ಹೈದರಾಬಾದ್: ದೇಶ ವಿವಿಧ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಪ್ರವೇಶಕ್ಕಾಗಿ ನಡೆಸಲಾಗುವ ಜಂಟಿ ಪ್ರವೇಶ ಪರೀಕ್ಷೆ (ಜೆಇಇ) ಮೇನ್ಸ್ 2025ಕ್ಕೆ ಆನ್ಲೈನ್ ಅರ್ಜಿ ಸಲ್ಲಿಕೆಗೆ ಇನ್ನೂ ಐದು ದಿನ ಮಾತ್ರ ಬಾಕಿ ಇದೆ. ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ವೆಬ್ ತಾಣದ ಮೂಲಕ ಅರ್ಜಿಗಳನ್ನು ಸಲ್ಲಿಕೆ ಮಾಡಬಹುದಾಗಿದೆ. ಈಗಾಗಲೇ ದೇಶಾದ್ಯಂತ ಲಕ್ಷಾಂತರ ವಿದ್ಯಾರ್ಥಿಗಳು ನೋಂದಣಿ ಮಾಡಿದ್ದು, 9 ಲಕ್ಷ ಅರ್ಜಿಗಳು ಸಲ್ಲಿಕೆಯಾಗಿದೆ.
ಈ ಅವಧಿಯ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಅಕ್ಟೋಬರ್ 28ರಿಂದ ಪ್ರಾರಂಭವಾಗಿದ್ದು, 2024ರಲ್ಲಿ ಜನವರಿ ಅವಧಿಯಲ್ಲಿ 12 ಲಕ್ಷ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದರು.
Dear @NTA_Exams @dpradhanbjp kindly extend the registration deadline for JEE Main 2025. Many students couldn’t apply due to the requirement of the OBC-NCL certificate during registration. This extension would ensure equal opportunities for all aspiring candidates. #JEEMain2025
— Er.Nirmal Yadav (@nirmalyadav484) November 16, 2024
ಕಳೆದ ಬಾರಿಗೆ ಹೋಲಿಕೆ ಮಾಡಿದಾಗ 2025 ಅವಧಿಯಲ್ಲಿ ವಿದ್ಯಾರ್ಥಿಗಳ ನೋಂದಣಿ ಕೊಂಚ ಕಡಿಮೆ ಆಗಿರುವಂತೆ ಕಂಡಿದೆ. ಮತ್ತೊಂದೆಡೆ ವಿದ್ಯಾರ್ಥಿಗಳು ಅರ್ಜಿ ಸಲ್ಲಿಕೆ ವೇಳೆ ಒಬಿಸಿ ಮತ್ತು ಇಡಬ್ಲ್ಯೂಎಸ್ ಪ್ರಮಾಣ ಪತ್ರದ ಸಮಸ್ಯೆಯನ್ನು ಎದುರಿಸುತ್ತಿದ್ದು, ಈ ಅರ್ಜಿ ಸಲ್ಲಿಕೆ ದಿನಾಂಕವನ್ನು ಮುಂದೂಡುವಂತೆ ಮನವಿ ಮಾಡುತ್ತಿದ್ದಾರೆ.
ಈ ಕುರಿತು ಮಾತನಾಡಿರುವ ಶಿಕ್ಷಣ ತಜ್ಞ ದೇವ್ ಶರ್ಮಾ, ಕಡೆಯ ದಿನಾಂಕ ವಿಸ್ತರಣೆ ಮಾಡುವಂತೆ ಈಗಾಗಲೇ ಅಭ್ಯರ್ಥಿಗಳು ಬೇಡಿಕೆ ಇಟ್ಟಿದ್ದಾರೆ. ಈ ಸಂಬಂಧ ರಾಷ್ಟ್ರೀಯ ಪರೀಕ್ಷೆ ಏಜೆನ್ಸಿ ಪ್ರಧಾನ ನಿರ್ದೇಶಕರಿಗೆ ಸಾಮಾಜಿಕ ಜಾಲತಾಣ ಮತ್ತು ಇಮೇಲ್ ಮೂಲಕ ಮನವಿ ಮಾಡಲಾಗಿದೆ. ಇದೇ ವೇಳೆ ಒಬಿಸಿ ಮತ್ತು ಇಡಬ್ಲ್ಯೂಸಿ ಪ್ರಮಾಣ ಪತ್ರದಲ್ಲಿ ಹೆಸರು ಮತ್ತು ಪ್ರಮಾಣ ಪತ್ರ ನೀಡಿದ ದಿನವನ್ನು ನಿಗದಿ ಪಡಿಸುವಂತೆ ವಿದ್ಯಾರ್ಥಿಗಳು ಬೇಡಿಕೆ ಇಟ್ಟಿದ್ದಾರೆ. ಹಳೆಯ ಪ್ರಮಾಣ ಪತ್ರದಲ್ಲಿ ಈ ದಿನಾಂಕ ಮತ್ತು ಹೆಸರುಗಳು ನೋಂದಣಿ ಆಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಇದೀಗ ಅವರು ಮತ್ತೊಮ್ಮೆ ಅರ್ಜಿ ಸಲ್ಲಿಕೆ ಮಾಡಬೇಕಾದ ಪರಿಸ್ಥಿತಿ ಎದುರಾಗಿದ್ದು, ಇದಕ್ಕಾಗಿ ಸಮಯ ನೀಡುವಂತೆ ಮನವು ಮಾಡಿದ್ದಾರೆ.
ಅರ್ಜಿ ಸಲ್ಲಿಕೆ ವಿವರ:
ಆನ್ಲೈನ್ ಅರ್ಜಿ ಸಲ್ಲಿಕೆ ಆರಂಭ ಅಕ್ಟೋಬರ್ 28
ಆನ್ಲೈನ್ ಅರ್ಜಿ ಸಲ್ಲಿಕೆ ಕಡೇಯ ದಿನ ನವೆಂಬರ್ 22
ಪರೀಕ್ಷೆ ನಡೆಯುವ ಸಾಧ್ಯತೆ ದಿನಗಳು 2025ರ ಜನವರಿ 22 ರಿಂದ 31
ಅರ್ಜಿ ಸಲ್ಲಿಕೆ:
ಅಭ್ಯರ್ಥಿಗಳು ಅಧಿಕೃತ ಜಾಲತಾಣ jeemain.nta.nic.in. ಭೇಟಿ ನೀಡಬೇಕು
ಇನ್ನು ಆನ್ಲೈನ್ ಜೆಇಇ ಮೇನ್ಸ್ 2025 ಸೆಷನ್- 1 ಅರ್ಜಿ ಸಲ್ಲಿಕೆ ಕ್ಲಿಕ್ ಮಾಡಿ
ಬಳಿಕ ಲಾಗಿನ್ ಆಗಿ, ಅರ್ಜಿ ಶುಲ್ಕ ಪಾವತಿ ಮಾಡಿ, ನೋಂದಣಿ ಮಾಡಿಕೊಳ್ಳಬೇಕು.
ಇದನ್ನೂ ಓದಿ: ಬೆಂಗಳೂರು ವಿವಿಯಲ್ಲಿ ಉದ್ಯೋಗ: ಲೈಬ್ರರಿ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ