ETV Bharat / education-and-career

1000 ಗ್ರಾಮ ಆಡಳಿತಾಧಿಕಾರಿ ಹುದ್ದೆಗಳ ಭರ್ತಿಗೆ ಪರಿಷ್ಕೃತ ಅಧಿಸೂಚನೆ ಪ್ರಕಟ - Karnataka Revenue Department - KARNATAKA REVENUE DEPARTMENT

ಏಪ್ರಿಲ್​ 4 ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನ ಮೇ 5 ಆಗಿದೆ.

KEA extended Notification Karnataka Revenue Department

author img

By ETV Bharat Karnataka Team

Published : Apr 6, 2024, 3:30 PM IST

ಬೆಂಗಳೂರು: ಕಂದಾಯ ಇಲಾಖೆಯಲ್ಲಿ ಸಾವಿರ ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಗಳ ಭರ್ತಿಗೆ ಕೆಇಎ ಪರಿಷ್ಕೃತ ಅಧಿಸೂಚನೆ ಹೊರಡಿಸಿದೆ. ಫೆಬ್ರವರಿಯಲ್ಲಿ ಹೊರಡಿಸಲಾಗಿದ್ದ ಅಧಿಸೂಚನೆಗೆ ಮಾರ್ಚ್​ನಲ್ಲಿ ತಾತ್ಕಾಲಿಕವಾಗಿ ತಡೆ ಹಿಡಿದು, ಅರ್ಜಿ ಸಲ್ಲಿಕೆ ದಿನಾಂಕವನ್ನು ಮುಂದೂಡಲಾಗಿತ್ತು. ಇದೀಗ ಮತ್ತೆ ವಿವರವಾದ ಅಧಿಸೂಚನೆ ಪ್ರಕಟಿಸಲಾಗಿದ್ದು, ಅಭ್ಯರ್ಥಿಗಳು ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ.

ಅಧಿಸೂಚನೆ
ಅಧಿಸೂಚನೆ

ಹುದ್ದೆ ವಿವರ: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ 1000 ಗ್ರಾಮ ಆಡಳಿತಾಧಿಕಾರಿ ಹುದ್ದೆಗಳ (ಗ್ರಾಮ ಲೆಕ್ಕಾಧಿಕಾರಿ) ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲಾವಾರು ಖಾಲಿ ಇರುವ ಹುದ್ದೆಗಳ ಕುರಿತು ಅಧಿಕೃತ ಅಧಿಸೂಚನೆಯಲ್ಲಿ ಅಭ್ಯರ್ಥಿಗಳು ಪರಿಶೀಲನೆ ನಡೆಸಬಹುದಾಗಿದೆ.

ವಿದ್ಯಾರ್ಹತೆ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪಿಯುಸಿ, ಡಿಪ್ಲೋಮಾ ಅಥವಾ ಎರಡು ವರ್ಷದ ಐಟಿಐ ಅಥವಾ ಎರಡು ವರ್ಷದ ಜೆಒಸಿ, ಜೆಒಡಿಸಿ, ಜೆಎಲ್​ಡಿಸಿ ವಿದ್ಯಾಭ್ಯಾಸವನ್ನು ಹೊಂದಿರಬೇಕು.

ವೇತನ: 21,400 - 42,000 ರೂ. ಮಾಸಿಕ

ವಯೋಮಿತಿ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ರಿಂದ ಗರಿಷ್ಠ 35 ವರ್ಷ ವಯೋಮಿತಿ ಹೊಂದಿರಬೇಕು. ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 3 ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ 1 ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.

ಆಯ್ಕೆ ಪ್ರಕ್ರಿಯೆ: ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಆಯ್ಕೆ ನಡೆಸಲಾಗುವುದು. ಈ ಪರೀಕ್ಷೆ ಎರಡು ಪತ್ರಿಕೆಯನ್ನೊಳಗೊಂಡಿದ್ದು, 200 ಅಂಕಗಳಿರಲಿವೆ.

ಅರ್ಜಿ ಸಲ್ಲಿಕೆ: ಈ ಹುದ್ದೆಗೆ ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಸಾಮಾನ್ಯ ಮತ್ತು ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 750 ರೂ. ಮತ್ತು ಪರಿಶಿಷ್ಟ ಪಂಗಡ, ಪರಿಶಿಷ್ಟ ಜಾತಿ, ಪ್ರವರ್ಗ-1, ವಿಕಲಚೇತನ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ 500 ರೂ. ಅರ್ಜಿ ಶುಲ್ಕ ಪಾವತಿಸಬೇಕಿದೆ.

ಈ ಹುದ್ದೆಗೆ ಏಪ್ರಿಲ್​ 4ರಿಂದ ಅರ್ಜಿ ಸಲ್ಲಿಕೆ ಮಾಡಬಹುದಾಗಿದ್ದು, ಮೇ 5 ಕಡೆಯ ದಿನ. ಅರ್ಜಿ ಶುಲ್ಕ ಪಾವತಿಗೆ ಕಡೆಯ ದಿನ ಮೇ 7 ಆಗಿದೆ.

ವಿಶೇಷ ಸೂಚನೆ: ಈ ಹುದ್ದೆಗಳು ಎನ್​ಪಿಎಸ್​ ಅಂದರೆ ಪಿಂಚಣಿ ರಹಿತ ಸೌಲಭ್ಯವನ್ನು ಹೊಂದಿವೆ.

ಈ ಹುದ್ದೆ ಕುರಿತು ವಿವರವಾದ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆ ಸೇರಿದಂತೆ ಸಂಪೂರ್ಣ ವಿವರಗಳಿಗೆ kea.kar.nic.in ಇಲ್ಲಿಗೆ ಭೇಟಿ ನೀಡಬಹುದಾಗಿದೆ.

ಇದನ್ನೂ ಓದಿ: ಇಂಡಿಯನ್​ ಮರ್ಚೆಂಟ್​ ನೇವಿಯಲ್ಲಿ 4,000 ಹುದ್ದೆಗಳು: ಅರ್ಹತೆ, ಅರ್ಜಿ ಸಲ್ಲಿಕೆಯ ವಿವರ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.