ETV Bharat / education-and-career

ಐಟಿಬಿಪಿಯಲ್ಲಿ 545 ಕಾನ್ಸ್​ಟೇಬಲ್​ ಹುದ್ದೆ; ಎಸ್​ಎಸ್​ಎಲ್​ಸಿ​ ಆಗಿದ್ರೆ ಅರ್ಜಿ ಸಲ್ಲಿಸಿ - ITBP NOTIFICATION

ಈ ಹುದ್ದೆಗೆ ಅರ್ಜಿ ಸಲ್ಲಿಸಲು ಕಡೆಯ ದಿನಾಂಕ ನವೆಂಬರ್​​ 6 ಆಗಿದೆ.

ITBP Notification for Driver Constable jobs for 10th pass candidates
ITBP (ANI)
author img

By ETV Bharat Karnataka Team

Published : Oct 17, 2024, 3:05 PM IST

ಬೆಂಗಳೂರು: ಇಂಡೋ - ಟಿಬೆಟಿಯನ್​ ಬಾರ್ಡರ್​ ಪೊಲೀಸ್​ ಫೋರ್ಸ್​ನಲ್ಲಿ ಖಾಲಿ ಇರುವ 545 ಕಾನ್ಸ್​ಟೇಬಲ್​ (ಡ್ರೈವರ್​) ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಭಾರತದಾದ್ಯಂತ ಈ ನೇಮಕಾತಿ ನಡೆಯಲಿದ್ದು, ಅರ್ಹ ಮತ್ತು ಆಸಕ್ತರು ಅರ್ಜಿ ಸಲ್ಲಿಸಬಹುದು.

ವಿದ್ಯಾರ್ಹತೆ: ಅಭ್ಯರ್ಥಿಗಳು 10ನೇ ತರಗತಿ ಪಾಸ್​ ಆಗಿರಬೇಕು. ವಾಹನ ಚಾಲನೆ ಪರವಾನಿಗೆ ಹೊಂದಿರುವುದು ಕಡ್ಡಾಯ.

ವಯೋಮಿತಿ: ಅಭ್ಯರ್ಥಿಗಳ ವಯಸ್ಸು ಕನಿಷ್ಠ 21 ಮತ್ತು ಗರಿಷ್ಠ 27 ವರ್ಷ. ಪ.ಜಾ, ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ ಹಾಗೂ ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ಇರಲಿದೆ.

ITBP Notification for Driver Constable jobs for 10th pass candidates
ಅಧಿಸೂಚನೆ (ಐಟಿಬಿಪಿ)

ಅರ್ಜಿ ಸಲ್ಲಿಕೆ: ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಪ.ಜಾ, ಪ.ಪಂ, ನಿವೃತ್ತ ಸೇವಾದಾರರಿಗೆ ಅರ್ಜಿ ಶುಲ್ಕ ವಿನಾಯಿತಿ ನೀಡಲಾಗಿದೆ. ಸಾಮಾನ್ಯ, ಒಬಿಸಿ, ಇಡಬ್ಲ್ಯೂಸಿ ಅಭ್ಯರ್ಥಿಗಳಿಗೆ 100 ರೂ. ಅರ್ಜಿ ಶುಲ್ಕ ವಿಧಿಸಲಾಗಿದೆ.

ಆಯ್ಕೆ ಪ್ರಕ್ರಿಯೆ: ಈ ಹುದ್ದೆಗೆ ದೈಹಿಕ ಸಾಮರ್ಥ್ಯ ಮತ್ತು ದೈಹಿಕ ಗುಣಮಟ್ಟ ಪರೀಕ್ಷೆ, ಲಿಖಿತ ಪರೀಕ್ಷೆ, ದಾಖಲಾತಿ ಪರಿಶೀಲನೆ, ಕೌಶಲ್ಯ ಪರೀಕ್ಷೆ, ವೈದ್ಯಕೀಯ ಪರೀಕ್ಷೆ ನಡೆಸಲಾಗುವುದು.

ಈ ಹುದ್ದೆಗೆ ಅಕ್ಟೋಬರ್​ 8 ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ನವೆಂಬರ್​​ 6 ಆಗಿದೆ.

ಈ ಹುದ್ದೆ ಕುರಿತು ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ ಅಭ್ಯರ್ಥಿಗಳು recruitment.itbpolice.nic.in ಭೇಟಿ ನೀಡಬಹುದು.

ಸಿಆರ್​ಪಿಎಫ್​ ನೇಮಕಾತಿ: ಕೇಂದ್ರಿಯ ಮೀಸಲು ಪೊಲೀಸ್​ ಪಡೆ (ಸಿಆರ್​ಪಿಎಫ್​)ನಲ್ಲಿ 124 ಸಬ್​ ಇನ್ಸ್​ಪೆಕ್ಟರ್​, ಮೋಟಾರ್​ ಮೆಕಾನಿಕ್​ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಐಟಿಐ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.

ಅಭ್ಯರ್ಥಿಗಳು ಗರಿಷ್ಠ ವಯೋಮಿತಿ 56 ವರ್ಷವಾಗಿದೆ. ಈ ಹುದ್ದೆಗಳನ್ನು ನಿಯೋಜನೆ ಮೇರೆಗೆ ನೇಮಕಾತಿ ನಡೆಸಲಾಗುವುದು. ಈ ಹುದ್ದೆಗಳಿಗೆ ಅಭ್ಯರ್ಥಿಗಳು ಆಫ್​ಲೈನ್​ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ.

ಸಿಆರ್​ಪಿಎಫ್​ನ ಅಧಿಕೃತ ಜಾಲತಾಣದಲ್ಲಿ ಲಭ್ಯವಿರುವ ನಿಗದಿತ ಅರ್ಜಿಯನ್ನು ಭರ್ತಿ ಮಾಡಿ ಅಭ್ಯರ್ಥಿಗಳು ಅದರೊಂದಿಗೆ ಸಂಬಂಧಿಸಿದ ದಾಖಲಾತಿಯೊಂದಿಗೆ ಆಫ್​ಲೈನ್​ ಮೂಲಕ ಅರ್ಜಿ ಪೋಸ್ಟ್​ ಮಾಡಬೇಕಿದೆ. ಈ ಹುದ್ದೆಗೆ ಅಕ್ಟೋಬರ್​ 10ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಡಿಸೆಂಬರ್​ 9 ಆಗಿದೆ.

ಈ ಹುದ್ದೆ ಕುರಿತ ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ ಅಭ್ಯರ್ಥಿಗಳು rect.crpf.gov.in ಇಲ್ಲಿಗೆ ಭೇಟಿ ನೀಡಿ.

ಇದನ್ನೂ ಓದಿ: PUC ಆದವರಿಗೆ ರೈಲ್ವೆಯಲ್ಲಿ ಭರ್ಜರಿ ಉದ್ಯೋಗಾವಕಾಶ: ಮೊದಲ ತಿಂಗಳಿಂದಲೇ 40 ಸಾವಿರ ಸಂಬಳ, ಅರ್ಜಿ ಸಲ್ಲಿಕೆಗೆ ಕೊನೆ ದಿನಾಂಕ ಯಾವಾಗ?

ETV Bharat Logo

Copyright © 2025 Ushodaya Enterprises Pvt. Ltd., All Rights Reserved.