ಬೆಂಗಳೂರು: ಹಲವು ಇಲಾಖೆಗಳಲ್ಲಿ ಹುದ್ದೆಗಳ ಭರ್ತಿಗೆ ಕೆಪಿಎಸ್ಸಿ ಕಳೆದ ತಿಂಗಳು ಅಧಿಸೂಚನೆ ಹೊರಡಿಸಿತು. ಅದರ ಅನುಸಾರ ಇಂದಿನಿಂದ ಪಿಡಿಒ ಮತ್ತು ಗ್ರೂಪ್ ಬಿಯ 327 ಹುದ್ದೆಗಳ ಭರ್ತಿಗೆ ಅರ್ಜಿ ಸಲ್ಲಿಕೆ ಆರಂಭ ಆಗಲಿದೆ. ಈ ಹುದ್ದೆಗಳ ಕುರಿತ ಸಂಕ್ಷಿಪ್ತ ಮಾಹಿತಿ ಮಾಹಿತಿ ಇಲ್ಲಿದೆ.
ಕೆಪಿಎಸ್ಸಿ ಅಧಿಸೂಚನೆ ಹೊರಡಿಸಿದ್ದ 247 ಪಿಡಿಒ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ನಡೆಸಬಹುದಾಗಿದೆ. ಇದರಲ್ಲಿ 97 ಹುದ್ದೆಗಳು ಹೈದರಾಬಾದ್ ಕರ್ನಾಟಕ ಅಭ್ಯರ್ಥಿಗಳಿಗೆ ಮೀಸಲು. ಸ್ನಾತಕೋತ್ತರ ಪದವಿ ಅರ್ಹತೆ ಹೊಂದಿರುವ ಗರಿಷ್ಠ 35 ವರ್ಷದ ವಯೋಮಿತಿ ಮೀರಿರದ ಅಭ್ಯರ್ಥಿಗಳು ಅರ್ಜಿ ಸಲ್ಲಿಕೆ ಮಾಡಬಹುದು. ಪ.ಜಾ, ಪ.ಪಂ ಮತ್ತು ಪ್ರವರ್ಗ 1 ಅಭ್ಯರ್ಥಿಗಳಿಗೆ 5 ವರ್ಷ, ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 3 ವರ್ಷ, ವಿಕಲಚೇತನ ಮತ್ತು ವಿಧವಾ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.
ಅರ್ಜಿ ಸಲ್ಲಿಕೆ: ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ. ಪ.ಜಾ, ಪ.ಪಂ, ಪ್ರವರ್ಗ 1, ವಿಕಲಚೇತನ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ. ನಿವೃತ್ತ ಸೇವಾ ನೌಕರರಿಗೆ 50 ರೂ. ಅರ್ಜಿ ಶುಲ್ಕ ವಿಧಿಸಿದರೆ, ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 300 ರೂ. ಹಾಗೂ ಸಾಮಾನ್ಯ ಅಭ್ಯರ್ಥಿಗಳಿಗೆ 600 ರೂ. ಅರ್ಜಿ ಶುಲ್ಕ ವಿಧಿಸಲಾಗಿದೆ.
ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಆಯ್ಕೆ ನಡೆಸಲಾಗುವುದು. ಅರ್ಜಿ ಸಲ್ಲಿಕೆಗೆ ಕಡೇಯ ದಿನ ಮೇ 15 ಆಗಿದೆ. ಈ ಹುದ್ದೆ ಕುರಿತ ಸಂಪೂರ್ಣ ಮಾಹಿತಿ ಈ ಲಿಂಕ್ ಕ್ಲಿಕ್ ಮಾಡಿ: ಕೆಪಿಎಸ್ಸಿ ನೇಮಕಾತಿ: 247 ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ
ಸಹಾಯಕ ಇಂಜಿನಿಯರ್ ಹುದ್ದೆ: ಬಿಬಿಎಂಪಿ, ಜಲಸಂಪನ್ಮೂಲ ಇಲಾಖೆ, ಭೂಮಾಪನ, ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಜಲ ಸಂಪನ್ಮೂಲ ಇಲಾಖೆ, ಕಾರ್ಖಾನೆಗಳು, ಬಾಯ್ಲರುಗಳು ಕೈಗಾರಿಕಾ ಸುರಕ್ಷತೆ ಮತ್ತು ಸ್ವಾಸ್ಥ್ಯ ಇಲಾಖೆ, ಅಂತರ್ಜಲ ನಿರ್ದೇಶನಾಲಯದಲ್ಲಿ ಖಾಲಿ ಇರುವ ಗ್ರೂಪ್ ಬಿ 277 ಹುದ್ದೆಗಳಿಗೆ ಇಂದಿನಿಂದ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ.
ವಿದ್ಯಾರ್ಹತೆ - ವಯೋಮಿತಿ: ಬಿಇ ಪದವಿ. ಗರಿಷ್ಠ ವಯೋಮಿತಿ 35 ವರ್ಷ. ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 3, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ 1 ಅಭ್ಯರ್ಥಿಗಳಿಗೆ 5 ವರ್ಷ, ವಿಕಲಚೇತನ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಇದೆ.
ಅರ್ಜಿ ಸಲ್ಲಿಕೆ: ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಪ.ಜಾ, ಪ.ಪಂ, ಪ್ರವರ್ಗ 1 ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ವಿನಾಯಿತಿ ಇದೆ. ನಿವೃತ್ತ ಸೇವಾ ಅಭ್ಯರ್ಥಿಗಳಿಗೆ 50 ರೂ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 150 ರೂ, ಸಾಮಾನ್ಯ ಅಭ್ಯರ್ಥಿಗಳಿಗೆ 300 ರೂ ಅರ್ಜಿ ಶುಲ್ಕವನ್ನು ನಿಗದಿ ಮಾಡಲಾಗಿದೆ. ಏಪ್ರಿಲ್ 15 ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದ್ದು, ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ ಮೇ 14 ಆಗಿದೆ.
ಈ ಹುದ್ದೆ ಕುರಿತ ಸಂಪೂರ್ಣ ಮಾಹಿತಿ ಈ ಲಿಂಕ್ ಕ್ಲಿಕ್ ಮಾಡಿ: ಬಿಇ ಆಗಿದೆಯಾ?: 327 ಸಹಾಯಕ ಇಂಜಿನಿಯರ್, ಸಹಾಯಕ ನಿರ್ದೇಶಕರ ಹುದ್ದೆಗೆ ಅಧಿಸೂಚನೆ - ಬೇಗನೇ ಅರ್ಜಿ ಹಾಕಿ
ಹೈದರಾಬಾದ್ ಕರ್ನಾಟಕದ ಗ್ರೂಪ್ ಬಿ ಹುದ್ದೆ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕಾರ್ಖಾನೆ ಬಾಯ್ಲರುಗಳು ಕೈಗಾರಿಕಾ ಸುರಕ್ಷತೆ ಮತ್ತು ಸ್ವಸ್ಥ್ಯ ಇಲಾಖೆ, ಬಿಬಿಎಂಪಿ, ಭೂಮಾಪನ , ಕಂದಾಯ ವ್ಯವಸ್ಥೆ. ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಅಂತರ್ಜಲ ನಿರ್ದೇಶನಾಯಲದಲ್ಲಿ ಖಾಲಿ ಇರುವ 50 ಹುದ್ದೆಗಳ ಭರ್ತಿಗೆ ಇಂದಿನಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದೆ.
ವಿದ್ಯಾರ್ಹತೆ- ವಯೋಮಿತಿ: ಬಿಇ ಪದವಿ. ಗರಿಷ್ಠ ವಯೋಮಿತಿ 35 ವರ್ಷ. ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 3, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ 1 ಅಭ್ಯರ್ಥಿಗಳಿಗೆ 5 ವರ್ಷ, ವಿಕಲಚೇತನ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಇದೆ.
ಅರ್ಜಿ ಸಲ್ಲಿಕೆ: ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಪ.ಜಾ, ಪ.ಪಂ, ಪ್ರವರ್ಗ 1 ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ವಿನಾಯಿತಿ ಇದೆ. ನಿವೃತ್ತ ಸೇವಾ ಅಭ್ಯರ್ಥಿಗಳಿಗೆ 50 ರೂ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 150 ರೂ, ಸಾಮಾನ್ಯ ಅಭ್ಯರ್ಥಿಗಳಿಗೆ 300 ರೂ ಅರ್ಜಿ ಶುಲ್ಕವನ್ನು ನಿಗದಿ ಮಾಡಲಾಗಿದೆ. ಏಪ್ರಿಲ್ 15 ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದ್ದು, ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ ಮೇ 14 ಆಗಿದೆ.
ಈ ಹುದ್ದೆ ಕುರಿತು ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ ಅಭ್ಯರ್ಥಿಗಳು kpsc.kar.nic.in ಇಲ್ಲಿಗೆ ಭೇಟಿ ನೀಡಬಹುದಾಗಿದೆ.
ಇದನ್ನೂ ಓದಿ: ಹೈಕೋರ್ಟ್ನಲ್ಲಿ ಉದ್ಯೋಗಾವಕಾಶ: ಯಾವ ಹುದ್ದೆ? ಅರ್ಹತೆ ಏನು? ಸಂಪೂರ್ಣ ವಿವರ ಇಲ್ಲಿದೆ