ETV Bharat / education-and-career

KPSC Recruitment: ಮೋಟಾರ್​ ವಾಹನ ನಿರೀಕ್ಷಕರ ಹುದ್ದೆಗೆ ಅರ್ಜಿ ಸಲ್ಲಿಕೆ ದಿನಾಂಕ ಮರು ನಿಗದಿ; ಇಲ್ಲಿದೆ ವಿವರ - Motor Vehicle Inspector Recruitment - MOTOR VEHICLE INSPECTOR RECRUITMENT

ಮೇ 30 ರಿಂದ ಈ ಅರ್ಜಿ ಸಲ್ಲಿಕೆ ಆರಂಭ ಆಗಲಿದ್ದು, ಅರ್ಜಿ ಸಲ್ಲಿಕೆಗೆ ಅಂತಿಮ ದಿನಾಂಕ ಜೂನ್​ 30 ಆಗಿದೆ.

KPSC Recruitment Extended Notification for Motor Vehicle Inspector post
ಉದ್ಯೋಗ ಸೌಧ (ETV Bharat)
author img

By ETV Bharat Karnataka Team

Published : Jun 1, 2024, 4:45 PM IST

Updated : Jun 1, 2024, 5:01 PM IST

ಬೆಂಗಳೂರು: ಸಾರಿಗೆ ಇಲಾಖೆಯಲ್ಲಿನ 76 ಮೋಟಾರು ವಾಹನ ನಿರೀಕ್ಷಕರ ​​ಹುದ್ದೆಗಳ ನೇಮಕಾತಿ ಕರೆಯಲಾಗಿದ್ದ ಅರ್ಜಿ ಆಹ್ವಾನದ ದಿನಾಂಕವನ್ನು ಮತ್ತೊಂದು ಬಾರಿ ವಿಸ್ತರಣೆ ಮಾಡಿ ಕರ್ನಾಟಕ ಲೋಕ ಸೇವಾ ಆಯೋಗ ಅಧಿಸೂಚನೆ ಹೊರಡಿಸಿದೆ. ಮೇ 30ರಿಂದ ಈ ಹುದ್ದೆಗೆ ಅರ್ಹ ಮತ್ತು ಸೂಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಕೆ ಆರಂಭ ಆಗಲಿದ್ದು, ಅರ್ಜಿ ಸಲ್ಲಿಕೆಗೆ ಅಂತಿಮ ದಿನಾಂಕ ಜೂನ್​ 30 ಆಗಿದೆ.

ಹುದ್ದೆ ವಿವರ: ಒಟ್ಟು 76 ಮೋಟಾರು ವಾಹನ ನಿರೀಕ್ಷಕರ ಹುದ್ದೆಗಳಲ್ಲಿ ಆರು ಹುದ್ದೆಗಳನ್ನು ಕಲ್ಯಾಣ ​ ​- ಕರ್ನಾಟಕ ಭಾಗದ ಅಭ್ಯರ್ಥಿಗಳಿಗೆ ಮೀಸಲಿಡಲಾಗಿದೆ.

KPSC Motor vehicle inspector
ಪತ್ರಿಕಾ ಪ್ರಕಟಣೆ (KPSC)

ವಿದ್ಯಾರ್ಹತೆ: ಅಭ್ಯರ್ಥಿಗಳು ಆಟೋ ಮೊಬೈಲ್​ ಮತ್ತು ಮೆಕಾನಿಕಲ್​ ಇಂಜಿನಿಯರಿಂಗ್​ನಲ್ಲಿ ಬಿಟೆಕ್​ ಅಥವಾ ಡಿಪ್ಲೊಮಾ ಪದವಿ ಪೂರ್ಣಗೊಳಿಸಿರಬೇಕು.

ವೇತನ: 33,450 - 62,600 ರೂ. ಮಾಸಿಕ

ವಯೋಮಿತಿ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಗರಿಷ್ಟ ವಯೋಮಿತಿ 35 ವರ್ಷ. ಪ. ಜಾ, ಪ.ಪಂ, ಪ್ರವರ್ಗ 1 ಅಭ್ಯರ್ಥಿಗಳಿಗೆ 5 ಮತ್ತು ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 3 ವರ್ಷ ಹಾಗೂ ವಿಶೇಷಚೇತನ, ವಿಧವಾ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.

ಅರ್ಜಿ ಸಲ್ಲಿಕೆ: ಈ ಹುದ್ದೆಗಳಿಗೆ ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಪ. ಜಾ, ಪ. ಪಂ, ಪ್ರವರ್ಗ 1 ಹಾಗೂ ವಿಶೇಷಚೇತನ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಮಾಡಲಾಗಿದೆ. ನಿವೃತ್ತ ಸೇವಾ ನೌಕರರಿಗೆ 50 ರೂ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 300 ರೂ. ಹಾಗೂ ಸಾಮಾನ್ಯ ಅಭ್ಯರ್ಥಿಗಳಿಗೆ 600 ರೂ. ಅರ್ಜಿ ಶುಲ್ಕ ವಿಧಿಸಲಾಗಿದೆ.

ಆಯ್ಕೆ ಪ್ರಕ್ರಿಯೆ: ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ನಡೆಯಲಿದೆ.

ಈ ಹುದ್ದೆ ಕುರಿತು ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ ಅಭ್ಯರ್ಥಿಗಳು kpsc.kar.nic.in ಇಲ್ಲಿಗೆ ಭೇಟಿ ನೀಡಿ.

ಎಚ್​ಎಎಲ್​ನಲ್ಲಿ ಅಪ್ರೆಂಟಿಸ್​ ಹುದ್ದೆಗಳು: ಹಿಂದೂಸ್ತಾನ್​ ಏರೋನಾಟಿಕಲ್​ ಲಿಮಿಟೆಡ್​ನಲ್ಲಿ ಅಪ್ರೆಂಟಿಸ್​​ಶಿಪ್​ ಟ್ರೈನಿಂಗ್​​ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಫಿಟ್ಟರ್​​, ಟರ್ನರ್​​, ಮೆಕ್ಯಾನಿಸ್ಟ್​​, ವೆಲ್ಡರ್​, ಸಿಒಎಪಿ, ಫೌಂಡ್ರೆ-ಮ್ಯಾನ್​, ಶೀಟ್​ ಮೆಟಲ್​ ವರ್ಕ್​, ಟೂಲ್​ ಅಂಡ್​​ ಡೈ ಮೇಕರ್​, ಎಲೆಕ್ಟ್ರಿಷಿಯನ್​ ಅಡ್ವಾನ್ಸ್ಡ್​​ ಸಿಎನ್​ಸಿ ಮೆಷಿಂಗ್​ ಹುದ್ದೆಗಳಿಗೆ ಒಂದು ವರ್ಷದ ಅವಧಿಗೆ ನೇಮಕಾತಿ ನಡೆಯಲಿದೆ.

ಐಟಿಐ ಪದವಿ ಹೊಂದಿರುವ ಅಭ್ಯರ್ಥಿಗಳು ನೇರ ಸಂದರ್ಶನದ ಮೂಲಕ ಆಯ್ಕೆಯಾಗಬಹುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 7,000-7,700 ರೂ.ವರೆಗೆ ಗೌರವಧನ ನೀಡಲಾಗುತ್ತದೆ. ನೇರ ಸಂದರ್ಶನ ಜೂನ್​ 17ರಿಂದ ಜೂನ್​ 22ರವರೆಗೆ ಟೆಕ್ನಿಕಲ್​ ಟ್ರೈನಿಂಗ್​​ ಇನ್ಸುಟಿಟ್ಯೂಟ್​, ಸುರಂಜನ್​ ದಾಸ್​ ರಸ್ತೆ, ಬೆಂಗಳೂರು -560017 ಇಲ್ಲಿ ನಡೆಯಲಿದೆ. ಹೆಚ್ಚಿನ ಮಾಹಿತಿಗೆ hal-india.co.in ಇಲ್ಲಿಗೆ ಭೇಟಿ ನೀಡಿ.

ಇದನ್ನೂ ಓದಿ: ವಾಯುಪಡೆಯ ಸಾಮಾನ್ಯ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ; 304 ಹುದ್ದೆಗಳ ವಿವರ ಇಲ್ಲಿದೆ

Last Updated : Jun 1, 2024, 5:01 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.