ಬೆಂಗಳೂರು: ನಗರ ಭೂ ಸಾರಿಗೆ ನಿರ್ದೇಶನಾಲಯ ಇಲಾಖೆಯಿಂದ ಹುದ್ದೆ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಗುತ್ತಿಗೆ ಆಧಾರದ ಮೇಲೆ ಈ ನೇಮಕಾತಿ ನಡೆಯಲಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆ ವಿವರ: ನಗರಾಭಿವೃದ್ಧಿ ಇಲಾಖೆಯಿಂದ ಭರ್ತಿ ಮಾಡಲಿರುವ ಹುದ್ದೆಗಳು ಹೀಗಿದೆ
- ನಗರ ಸಾರಿಗೆ ವಿಶೇಷಜ್ಞರು 1
- ಅಭಿಯಂತರರು ಸಿವಿಲ್ 1
ವಿದ್ಯಾರ್ಹತೆ: ನಗರ ಸಾರಿಗೆ ವಿಶೇಷಜ್ಞರ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಸಾರಿಗೆ ಇಂಜಿನಿಯರ್ ಅಥವಾ ಸಾರಿಗೆ ಯೋಜನೆಯ ವಿದ್ಯಾರ್ಹತೆ ಹೊಂದಿರಬೇಕು. ನಗರ ಸಾರಿಗೆ ಮೂಲಭೂತ ಸೌಕರ್ಯ ವಿನ್ಯಾಸ ಅಭಿವೃದ್ಧಿಗಾಗಿ ಕಾರ್ಯ ನಿರ್ವಹಿಸಿದ 10ಕ್ಕೂ ಹೆಚ್ಚಿನ ವರ್ಷದ ಅನುಭವ ಹೊಂದಿರಬೇಕು.
ಅಭಿಯಂತರರು- ಸಿವಿಲ್: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಸಿವಿಲ್ ಇಂಜಿನಿಯರಿಂಗ್ನಲ್ಲಿ ಬಿಇ ಪದವಿಯನ್ನು ಹೊಂದಿರಬೇಕು. ಕಾರ್ಯಪಾಲಕ ಅಭಿಯಂತರರು ಲೋಕೋಪಯೋಗಿ ಇಲಾಖೆಯ ದರ್ಜೆ ಸಮಾನವಾದ ಹುದ್ದೆಯಲ್ಲಿ 15ಕ್ಕೂ ಹೆಚ್ಚು ವರ್ಷದ ಹುದ್ದೆ ಅನುಭವ ಹೊಂದಿರಬೇಕು.
ಎರಡು ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನ್ನಡ ಭಾಷೆಯಲ್ಲಿ ಉತ್ತಮ ಪ್ರಾವಿಣ್ಯತೆಯನ್ನು ಹೊಂದಿರಬೇಕು.
ಈ ಹುದ್ದೆಗಳನ್ನು ಒಂದು ವರ್ಷದ ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲಾಗುವುದು. ಈ ವೇಳೆ ಅಭ್ಯರ್ಥಿಯ ಕಾರ್ಯಕ್ಷಮತೆ ಆಧಾರದ ಮೇಲೆ ಮತ್ತೊಂದು ವರ್ಷ ಹುದ್ದೆ ವಿಸ್ತರಣೆ ಮಾಡಲಾಗುವುದು
ಅರ್ಜಿ ಸಲ್ಲಿಕೆ: ಈ ಹುದ್ದೆಗೆ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ, ಈ ಹುದ್ದೆಗೆ ಫೆ 6 ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಫೆಬ್ರವರಿ 20 ಆಗಿದೆ.
ಈ ಹುದ್ದೆ ಕುರಿತು ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆ ಸೇರಿದಂತೆ ಸಂಪೂರ್ಣ ಮಾಹಿತಿಗೆ ಅಭ್ಯರ್ಥಿಗಳು dult.karnataka.gov.in ಇಲ್ಲಿಗೆ ಭೇಟಿ ನೀಡಬಹುದಾಗಿದೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿದೆ ಉದ್ಯೋಗ: ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ತಾತ್ಕಾಲಿಕ ಗುತ್ತಿಗೆ ಆಧಾರದ ಒಟ್ಟು 6 ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ರಾಜ್ಯ ಯೋಜನಾ ಸಂಯೋಜಕರು - ಸಮಾಜ ವಿಜ್ಞಾನ, ಜೀವ ವಿಜ್ಞಾನ, ಸೋಷಿಯಲ್ ವರ್ಕ್, ರೂರಲ್ ಮ್ಯಾನೇಜ್ಮೆಂಟ್ನಲ್ಲಿ ಸ್ನಾತಕೋತ್ತರ ಪದವಿ. ಮೂರು ವರ್ಷ ಸರ್ಕಾರ ಅಥವಾ ಸರ್ಕಾರೇತರ ಸಂಸ್ಥೆಯಲ್ಲಿ ನಿರ್ದಿಷ್ಟ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿರುವವರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಜನವರಿ 24 ರಿಂದ ಅರ್ಜಿ ಸಲ್ಲಿಸಬಹುದಾಗಿದ್ದು, ಫೆಬ್ರವರಿ 8 ಕಡೆಯ ದಿನವಾಗಿದೆ. ಅಧಿಕೃತ ಅಧಿಸೂಚನೆ, ನಿಗದಿತ ಅರ್ಜಿ ಪಡೆಯಲು ಅಭ್ಯರ್ಥಿಗಳು dwcd.karnataka.gov.in ಭೇಟಿ ನೀಡಬಹುದು.
ಇದನ್ನೂ ಓದಿ: Banking Jobs: ಪಿಎನ್ಬಿಯಲ್ಲಿ 1025 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ