ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ ನಿರ್ವಾಹಕರ (ಗ್ರೇಡ್-3 ಮೇಲ್ವಿಚಾರಕರು) ಹುದ್ದೆಗಳ ಭರ್ತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪರಿಷ್ಕೃತ ಅಧಿಸೂಚನೆ ಹೊರಡಿಸಿದೆ. ಫೆಬ್ರವರಿಯಲ್ಲಿ ಹೊರಡಿಸಿದ ವಿವರವಾದ ಅಧಿಸೂಚನೆಯಲ್ಲಿ ಕಲ್ಯಾಣ ಕರ್ನಾಟಕ ಮತ್ತು ಉಳಿಕೆ ಮೂಲಕ ವೃಂದಕ್ಕೆ ಹುದ್ದೆ ಪ್ರತ್ಯೇಕಗೊಳಿಸಿ ಅರ್ಜಿ ಪ್ರಕಟಿಸಲಾಗಿದೆ.
![ಅಧಿಸೂಚನೆ](https://etvbharatimages.akamaized.net/etvbharat/prod-images/04-04-2024/bmtc-driver_0404newsroom_1712222306_442.jpg)
ಹುದ್ದೆ ವಿವರ: ಒಟ್ಟು ಹುದ್ದೆ 2500
ಮಿಕ್ಕುಳಿದ ವೃಂದ - 2286
ಸ್ಥಳೀಯ ವೃಂದ -199
ಹಿಂಬಾಕಿ ಹುದ್ದೆ 15
ವಿದ್ಯಾರ್ಹತೆ: ಅಭ್ಯರ್ಥಿಗಳು ಪಿಯುಸಿ, 10 + 2 ಅಥವಾ ತಾಂತ್ರಿಕ ಶಿಕ್ಷಣ ಇಲಾಖೆಯಿಂದ 3 ವರ್ಷದ ಡಿಪ್ಲೋಮಾ ಪದವಿ ಹೊಂದಿರಬೇಕು.
ದೇಹದಾರ್ಡ್ಯತೆ: ಪುರುಷರು 160 ಸೆಂ.ಮೀ, ಮಹಿಳೆಯರು 150 ಸೆಂ. ಮೀ. ಎತ್ತರ ಹೊಂದಿರಬೇಕು.
ವಯೋಮಿತಿ: ಅಭ್ಯರ್ಥಿಗಳು ಕನಿಷ್ಠ ವಯೋಮಿತಿ 18 ಆಗಿದ್ದು, ಗರಿಷ್ಠ ವಯೋಮಿತಿ 35 ವರ್ಷ ಆಗಿದೆ. ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪ. ಜಾ, ಪ.ಪಂ ಮತ್ತು ಪ್ರವರ್ಗ 1 ಅಭ್ಯರ್ಥಿಗಳಿಗೆ 5 ಹಾಗೂ ಮಾಜಿ ಸೈನಿಕ, ಇಲಾಖಾ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.
ವೇತನ: ಅಭ್ಯರ್ಥಿಗಳ ಒಂದು ವರ್ಷದ ವೃತ್ತಿ ತರಬೇತಿಯಲ್ಲಿ ಮಾಸಿಕ 9,100 ರೂ ಮತ್ತು ವರ್ಷದ ಬಳಿಕ ಎರಡು ವರ್ಷಗಳ ಅವಧಿಗೆ ಖಾಯಂ ಪೂರ್ವ ಪರೀಕ್ಷಾರ್ಥ ಸೇವೆಯಲ್ಲಿ ನೇಮಕವಾದಲ್ಲಿ ಮಾಸಿಕ 18,660- 25,300 ರೂ. ವೇತನ ನಿಗದಿಪಡಿಸಲಾಗಿದೆ. ಎರಡು ವರ್ಷಗಳ ಖಾಯಂ ಪೂರ್ವ ಪರೀಕ್ಷಾರ್ಥ ಸೇವೆ ತೃಪ್ತಿಕರವಾಗಿ ಪೂರೈಸಿದ ಬಳಿಕ ಅಭ್ಯರ್ಥಿಗಳ ನೇಮಕಾತಿಯನ್ನು ಪ್ರಾಧಿಕಾರದಿಂದ ಖಾಯಂಗೊಳಿಸಲಾಗುವುದು.
ಆಯ್ಕೆ: ಸ್ಪರ್ಧಾತ್ಮಕ ಪರೀಕ್ಷೆ
ಅರ್ಜಿ ಸಲ್ಲಿಕೆ: ಅಭ್ಯರ್ಥಿಗಳು ಆನ್ಲೈನ್ ಮೂಲಕ ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಸಾಮಾನ್ಯ ಮತ್ತು ಪ್ರವರ್ಗ 2ಎ, 2ಬಿ, 3ಎ ಮತ್ತು 3 ಬಿ ಅಭ್ಯರ್ಥಿಗಳಿಗೆ 750 ರೂ. ಮತ್ತು ಪ.ಜಾ, ಪ.ಪಂ, ಪ್ರವರ್ಗ 1, ಮಾಜಿ ಸೈನಿಕ ಮತ್ತು ವಿಕಲಚೇತನ ಅಭ್ಯರ್ಥಿಗಳಿಗೆ 500 ರೂ. ಅರ್ಜಿ ಶುಲ್ಕ ನಿಗದಿಸಲಾಗಿದೆ.
ಅಭ್ಯರ್ಥಿಗಳು ಮೇ 19ರಿಂದ ಅರ್ಜಿ ಸಲ್ಲಿಕೆ ಮಾಡಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೇಯ ದಿನಾಂ ಮೇ 18 ಆಗಿದೆ.
ಈ ಹುದ್ದೆ ಕುರಿತು ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆ ಸೇರಿದಂತೆ ಇತರೆ ಮಾಹಿತಿಗೆ kea.kar.nic.in ಇಲ್ಲಿಗೆ ಭೇಟಿ ನೀಡಿ.
ಇದನ್ನೂ ಓದಿ: ಹೈಕೋರ್ಟ್ನಲ್ಲಿ ಉದ್ಯೋಗಾವಕಾಶ: ಯಾವ ಹುದ್ದೆ? ಅರ್ಹತೆ ಏನು? ಸಂಪೂರ್ಣ ವಿವರ ಇಲ್ಲಿದೆ