ETV Bharat / education-and-career

ಎಂಎಸ್ಸಿ ಪದವೀಧರರಿಗೆ ಬೆಂಗಳೂರಿನ ರೇಷ್ಮೆ ಮಂಡಳಿಯಲ್ಲಿದೆ ಉದ್ಯೋಗಾವಕಾಶ - JOBS IN CENTRAL SILK BOARD - JOBS IN CENTRAL SILK BOARD

ಎಂಎಸ್ಸಿ ಪದವೀಧರರಿಗೆ ಬೆಂಗಳೂರಿನ ರೇಷ್ಮೆ ಮಂಡಳಿಯಲ್ಲಿ ಉದ್ಯೋಗಾವಕಾಶವಿದೆ. ಈ ಹುದ್ದೆಗೆ ಆಯ್ಕೆಯಾದವರಿಗೆ ಮಾಸಿಕ ವೇತನ 56,100 ರಿಂದ 1,77,500 ರೂ ನಿಗದಿಸಲಾಗಿದೆ.

Job opportunity for Msc holders Central Silk board
ಉದ್ಯೋಗ ಮಾಹಿತಿ (ಈಟಿವಿ ಭಾರತ್​)
author img

By ETV Bharat Karnataka Team

Published : Aug 29, 2024, 3:26 PM IST

ಬೆಂಗಳೂರು: ಕೇಂದ್ರ ಜವಳಿ ಸಚಿವಾಲಯದ ನಿಯಂತ್ರಣದಲ್ಲಿರುವ ಕೇಂದ್ರ ರೇಷ್ಮೆ ಮಂಡಳಿಯಲ್ಲಿ (ಸಿಎಸ್​ಬಿ) 122 ಸೈಂಟಿಸ್ಟ್​ ಬಿ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಕೃಷಿ ವಿಜ್ಞಾನದಲ್ಲಿ ಪದವಿ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಬೆಂಗಳೂರಿನ ಕಚೇರಿಗೆ ನೇಮಕಾತಿ ನಡೆಯಲಿದ್ದು, ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.

ಒಟ್ಟು ಹುದ್ದೆ: ಒಟ್ಟು 122 ಹುದ್ದೆ

ವಿದ್ಯಾರ್ಹತೆ: ಅಭ್ಯರ್ಥಿಗಳು ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಅಥವಾ ಕೃಷಿ ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿಯನ್ನು ಹೊಂದಿರಬೇಕು.

Job opportunity for Msc holders Central Silk board
ಅಧಿಸೂಚನೆ (ಕೇಂದ್ರ ರೇಷ್ಮೆ ಮಂಡಳಿ ಜಾಲತಾಣ)

ವಯೋಮಿತಿ: ಅಭ್ಯರ್ಥಿಗಳ ವಯಸ್ಸು ಸೆಪ್ಟೆಂಬರ್​ 2, 2024ಕ್ಕೆ ಅನುಗುಣವಾಗಿ 35 ವರ್ಷ ಮೀರಿರಬಾರದು. ಮೀಸಲಾತಿ ಅಭ್ಯರ್ಥಿಗಳಿಗೆ ಸರ್ಕಾರದ ನಿಯಮಾವಳಿಯಂತೆ ವಯೋಮಿತಿ ಸಡಿಲಿಕೆ ಇರಲಿದೆ.

ವೇತನ: ಮಾಸಿಕ 56,100 ರಿಂದ 1,77,500 ರೂ.

ಆಯ್ಕೆ : ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯಲಿದೆ.

ಅಭ್ಯರ್ಥಿಗಳು ಈ ಹುದ್ದೆಗೆ ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಪರಿಶಿಷ್ಟ ಜಾತಿ, ಪ.ಪಂ ಮತ್ತು ವಿಕಲಚೇತನ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ. ಇತರೆ ಅಭ್ಯರ್ಥಿಗಳಿಗೆ 1000 ರೂ. ಅರ್ಜಿ ಶುಲ್ಕ ನಿಗದಿಸಲಾಗಿದೆ.

ಈ ಹುದ್ದೆಗೆ ಆಗಸ್ಟ್​ 22 ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಸೆಪ್ಟೆಂಬರ್​ 5 ಕಡೆಯ ದಿನವಾಗಿದೆ.

ಈ ಹುದ್ದೆ ಕುರಿತ ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ ಅಭ್ಯರ್ಥಿಗಳು csb.gov.in ಇಲ್ಲಿಗೆ ಭೇಟಿ ನೀಡಿ.

ಹೆದ್ದಾರಿ ಪ್ರಾಧಿಕಾರದಲ್ಲಿ ಹುದ್ದೆ: ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಲ್ಲಿ ಖಾಲಿ ಇರುವ ಜನರಲ್​ ಮ್ಯಾನೇರ್​ ಮತ್ತು ಡೆಪ್ಯೂಟಿ ಜನರಲ್​ ಮ್ಯಾನೇಜರ್​ ಮತ್ತು ಮ್ಯಾನೇಜರ್​ ಟೆಕ್ನಿಕಲ್​ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಈ ಹುದ್ದೆಗಳನ್ನು ಡೆಪ್ಯೂಟೆಷನ್ (ನಿಯೋಜನೆ) ಮೇರೆಗೆ ಭರ್ತಿ ಮಾಡಲಾಗುತ್ತಿದ್ದು, ಅಭ್ಯರ್ಥಿಗಳು ರಾಜ್ಯ ಅಥವಾ ರಾಷ್ಟ್ರೀಯ ಹೆದ್ದಾರಿಯಲ್ಲಿ 9 ವರ್ಷ ಕಾರ್ಯ ನಿರ್ವಹಿಸಿದ ಅನುಭವ ಹೊಂದಿರಬೇಕು.

ಈ ಹುದ್ದೆಗಳಿಗೆ ಅಭ್ಯರ್ಥಿಗಳು ಆಫ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಸೆಪ್ಟೆಂಬರ್​ 23 ಆಗಿದೆ. ಈ ಹುದ್ದೆ ಕುರಿತ ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ nhai.gov.in ಭೇಟಿ ನೀಡಿ.

ಇದನ್ನೂ ಓದಿ: ಪದವಿ ಆದವರಿಗೆ ಇಂಡಿಯನ್​ ಓವರ್​ಸೀಸ್​, ಯೂನಿಯನ್​ ಬ್ಯಾಂಕ್​ನಲ್ಲಿ ಅಪ್ರೆಂಟಿಸ್​ ಹುದ್ದೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.