ETV Bharat / education-and-career

ಬಳ್ಳಾರಿ: ಗ್ರಾಮ ಪಂಚಾಯತ್​ನಲ್ಲಿ ಉದ್ಯೋಗ; ಪಿಯುಸಿ ತೇರ್ಗಡೆಯಾದವರಿಗೆ ಅವಕಾಶ - ಬಳ್ಳಾರಿ ಗ್ರಾಮ ಪಂಚಾಯತ್

ಬಳ್ಳಾರಿ ಜಿಲ್ಲೆಯ ವಿವಿಧ ತಾಲೂಕು ವ್ಯಾಪ್ತಿಯ ಗ್ರಾಮಗಳಲ್ಲಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಮೇಲ್ವಿಚಾರಕರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.

Ballari Gram Panchayat
ಬಳ್ಳಾರಿ ಗ್ರಾಮ ಪಂಚಾಯಿತಿ
author img

By ETV Bharat Karnataka Team

Published : Feb 12, 2024, 3:12 PM IST

ಬೆಂಗಳೂರು: ಬಳ್ಳಾರಿಯ ಗ್ರಾಮ ಪಂಚಾಯಿತಿಗಳಲ್ಲಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಮೇಲ್ವಿಚಾರಕರ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಒಟ್ಟು 14 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಅರ್ಹ ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದು.

ಹುದ್ದೆಗಳ ವಿವರ:

  • ಸಂಡೂರು- 8
  • ಬಳ್ಳಾರಿ- 4
  • ಸಿರುಗುಪ್ಪ- 2

ವಿದ್ಯಾರ್ಹತೆ: ಪಿಯುಸಿ. ಸರ್ಟಿಫಿಕೇಷನ್​ ಕೋರ್ಸ್​ ಇನ್​​ ಲೈಬ್ರರಿ ಸೈನ್ಸ್​ ಪ್ರಮಾಣಪತ್ರ ಪಡೆದಿರಬೇಕು. ಕನಿಷ್ಠ 3 ತಿಂಗಳ ಕಂಪ್ಯೂಟರ್​ ಕೋರ್ಸ್​ ಉತ್ತೀರ್ಣರಾಗಿರಬೇಕು. ಸರ್ಟಿಫಿಕೇಷನ್​ ಕೋರ್ಸ್​ ಇನ್​ ಲೈಬ್ರರಿ ಸೈನ್ಸ್​ ಪದವಿ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸದೇ ಇದ್ದಲ್ಲಿ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳನ್ನು ಹುದ್ದೆಗೆ ಪರಿಗಣಿಸಲಾಗುತ್ತದೆ.

ವಿಶೇಷ ಸೂಚನೆ: ಅಭ್ಯರ್ಥಿಗಳು ಸಂಬಂಧಪಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಿವಾಸಿಗಳಾಗಿರಬೇಕು.

ವಯೋಮಿತಿ: ಕನಿಷ್ಠ 18, ಗರಿಷ್ಠ 35 ವರ್ಷಗಳ ವಯೋಮಿತಿ ಹೊಂದಿರಬೇಕು. ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ 1 ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.

ಅರ್ಜಿ ಸಲ್ಲಿಕೆ: ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದು. ಎಲ್ಲಾ ವರ್ಗದ ಅಭ್ಯರ್ಥಿಗಳಿಗೂ ಅರ್ಜಿ ಶುಲ್ಕ ವಿನಾಯಿತಿ ಇದೆ.

ಪಿಯುಸಿ ಅಂಕಪಟ್ಟಿ, ಸರ್ಟಿಫಿಕೇಟ್​ ಕೋರ್ಸ್​​ ಇನ್​ ಲೈಬ್ರರಿ ಸೈನ್ಸ್​​ ಅಂಕಪಟ್ಟಿ, ವಾಸಸ್ಥಳ ಪ್ರಮಾಣ ಪತ್ರ, ಜಾತಿ ಪ್ರಮಾಣ ಪತ್ರ, ವಾಸಸ್ಥಳ ಪ್ರಮಾಣ ಪತ್ರ ಸೇರಿದಂತೆ ಪ್ರಮುಖ ದಾಖಲೆಯೊಂದಿಗೆ ಅರ್ಜಿ ಸಲ್ಲಿಸಬೇಕು.

ಆಯ್ಕೆ: ಮೆರಿಟ್​ ಆಧಾರದ ಮೇಲೆ ದಾಖಲಾತಿ ಪರಿಶೀಲನೆಯ ಬಳಿಕ ಅಭ್ಯರ್ಥಿಗಳ ಆಯ್ಕೆ. ಅಭ್ಯರ್ಥಿಗಳು ಫೆಬ್ರವರಿ 8ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಕ ಫೆಬ್ರವರಿ 28 ಆಗಿದೆ. ಈ ಕುರಿತು ಹೆಚ್ಚಿನ ಮಾಹಿತಿ, ಅಧಿಕೃತ ಅಧಿಸೂಚನೆ ಸೇರಿದಂತೆ ಇತರೆ ಮಾಹಿತಿಗೆ ballari.nic.in ಭೇಟಿ ನೀಡಿ.

ಇದನ್ನೂ ಓದಿ: ಐಐಎಸ್ಸಿಯಲ್ಲಿ ಸಹಾಯಕ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.