ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ ನಿರ್ವಾಹಕರ (ಗ್ರೇಡ್-3 ಮೇಲ್ವಿಚಾರಕರು) ಹುದ್ದೆಗಳ ಭರ್ತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅಧಿಸೂಚನೆ ಹೊರಡಿಸಿದೆ. ಒಟ್ಟು 2,500 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆ ವಿವರ: ಬಿಎಂಟಿಸಿಯಲ್ಲಿ ಖಾಲಿ ಇರುವ 2,500 ಕಂಡಕ್ಟರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ವಿದ್ಯಾರ್ಹತೆ: ಅಭ್ಯರ್ಥಿಗಳು ಪಿಯುಸಿ, 10 + 2 ಅಥವಾ ತಾಂತ್ರಿಕ ಶಿಕ್ಷಣ ಇಲಾಖೆಯಿಂದ 3 ವರ್ಷದ ಡಿಪ್ಲೋಮಾ ಪದವಿ ಹೊಂದಿರಬೇಕು.
ದೇಹದಾರ್ಡ್ಯತೆ: ಪುರುಷರು 160 ಸೆ.ಮೀ, ಮಹಿಳೆಯರು 150 ಸೆಂ. ಮೀ
ವಯೋಮಿತಿ: ಅಭ್ಯರ್ಥಿಗಳು ಕನಿಷ್ಠ ವಯೋಮಿತಿ 18 ಆಗಿದ್ದು, ಗರಿಷ್ಠ ವಯೋಮಿತಿ 35 ವರ್ಷ ಆಗಿದೆ. ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪ. ಜಾ, ಪ.ಪಂ ಮತ್ತು ಪ್ರವರ್ಗ 1 ಅಭ್ಯರ್ಥಿಗಳಿಗೆ 5 ಹಾಗೂ ಮಾಜಿ ಸೈನಿಕ, ಇಲಾಖಾ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.
ವೇತನ: ಅಭ್ಯರ್ಥಿಗಳ ಒಂದು ವರ್ಷದ ವೃತ್ತಿ ತರಬೇತಿಯಲ್ಲಿ ಮಾಸಿಕ 9,100 ರೂ ಮತ್ತು ವರ್ಷದ ಬಳಿಕ ಎರಡು ವರ್ಷಗಳ ಅವಧಿಗೆ ಖಾಯಂ ಪೂರ್ವ ಪರೀಕ್ಷಾರ್ಥ ಸೇವೆಯಲ್ಲಿ ನೇಮಕವಾದಲ್ಲಿ ಮಾಸಿಕ 18,660- 25,300 ರೂ ವೇತನ ನಿಗದಿಪಡಿಸಲಾಗಿದೆ. ಎರಡು ವರ್ಷಗಳ ಖಾಯಂ ಪೂರ್ವ ಪರೀಕ್ಷಾರ್ಥ ಸೇವೆ ತೃಪ್ತಿಕರವಾಗಿ ಪೂರೈಸಿದ ಬಳಿಕ ಅಭ್ಯರ್ಥಿಗಳ ನೇಮಕಾತಿಯನ್ನು ಪ್ರಾಧಿಕಾರದಿಂದ ಖಾಯಂಗೊಳಿಸಲಾಗುವುದು.
ಆಯ್ಕೆ: ಸ್ಪರ್ಧಾತ್ಮಕ ಪರೀಕ್ಷೆ
ಅರ್ಜಿ ಸಲ್ಲಿಕೆ: ಅಭ್ಯರ್ಥಿಗಳು ಆನ್ಲೈನ್ ಮೂಲಕ ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಸಾಮಾನ್ಯ ಮತ್ತು ಪ್ರವರ್ಗ 2ಎ, 2ಬಿ, 3ಎ ಮತ್ತು 3 ಬಿ ಅಭ್ಯರ್ಥಿಗಳಿಗೆ 750 ರೂ ಮತ್ತು ಪ.ಜಾ, ಪ.ಪಂ, ಪ್ರವರ್ಗ 1, ಮಾಜಿ ಸೈನಿಕ ಮತ್ತು ವಿಕಲಚೇತನ ಅಭ್ಯರ್ಥಿಗಳಿಗೆ 500 ರೂ ಅರ್ಜಿ ಶುಲ್ಕ ನಿಗದಿಸಲಾಗಿದೆ.
ಈ ಹುದ್ದೆಗೆ ಅಭ್ಯರ್ಥಿಗಳು ಮಾರ್ಚ್ 10ರಿಂದ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಏಪ್ರಿಲ್ 10 ಆಗಿದೆ. ಅರ್ಜಿ ಶುಲ್ಕ ಪಾವತಿಗೆ ಕಡೇಯ ದಿನಾಂಕ ಏಪ್ರಿಲ್ 13 ಆಗಿದೆ. ಈ ಹುದ್ದೆ ಕುರಿತು ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆ ಸೇರಿದಂತೆ ಇತರೆ ಮಾಹಿತಿಗೆ kea.kar.nic.in ಇಲ್ಲಿಗೆ ಭೇಟಿ ನೀಡಿ.
ಇದನ್ನೂ ಓದಿ: 1000 ಗ್ರಾಮ ಆಡಳಿತಾಧಿಕಾರಿ ಹುದ್ದೆಗಳ ಭರ್ತಿಗೆ ಕೆಇಎ ಅಧಿಸೂಚನೆ