ETV Bharat / education-and-career

ಹೈಕೋರ್ಟ್​ನಲ್ಲಿ ಉದ್ಯೋಗಾವಕಾಶ: ಯಾವ ಹುದ್ದೆ? ಅರ್ಹತೆ ಏನು? ಸಂಪೂರ್ಣ ವಿವರ ಇಲ್ಲಿದೆ - KARNATAKA HIGH COURT JOB - KARNATAKA HIGH COURT JOB

ಕರ್ನಾಟಕ ಹೈಕೋರ್ಟ್​ ಮತ್ತು ಬೆಳಗಾವಿ ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗಾವಕಾಶಗಳಿವೆ. ಅರ್ಹತೆ, ವಯೋಮಿತಿ, ಅರ್ಜಿ ಸಲ್ಲಿಕೆ ವಿವರಗಳು ಇಲ್ಲಿವೆ.

Karnataka Higha court and belagavi court recruitment notification

author img

By ETV Bharat Karnataka Team

Published : Apr 3, 2024, 4:11 PM IST

ಬೆಂಗಳೂರು: ಕರ್ನಾಟಕ ಹೈ ಕೋರ್ಟ್​​ನಲ್ಲಿ ಖಾಲಿ ಇರುವ ಕ್ಲರ್ಕ್​ ಕಮ್​ ರಿಸರ್ಚ್​ ಅಸಿಸ್ಟೆಂಟ್​ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಒಟ್ಟು 8 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಗೌರವಧನದ ಆಧಾರದ ಮೇಲೆ ಈ ಹುದ್ದೆಗಳ ಭರ್ತಿ ನಡೆಸಲಾಗುವುದು.

ಅಧಿಸೂಚನೆ
ಅಧಿಸೂಚನೆ

ವಿದ್ಯಾರ್ಹತೆ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯದೊಂದಿಗೆ ಕಾನೂನು ಪದವಿಯನ್ನು ಶೇ 50ರಷ್ಟು ಅಂಕದೊಂದಿಗೆ ಉತ್ತೀರ್ಣಗೊಂಡಿರಬೇಕು. ಅಭ್ಯರ್ಥಿಗಳು ಕರ್ನಾಟಕ ಸ್ಟೇಟ್​ ಬಾರ್​ ಕೌನ್ಸಿಲ್​ನಲ್ಲಿ ನೋಂದಣಿಯನ್ನು ಹೊಂದಿರಬೇಕು.

ವಯೋಮಿತಿ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಠ ವಯೋಮಿತಿ 30 ವರ್ಷ.

ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕಾನೂನು ವಿಷಯ ಸಂಬಂಧಿತ ಕೌಶಲ್ಯವನ್ನು ಹೊಂದಿರಬೇಕು. ಇವರು ನ್ಯಾಯಾಂಗದ ಕೆಲಸದ ಜೊತೆಗೆ ಆಡಳಿತಾತ್ಮಕದ ಕೆಲಸದಲ್ಲೂ ಸಹಾಯ ಮಾಡಬೇಕಿರುತ್ತದೆ.

ವೇತನ: ಈ ಹುದ್ದೆಗಳಿಗೆ ಆಯ್ಕೆಗೊಂಡ ಅಭ್ಯರ್ಥಿಗಳಿಗೆ ಮಾಸಿಕ 25 ಸಾವಿರ ರೂ. ಗೌರವಧನವನ್ನು ನೀಡಲಾಗುತ್ತದೆ.

ಆಯ್ಕೆ: ಅಭ್ಯರ್ಥಿಗಳನ್ನು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಕೆ: ಈ ಹುದ್ದೆಗೆ ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಅರ್ಜಿ ಶುಲ್ಕ ವಿನಾಯಿತಿ ನೀಡಲಾಗಿದೆ.

ಈ ಹುದ್ದೆಗೆ ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಏಪ್ರಿಲ್​ 17.

ಈ ಹುದ್ದೆ ಕುರಿತು ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ ಅಭ್ಯರ್ಥಿಗಳು karnatakajudiciary.kar.nic.in ಇಲ್ಲಿಗೆ ಭೇಟಿ ನೀಡಬಹುದಾಗಿದೆ.

ಬೆಳಗಾವಿ ಜಿಲ್ಲಾ ನ್ಯಾಯಾಲಯದಲ್ಲಿ 41 ಹುದ್ದೆ: ಬೆಳಗಾವಿ ಜಿಲ್ಲಾ ನ್ಯಾಯ ಘಟಕದಲ್ಲಿ ಖಾಲಿ ಇರುವ ಶೀಘ್ರ ಲಿಪಿಗಾರ, ಬೆರಳಚ್ಚುಗಾರ ಮತ್ತು ಜವಾನ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಸ್ಟೆನೋಗ್ರಾಫರ್​ -5, ಟೈಪಿಸ್ಟ್​​- 1, ಪ್ರೊಸೆಸ್​ ಸರ್ವರ್​​- 2, ಜವಾನ-33 ಹುದ್ದೆ ಸೇರಿದಂತೆ 41 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆಯೊಂದಿಗೆ ಕನ್ನಡ ಮತ್ತು ಇಂಗ್ಲಿಷ್​ ಬೆರಳಚ್ಚು ಮತ್ತು ಶೀಘ್ರಲಿಪಿಯಲ್ಲಿ ಪ್ರೌಢ ದರ್ಜೆ ಉತ್ತೀರ್ಣತೆ ಹೊಂದಿರಬೇಕು. ಜವಾನ ಹುದ್ದೆಗೆ 10ನೇ ತರಗತಿ ಉತ್ತೀರ್ಣರಾಗಿರಬೇಕು.

ಗರಿಷ್ಠ ವಯೋಮಿತಿ 35 ವರ್ಷ ಆಗಿದ್ದು, ಪ.ಜಾ, ಪ.ಪಂ, ಪ್ರವರ್ಗ 1 ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಪ್ರವರ್ಗ 2ಎ, 2ಬಿ, 3ಎ, 3ಬಿ ಹುದ್ದೆಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.

ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದು. ಈ ಹುದ್ದೆಗೆ ಅರ್ಜಿ ಸಲ್ಲಿಕೆಗೆ ಕಡೆಯ ದಿನ ಏಪ್ರಿಲ್​ 14.

ಈ ಹುದ್ದೆ ಕುರಿತು ಹೆಚ್ಚಿನ ಮಾಹಿತಿಗೆ belagavi.dcourts.gov.in ಇಲ್ಲಿಗೆ ಭೇಟಿ ನೀಡಿ.

ಇದನ್ನೂ ಓದಿ: ಕಷ್ಟಗಳು ಜೊತೆಯಾದವು, ಕನಸುಗಳು ಮುನ್ನಡೆಸಿದವು: ಯುವಕರಿಬ್ಬರ ಬಾಳಲ್ಲಿ ಉದ್ಯೋಗಗಳ ಸುರಿಮಳೆಯೇ ಆದವು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.