಿ 320 ನಾವಿಕ್, ಮೆಕ್ಯಾನಿಕ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.