ETV Bharat / education-and-career

ಇನ್ನೂ ಇದೇ ಅವಕಾಶ, ಜಲಮಂಡಳಿ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ - KEA extend the application

ಜಲಮಂಡಳಿಯಲ್ಲಿನ ಒಟ್ಟು 64 ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ ಮಾಡಲಾಗಿದೆ.

KEA extend the application Date of KUWSDB recruitment

author img

By ETV Bharat Karnataka Team

Published : Mar 15, 2024, 12:21 PM IST

ಬೆಂಗಳೂರು: ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯಿಂದ 64 ಹುದ್ದೆ ನೇಮಕಾತಿಯ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಿಸಿ, ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅಧಿಸೂಚನೆ ಹೊರಡಿಸಿದೆ. ಈ ಹಿಂದೆ ಜಲಮಂಡಳಿಯಲ್ಲಿನ ಒಟ್ಟು 64 ಸಹಾಯಕ ಇಂಜಿನಿಯರ್​ ಮತ್ತು ಪ್ರಥಮ ದರ್ಜೆ ಲೆಕ್ಕ ಸಹಾಯಕರ ಹುದ್ದೆ ಭರ್ತಿಗೆ ಮಾರ್ಚ್​ 14 ಕಡೆಯ ದಿನವಾಗಿತ್ತು. ಇದೀಗ ಅಭ್ಯರ್ಥಿಗಳು ಮಾರ್ಚ್​ 23ರವರೆಗೆ ಅರ್ಜಿ ಸಲ್ಲಿಕೆ ಮಾಡಲು ಅವಕಾಶ ನೀಡಲಾಗಿದೆ.

ಹುದ್ದೆ ವಿವರ:

ಸಹಾಯಕ ಇಂಜಿನಿಯರ್​ (ಸಿವಿಲ್​) - 50

ಪ್ರಥಮ ದರ್ಜೆ ಲೆಕ್ಕ ಸಹಾಯಕ (ಗ್ರೂಪ್​-ಸಿ) - 14

ವಿದ್ಯಾರ್ಹತೆ: ಸಹಾಯಕ ಇಂಜಿನಿಯರ್​ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿಇ ಅಥವಾ ಬಿಟೆಕ್​ ಪದವಿಯನ್ನು ಸಿವಿಲ್​ ಇಂಜಿನಿಯರಿಂಗ್​ ವಿಭಾಗದಲ್ಲಿ ಪಡೆದಿರಬೇಕು.

ಪ್ರಥಮ ದರ್ಜೆ ಲೆಕ್ಕ ಸಹಾಯಕರ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ತಿಗಳಿಗೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿಕಾಂ ಪದವಿಯನ್ನು ಪಡೆದಿರಬೇಕು.

ದಿನಾಂಕ ವಿಸ್ತರಣೆ ಅಧಿಸೂಚನೆ
ದಿನಾಂಕ ವಿಸ್ತರಣೆ ಅಧಿಸೂಚನೆ

ವಯೋಮಿತಿ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ಗರಿಷ್ಠ 35 ವರ್ಷಗಳ ವಯೋಮಿತಿ ಹೊಂದಿರಬೇಕು. ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪ. ಜಾ, ಪ.ಪಂ ಮತ್ತು ಪ್ರವರ್ಗ 1 ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.

ವೇತನ:

ಸಹಾಯಕ ಇಂಜಿನಿಯರ್​ (ಸಿವಿಲ್​) - 34,100- 83,900

ಪ್ರಥಮ ದರ್ಜೆ ಲೆಕ್ಕ ಸಹಾಯಕ (ಗ್ರೂಪ್​-ಸಿ) - 27,650 -52,650

ಆಯ್ಕೆ ಪ್ರಕ್ರಿಯೆ: ಈ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆ: ಈ ಹುದ್ದೆಗಳಿಗೆ ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಸಾಮಾನ್ಯ ಮತ್ತು ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 750 ರೂ. ಅರ್ಜಿ ಶುಲ್ಕ ವಿಧಿಸಲಾಗಿದ್ದು, ಪ.ಜಾ, ಪ.ಪಂ ಮತ್ತು ಪ್ರವರ್ಗ 1 ಅಭ್ಯರ್ಥಿಗಳಿಗೆ 500 ರೂ. ಅರ್ಜಿ ಶುಲ್ಕ ವಿಧಿಸಲಾಗಿದೆ.

ಈ ಹುದ್ದೆಗೆ ಇದೀಗ ಮಾರ್ಚ್​ 21ರವರೆಗೆ ಅರ್ಜಿ ಸಲ್ಲಿಕೆ ವಿಸ್ತರಿಸಲಾಗಿದೆ. ಅರ್ಜಿ ಶುಲ್ಕ ಪಾವತಿಗೆ ಕಡೆಯ ದಿನ ಮಾರ್ಚ್​ 22 ಆಗಿದೆ.

ಈ ಹುದ್ದೆ ಕುರಿತ ಸಂಪೂರ್ಣ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ kuwsdb.karnataka.gov.in ಇಲ್ಲಿಗೆ ಭೇಟಿ ನೀಡಬಹುದಾಗಿದೆ.

ಇದನ್ನೂ ಓದಿ: ಬಿಇ ಆಗಿದೆಯಾ?: 327 ಸಹಾಯಕ ಇಂಜಿನಿಯರ್​, ಸಹಾಯಕ ನಿರ್ದೇಶಕರ ಹುದ್ದೆಗೆ ಅಧಿಸೂಚನೆ - ಬೇಗನೇ ಅರ್ಜಿ ಹಾಕಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.