ETV Bharat / education-and-career

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಫೆ.17ರಿಂದ 19ರವರೆಗೆ ವಿವಿಧ ಪರೀಕ್ಷೆ

ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಇದೇ ಫೆ.17ರಿಂದ 19ರವರೆಗೆ ವಿವಿಧ ನೇಮಕಾತಿ ಪರೀಕ್ಷೆಗಳನ್ನು ನಡೆಸುತ್ತಿದೆ.

Etv Bharat
Etv Bharat
author img

By ETV Bharat Karnataka Team

Published : Feb 15, 2024, 6:13 PM IST

ಬೆಂಗಳೂರು: ಐಎಎಸ್/ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ಪರೀಕ್ಷೆ, ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಕೆಪಿಸಿಎಲ್ ಮರುಪರೀಕ್ಷೆ ಹಾಗೂ ಕೆಎಸ್‌ಎಫ್‌ಸಿ ನೇಮಕಾತಿ ಪರೀಕ್ಷೆಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಇದೇ ಫೆ.17ರಿಂದ 19ರವರೆಗೆ ನಡೆಸಲಿದೆ. ಈ ಪರೀಕ್ಷೆಗಳನ್ನು ಸುಮಾರು 3.5 ಲಕ್ಷ ಅಭ್ಯರ್ಥಿಗಳು ತೆಗೆದುಕೊಳ್ಳುತ್ತಿದ್ದು, ಅಕ್ರಮಗಳಿಗೆ ಅವಕಾಶ ಇಲ್ಲದಂತೆ ಕಠಿಣ ಕ್ರಮ ಕೈಗೊಳ್ಳಲಾಗಿದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ತಿಳಿಸಿದ್ದಾರೆ.

ಫೆ.17ರಂದು ಯಲಹಂಕದ ಸರ್ಕಾರಿ ಜೂನಿಯರ್ ಕಾಲೇಜಿನ ಪ್ರೌಢಶಾಲೆಯಲ್ಲಿ ಕೆಎಸ್‌ಎಫ್‌ಸಿಯಲ್ಲಿನ ಖಾಲಿ ಹುದ್ದೆಗಳಿಗೆ ಪರೀಕ್ಷೆ ನಡೆಯಲಿದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕರು ಮಾಹಿತಿ ನೀಡಿದ್ದಾರೆ.

ಯುಪಿಎಸ್‌ಸಿ/ಕೆಎಎಸ್/ಗ್ರೂಪ್-ಸಿ/ಎಸ್‌ಎಸ್‌ಸಿ/ಆರ್‌ಆರ್‌ಬಿ ಪರೀಕ್ಷೆಗಳನ್ನು ತೆಗೆದುಕೊಳ್ಳುವ ಅಭ್ಯರ್ಥಿಗಳಿಗೆ ಉಚಿತ ತರಬೇತಿ ನೀಡುತ್ತಿದ್ದು, ಅರ್ಹರನ್ನು ಆಯ್ಕೆ ಮಾಡುವ ಸಲುವಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಇದೇ 18ರಂದು ಲಿಖಿತ ಪರೀಕ್ಷೆಯನ್ನು ಆಯೋಜಿಸಿದೆ. ಈ ಪರೀಕ್ಷೆಗೆ ಒಟ್ಟು 85 ಸಾವಿರ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದ್ದು, ರಾಜ್ಯದ 138 ಕೇಂದ್ರಗಳಲ್ಲಿ ಇದೆ.

ವಸತಿ ಶಾಲೆಗಳಲ್ಲಿನ 6ನೇ ತರಗತಿ ಪ್ರವೇಶಕ್ಕಾಗಿ ನಡೆಸುವ ಲಿಖಿತ ಪರೀಕ್ಷೆ ಕೂಡ 18 ರಂದು ನಡೆಯುತ್ತಿದ್ದು, ಇದಕ್ಕೆ ಎರಡು ಲಕ್ಷ ಮಕ್ಕಳು ಪರೀಕ್ಷೆ ಬರೆಯುತ್ತಿದ್ದಾರೆ. ರಾಜ್ಯದ 563 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.

ಇದಲ್ಲದೆ, ಕರ್ನಾಟಕ ವಿದ್ಯುತ್ ನಿಗಮದ (ಕೆಪಿಸಿಎಲ್) ಮರು ಪರೀಕ್ಷೆ ಕೂಡ ಇದೇ 18ರಂದು ಬೆಂಗಳೂರಿನ 70 ಕೇಂದ್ರಗಳಲ್ಲಿ ನಡೆಯುತ್ತಿದ್ದು, ಅದನ್ನು 58 ಸಾವಿರ ಮಂದಿ ಬರೆಯುತ್ತಿದ್ದಾರೆ. ಇದಕ್ಕೆ ಸಂಬಂಧಿಸಿದ ಕನ್ನಡ ಭಾಷೆ ಪರೀಕ್ಷೆಯನ್ನು ಫೆ.19ರಂದು ನಡೆಸಲಾಗುತ್ತದೆ ಎಂದು ರಮ್ಯಾ ಅವರು ತಿಳಿಸಿದ್ದಾರೆ.

ಸ್ಯಾಟ್ಸ್ ಮಾಹಿತಿ ತಿದ್ದುಪಡಿಗೆ ಅವಕಾಶ: ವೃತ್ತಿಪರ ಕೋರ್ಸ್​​ಗಳಿಗೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಮಾಹಿತಿ ತಪ್ಪಾಗಿರುವ ಬಗ್ಗೆ ದೂರುಗಳು ಬರುತ್ತಿದೆ. ಅಂತಹವರು ಮಾಹಿತಿಯನ್ನು ತಿದ್ದುಪಡಿ ಮಾಡಿಕೊಳ್ಳಲು ಶಾಲಾ ಶಿಕ್ಷಣ ಇಲಾಖೆಯು ಅವಕಾಶ ಕಲ್ಪಿಸಿದೆ. ಸಂಬಂಧಪಟ್ಟ ವಿದ್ಯಾರ್ಥಿಗಳು ಇದನ್ನು ಸದುಪಯೋಗ ಮಾಡಿಕೊಳ್ಳಬೇಕು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ಮಾಹಿತಿ ನೀಡಿದ್ದಾರೆ.

ಎಲ್ಲ ರೀತಿಯ ತಿದ್ದುಪಡಿಗಳನ್ನು ಆಯಾ ಜಿಲ್ಲೆಗಳ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರ (ಆಡಳಿತ) ಕಚೇರಿಯಲ್ಲಿ ಮಾಡಲಾಗುತ್ತಿದೆ. ವಿದ್ಯಾರ್ಥಿ 10ನೇ ತರಗತಿ ಉತ್ತೀರ್ಣರಾಗಿದ್ದು, ಸ್ಯಾಟ್ಸ್ ತಂತ್ರಾಂಶದಲ್ಲಿ ಹೆಸರು ಹಾಗೂ ವರ್ಷವಾರು ತರಗತಿ ತಪ್ಪಾಗಿದ್ದರೆ, ತಿದ್ದುಪಡಿಗೆ ವಿದ್ಯಾರ್ಥಿಯು ಮನವಿ ಸಲ್ಲಿಸಿದ್ದಲ್ಲಿ ಸರಿ ಮಾಡಿಕೊಡಲಾಗುತ್ತದೆ. ಅದರ ನಂತರ ಸಿಇಟಿಗೆ ಅರ್ಜಿ ಸಲ್ಲಿಸಬಹುದು ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಇಸ್ರೋ ನೇಮಕಾತಿ; ಡ್ರೈವರ್​ ಡ್ರಾಫ್ಟ್​ಮಾನ್​ ಸೇರಿದಂತೆ 224 ಹುದ್ದೆಗಳಿಗೆ ಅರ್ಜಿ ಆಹ್ವಾನ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.