ಹೈದರಾಬಾದ್: ಬೆಂಗಳೂರಿನ ಇಂಡಿಯನ್ ಇನ್ಸುಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ (ಐಐಎಂಬಿ)ಯಲ್ಲಿ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಬೋಧಕೇತರ ಹುದ್ದೆಗಳು ಇವಾಗಿದ್ದು, ಒಂದು ವರ್ಷದ ಅವಧಿಗೆ ನೇಮಕಾತಿ ನಡೆಸಲಾಗುವುದು. ಅಭ್ಯರ್ಥಿಗಳ ಕಾರ್ಯಕ್ಷಮತೆ ಆಧಾರದ ಮೇಲೆ ಈ ಹುದ್ದೆಯನ್ನು ಮೂರು ವರ್ಷಗಳ ಕಾಲ ವಿಸ್ತರಣೆ ಮಾಡಲಾಗುವುದು.
ಹುದ್ದೆ ವಿವರ: ಐಐಎಂಬಿಯಲ್ಲಿರುವ ಅಕಾಡೆಮಿಕ್ ಅಸೋಸಿಯೇಟ್- ಪಬ್ಲಿಕ್ ಪಾಲಿಸಿ ಏರಿಯಾ ಹುದ್ದೆ ಭರ್ತಿಗೆ ಕ್ರಮ
ವಿದ್ಯಾರ್ಹತೆ: ಅರ್ಥಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು.
ವೇತನ: ಮಾಸಿಕ 38,000 - 44,000 ರೂ.
ಆಯ್ಕೆ ಪ್ರಕ್ರಿಯೆ: ಈ ಹುದ್ದೆಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು
ಅರ್ಜಿ ಸಲ್ಲಿಕೆ: ಈ ಹುದ್ದೆಗೆ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಈ ಹುದ್ದೆಗೆ ಜನವರಿ 23 ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಿದ್ದು, ಅರ್ಜಿ ಸಲ್ಲಿಸಲು ಕಡೆಯ ದಿನಾಂಕ ಫೆಬ್ರವರಿ 6 ಆಗಿದೆ.
ಈ ಹುದ್ದೆ ಕುರಿತು ಹೆಚ್ಚಿನ ಮಾಹಿತಿ ಮತ್ತು ಅರ್ಜಿ ಸಲ್ಲಿಕೆಗೆ ಅಭ್ಯರ್ಥಿಗಳು iimb.ac.in ಇಲ್ಲಿಗೆ ಭೇಟಿ ನೀಡಬಹುದಾಗಿದೆ.
ಐಐಎಸ್ಸಿಯಲ್ಲಿದೆ ಹಣಕಾಸು ನಿಯಂತ್ರಣಾಧಿಕಾರಿ ಹುದ್ದೆ
ಬೆಂಗಳೂರಿಯ ಇಂಡಿಯನ್ ಇನ್ಸುಟಿಟ್ಯೂಟ್ ಆಫ್ ಸೈನ್ಸ್ನಲ್ಲಿ (ಐಐಎಸ್ಸಿ) ಹಣಕಾಸು ನಿಯಂತ್ರಣಾಧಿಕಾರಿ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ತಾತ್ಕಾಲಿಕ ಅವಧಿಗೆ ಈ ಹುದ್ದೆ ನೇಮಕಾತಿ ನಡೆಸಲಾಗುವುದು.
ಹುದ್ದೆ ವಿವರ: ಐಐಎಸ್ಸಿಯಲ್ಲಿ ಹಣಕಾಸು ನಿಯಂತ್ರಣಾಧಿಕಾರಿ ಹುದ್ದೆಗೆ ನೇರ ನೇಮಕಾತಿ, ನಿಯೋಜನೆ ಮತ್ತು ಗುತ್ತಿಗೆ ಆಧಾರದ ಮೇಲೆ ನೇಮಕಾತಿ ನಡೆಸಲಾಗುವುದು.
ವಿದ್ಯಾರ್ಹತೆ: ಅಭ್ಯರ್ಥಿಯು ಸ್ನಾತಕೋತ್ತರ ಪದವಿಯನ್ನು ಹೊಂದಿರಬೇಕು.
ಅನುಭವ: ಅಭ್ಯರ್ಥಿಗಳು ಕೇಂದ್ರ ಅಥವಾ ರಾಜ್ಯ ಅಥವಾ ವಿಶ್ವವಿದ್ಯಾಲಯ ಅಥವಾ ಪಿಎಸ್ಯುನಲ್ಲಿ ಅಕೌಂಟ್ಸ್, ಆಡಿಟ್, ಹಣಕಾಸು ನಿರ್ವಹಣೆ ವಿಷಯದಲ್ಲಿ ಕಾರ್ಯ ನಿರ್ವಹಿಸಿದ ಅನುವ ಹೊಂದಿರಬೇಕು.
ವಯೋಮಿತಿ: ಈ ಹುದ್ದೆಗೆ ಅರ್ಜಿ ಸಲ್ಲಿಕೆಗೆ ಗರಿಷ್ಠ ವಯೋಮಾನ 55 ವರ್ಷ ಆಗಿದೆ.
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಫೆಬ್ರವರಿ 8 ಆಗಿದೆ.
ಈ ಹುದ್ದೆ ಕುರಿತು ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ ಅಭ್ಯರ್ಥಿಗಳು iisc.ac.in ಇಲ್ಲಿಗೆ ಭೇಟಿ ನೀಡಬಹುದಾಗಿದೆ.
ಇದನ್ನೂ ಓದಿ: ಮಹಿಳಾ, ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಗುತ್ತಿಗೆ ಆಧಾರಿತ ಹುದ್ದೆಗಳಿಗೆ ಅರ್ಜಿ ಆಹ್ವಾನ