ಬೆಂಗಳೂರು: ಕರ್ನಾಟಕ ವಿಧಾನಸಭೆ ಸಚಿವಾಲಯದಲ್ಲಿ ಕನ್ನಡ ಮತ್ತು ಇಂಗ್ಲಿಷ್ ವರದಿಗಾರರ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಒಟ್ಟು 6 ಹುದ್ದೆಗಳಿವೆ. ಯಾವುದೇ ವಿಷಯದಲ್ಲಿ ಪದವಿ ಮಾಡಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ವಿವರ: ಆರು ಹುದ್ದೆಗಳ ಪೈಕಿ ಮೂರು ಹುದ್ದೆಗಳನ್ನು ಹೈದರಾಬಾದ್ ಕರ್ನಾಟಕ ಅಭ್ಯರ್ಥಿಗಳಿಗೆ ಮೀಸಲಿಡಲಾಗಿದೆ.
ಕನ್ನಡ ವರದಿಗಾರರು - 5
ಇಂಗ್ಲಿಷ್ ವರದಿಗಾರರು - 1
ವಿದ್ಯಾರ್ಹತೆ: ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಕನ್ನಡ ಶೀಘ್ರಲಿಪಿ ಮತ್ತು ಕನ್ನಡ ಬೆರಳಚ್ಚು ಪರೀಕ್ಷೆಗಳಲ್ಲಿ ಪ್ರೌಢ ದರ್ಜೆಯಲ್ಲಿ ಉತ್ತೀರ್ಣರಾಗಿರಬೇಕು.
ಆಂಗ್ಲ ವರದಿಗಾರರು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಇಂಗ್ಲಿಷ್ ಶೀಘ್ರಲಿಪಿ ಮತ್ತು ಕನ್ನಡ ಬೆರಳಚ್ಚು ಪರೀಕ್ಷೆಗಳಲ್ಲಿ ಪ್ರೌಢ ದರ್ಜೆಯಲ್ಲಿ ಉತ್ತೀರ್ಣರಾಗಿರಬೇಕು. ಹಿಂದಿ ಪ್ರವೀಣ ದರ್ಜೆ ಶೀಘ್ರಲಿಪಿ ಉತ್ತೀರ್ಣಗೊಂಡವರಿಗೂ ಆದ್ಯತೆ ನೀಡಲಾಗುತ್ತದೆ.
ವಯೋಮಿತಿ: ಕನಿಷ್ಠ 18 ವರ್ಷ ಗರಿಷ್ಠ 35 ವರ್ಷ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ 1 ಅಭ್ಯರ್ಥಿಗಳಿಗೆ 5 ವರ್ಷ. ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 38 ವರ್ಷ.
ಆರ್ಜಿ ಸಲ್ಲಿಕೆ: ಆಫ್ಲೈನ್ ಮೂಲಕ.
ಅಭ್ಯರ್ಥಿಗಳು ಸರ್ಕಾರಿ ಪುಸ್ತಕ ಮಳಿಗೆಯಲ್ಲಿ ಸಿಗುವ ಅರ್ಜಿ ನಮೂನೆ-1ರ ದ್ವಿಪ್ರತಿಯ ಅರ್ಜಿಯಲ್ಲಿ ಅಧಿಸೂಚನೆ ಮಾರ್ಗಸೂಚಿ ಅನುಸರಣೆಯಂತೆ ಭರ್ತಿ ಮಾಡಿ ಕೆಳಗಿನ ವಿಳಾಸಕ್ಕೆ ಸಲ್ಲಿಸಬೇಕು.
ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ ಸಚಿವಾಲಯ, ಅಂಚೆ ಪೆಟ್ಟಿಗೆ ಸಂಖ್ಯೆ 5047, ಮೊದಲನೇ ಮಹಡಿ, ವಿಧಾನಸೌಧ, ಬೆಂಗಳೂರು - 560001.
ಅರ್ಜಿ ಶುಲ್ಕ: ಪ.ಜಾ, ಪ.ಪಂ ಮತ್ತು ಪ್ರವರ್ಗ 1 ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇದೆ. ಸಾಮಾನ್ಯ ಮತ್ತು ಇತರೆ ಅಭ್ಯರ್ಥಿಗಳಿಗೆ 500 ರೂ ಅರ್ಜಿ ಶುಲ್ಕ ವಿಧಿಸಲಾಗಿದೆ. ಅರ್ಜಿ ಶುಲ್ಕವನ್ನು ಪೋಸ್ಟಲ್ ಆರ್ಡರ್ ಮೂಲಕ ಸಲ್ಲಿಕೆ ಮಾಡಬೇಕು. ಅರ್ಜಿ ಸಲ್ಲಿಕೆಗೆ ಕಡೇಯ ದಿನಾಂಕ ಏಪ್ರಿಲ್ 30.
ಈ ಹುದ್ದೆ ಕುರಿತು ಹೆಚ್ಚಿನ ಮಾಹಿತಿಗೆ kla.kar.nic.in ಇಲ್ಲಿಗೆ ಭೇಟಿ ನೀಡಿ.
ಇದನ್ನೂ ಓದಿ: ಸರ್ಕಾರಿ ಉದ್ಯೋಗಾಕಾಂಕ್ಷಿಗಳೇ ಅಲರ್ಟ್: PDO, ಸಹಾಯಕ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ; ಇಂದೇ ಅಪ್ಲೈ ಮಾಡಿ