ETV Bharat / education-and-career

ಗ್ರೂಪ್​ ಸಿ ಹುದ್ದೆಗಳ ಭರ್ತಿ; ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಿಸಿದ ಕೆಪಿಎಸ್​ಸಿ - KPSC RECRUITMENT - KPSC RECRUITMENT

ವಿವಿಧ ಇಲಾಖೆಯಲ್ಲಿನ 76 ಗ್ರೂಪ್​ ಸಿ ಹುದ್ದೆಗಳು ಸೇರಿದಂತೆ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯಲ್ಲಿನ ಕೈಗಾರಿಕಾ ವಿಸ್ತರಣಾಧಿಕಾರಿ 63 ಹುದ್ದೆಗಳ ಭರ್ತಿಗೆ ಅರ್ಜಿ ಸಲ್ಲಿಕೆ ವಿಸ್ತರಣೆ ಮಾಡಲಾಗಿದೆ.

KPSC Group C Post application Date extended
ಕೆಪಿಎಸ್​ಸಿ (ಸಂಗ್ರಹ ಚಿತ್ರ)
author img

By ETV Bharat Karnataka Team

Published : Jul 24, 2024, 12:09 PM IST

ಬೆಂಗಳೂರು: ಕರ್ನಾಟಕ ಲೋಕ ಸೇವಾ ಆಯೋಗದಿಂದ (ಕೆಪಿಎಸ್​ಸಿ) ಈ ಹಿಂದೆ ಅಧಿಸೂಚನೆ ಹೊರಡಿಸಲಾಗಿದ್ದ ಗ್ರೂಪ್​ ಸಿಯಲ್ಲಿನ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ ಮಾಡಲಾಗಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.

ವಿವಿಧ ಇಲಾಖೆಯಲ್ಲಿನ 76 ಗ್ರೂಪ್​ ಸಿ ಹುದ್ದೆಗಳು ಸೇರಿದಂತೆ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯಲ್ಲಿನ ಕೈಗಾರಿಕಾ ವಿಸ್ತರಣಾಧಿಕಾರಿ 63 ಹುದ್ದೆಗಳ ಭರ್ತಿಗೆ ಅರ್ಜಿ ಸಲ್ಲಿಕೆ ವಿಸ್ತರಿಸಲಾಗಿದೆ.

KPSC Group C Post application Date extended
ಅಧಿಸೂಚನೆ (ಕೆಪಿಎಸ್​ಸಿ)

ಈ ಹಿಂದೆ ಈ ಹುದ್ದೆಗಳಿಗೆ ಬಿಎಸ್ಸಿ, ಬಿಬಿಎ ಮತ್ತು ಬಿಇ ಪದವಿ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಕೆ ಮಾಡಲು ಅವಕಾಶ ನೀಡಲಾಗಿತ್ತು. ಇದೀಗ ಬಿಬಿಎಂ ಮತ್ತು ಬಿ.ಟೆಕ್​ ಪದವಿ ಅಭ್ಯರ್ಥಿಗಳಿಗೂ ಕೂಡ ಅರ್ಜಿ ಸಲ್ಲಿಕೆಗೆ ಅವಕಾಶ ಒದಗಿಸಲಾಗಿದೆ.

ವಯೋಮಿತಿ: ಈ ಹುದ್ದೆಗೆ ಅರ್ಜ ಸಲ್ಲಿಸಲು ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 35 ವರ್ಷ ಆಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ 1ರ ಅಭ್ಯರ್ಥಿಗಳಿಗೆ 5 ವರ್ಷ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ವಿಕಲಚೇತನ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ.

ಆಯ್ಕೆ: ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಈ ಹುದ್ದೆಗೆ ಆಯ್ಕೆ ಮಾಡಲಾಗುವುದು.

ಈ ಹುದ್ದೆಗಳಿಗೆ ಅಭ್ಯರ್ಥಿಗಳು ಜುಲೈ 23ರಿಂದ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಆಗಸ್ಟ್​ 1 ಆಗಿದೆ.

ಈ ಹುದ್ದೆಗಳ ಕುರಿತಾದ ಅಧಿಕೃತ ಅಧಿಸೂಚನೆಗೆ ಅಭ್ಯರ್ಥಿಗಳು ಕರ್ನಾಟಕ ಲೋಕಸೇವಾ ಆಯೋಗದ ಅಧಿಕೃತ ವೆಬ್​ಸೈಟ್​ನಲ್ಲಿ kpsc.kar.nic.in ಗೆ ಭೇಟಿ ನೀಡಬಹುದಾಗಿದೆ.

ಆರ್​ಆರ್​ಬಿ ಹುದ್ದೆಗಳು: ಕರ್ನಾಟಕ ಗ್ರಾಮೀಣ ಬ್ಯಾಂಕ್​ ಸೇರಿದಂತೆ ದೇಶದ ವಿವಿಧ ಪ್ರಾದೇಶಿಕ ಬ್ಯಾಂಕಿಂಗ್​ ವಲಯದಲ್ಲಿನ (RRB) 9,995 ಹುದ್ದೆಗಳಿಗೂ ಕೂಡ ಐಬಿಪಿಎಸ್​ ಅಧಿಸೂಚನೆ ಹೊರಡಿಸಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಜುಲೈ 27.

ನಿಗದಿತ ಹುದ್ದೆಗಳಲ್ಲಿ ಕರ್ನಾಟಕ ಗ್ರಾಮೀಣ​ ಬ್ಯಾಂಕ್​ನಲ್ಲಿ 386, ಕರ್ನಾಟಕ ವಿಕಾಸ್​ ಗ್ರಾಮೀಣ ಬ್ಯಾಂಕ್​ 200 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.

ಪದವಿ ಓದಿರುವ ಗರಿಷ್ಠ 40 ಮೀರದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದು. ಮೀಸಲಾತಿ ಅಭ್ಯರ್ಥಿಗಳಿಗೆ 175 ರೂ. ಇತರ ಅಭ್ಯರ್ಥಿಗಳಿಗೆ 850 ರೂ. ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. ಪ್ರಿಲಿಮ್ಸ್​ ಮತ್ತು ಮೇನ್ಸ್​ ಪರೀಕ್ಷೆ ಮೂಲಕ ಆಯ್ಕೆ ನಡೆಯಲಿದೆ. ಹೆಚ್ಚಿನ ಮಾಹಿತಿಗೆ ibps.in ಇಲ್ಲಿಗೆ ಭೇಟಿ ನೀಡಿ.

ಇದನ್ನೂ ಓದಿ: ಶಿವಮೊಗ್ಗ: ಜಿಲ್ಲಾ ಸರ್ಕಾರಿ ವಕೀಲರ ನೇಮಕಕ್ಕೆ ಅರ್ಜಿ ಆಹ್ವಾನ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.