ಬೆಂಗಳೂರು: ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯಿಂದ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಸಹಾಯಕ ಇಂಜಿನಿಯರ್ ಮತ್ತು ಪ್ರಥಮ ದರ್ಜೆ ಲೆಕ್ಕ ಸಹಾಯಕರ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 64 ಹುದ್ದೆಗಳ ನೇಮಕಾತಿ ನಡೆಯಲಿದೆ. ಈ ಹುದ್ದೆ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.
ಹುದ್ದೆ ವಿವರ:
ಸಹಾಯಕ ಇಂಜಿನಿಯರ್ (ಸಿವಿಲ್) - 50
ಪ್ರಥಮ ದರ್ಜೆ ಲೆಕ್ಕ ಸಹಾಯಕ (ಗ್ರೂಪ್-ಸಿ) - 14
ವಿದ್ಯಾರ್ಹತೆ: ಸಹಾಯಕ ಇಂಜಿನಿಯರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿಇ ಅಥವಾ ಬಿಟೆಕ್ ಪದವಿಯನ್ನು ಸಿವಿಲ್ ಇಂಜಿನಿಯರಿಂಗ್ ವಿಭಾಗದಲ್ಲಿ ಪಡೆದಿರಬೇಕು
ಪ್ರಥಮ ದರ್ಜೆ ಲೆಕ್ಕ ಸಹಾಯಕರ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ತಿಗಳಿಗೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿಕಾಂ ಪದವಿಯನ್ನು ಪಡೆದಿರಬೇಕು.
ವಯೋಮಿತಿ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ಗರಿಷ್ಠ 35 ವರ್ಷಗಳ ವಯೋಮಿತಿ ಹೊಂದಿರಬೇಕು. ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪ. ಜಾ, ಪ.ಪಂ ಮತ್ತು ಪ್ರವರ್ಗ 1 ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.
ವೇತನ:
ಸಹಾಯಕ ಇಂಜಿನಿಯರ್ (ಸಿವಿಲ್) - 34,100- 83,900
ಪ್ರಥಮ ದರ್ಜೆ ಲೆಕ್ಕ ಸಹಾಯಕ (ಗ್ರೂಪ್-ಸಿ) -27,650 -52,650
ಆಯ್ಕೆ ಪ್ರಕ್ರಿಯೆ: ಈ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಕೆ: ಈ ಹುದ್ದೆಗಳಿಗೆ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಸಾಮಾನ್ಯ ಮತ್ತು ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 750 ರೂ. ಅರ್ಜಿ ಶುಲ್ಕ ವಿಧಿಸಲಾಗಿದ್ದು, ಪ.ಜಾ, ಪ.ಪಂ ಮತ್ತು ಪ್ರವರ್ಗ 1 ಅಭ್ಯರ್ಥಿಗಳಿಗೆ 500 ರೂ. ಅರ್ಜಿ ಶುಲ್ಕ ವಿಧಿಸಲಾಗಿದೆ.
ಈ ಹುದ್ದೆಗಳಿಗೆ ಅಭ್ಯರ್ಥಿಗಳು ಫೆಬ್ರವರಿ 10 ರಿಂದ ಅರ್ಜಿ ಸಲ್ಲಿಕೆ ಮಾಡಬಹುದಾಗಿದ್ದು, ಮಾರ್ಚ್ 10 ಅರ್ಜಿ ಸಲ್ಲಿಕೆಗೆ ಕಡೆಯ ದಿನವಾಗಿದೆ. ಅರ್ಜಿ ಶುಲ್ಕ ಪಾವತಿಗೆ ಮಾರ್ಚ್ 14 ಅಂತಿಮ ದಿನವಾಗಿದ್ದು, ಆನ್ಲೈನ್ ಮೂಲಕ ಅರ್ಜಿ ಶುಲ್ಕ ಪಾವತಿ ಮಾಡಬೇಕಿದೆ.
ಈ ಹುದ್ದೆ ಕುರಿತ ಸಂಪೂರ್ಣ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ kuwsdb.karnataka.gov.in ಇಲ್ಲಿಗೆ ಭೇಟಿ ನೀಡಬಹುದಾಗಿದೆ.
ಇದನ್ನೂ ಓದಿ: ಶಿವಮೊಗ್ಗ ಜಿಲ್ಲಾ ಪಂಚಾಯತ್ನಲ್ಲಿ ನೇಮಕಾತಿ; ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗೆ ಅರ್ಜಿ ಆಹ್ವಾನ