ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ಸಿ)ದಿಂದ ಮೂರು ವರ್ಷದ ವಯೋಮಿತಿ ಸಡಿಲಿಕೆಯೊಂದಿಗೆ ಮತ್ತೊಮ್ಮೆ ಭೂ ಮಾಪಕರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಇಲಾಖೆಯಲ್ಲಿನ 'ಗ್ರೂಪ್ ಸಿ'ಯ 364 ಹುದ್ದೆಗಳಿಗೆ ಇದೀಗ ಮತ್ತೊಮ್ಮೆ ತಿದ್ದುಪಡಿ ಅಧಿಸೂಚನೆ ಪ್ರಕಟಿಸಲಾಗಿದ್ದು, ಈ ಹುದ್ದೆಗೆ ಪರೀಕ್ಷಾ ದಿನಾಂಕವನ್ನು ನಂತರದಲ್ಲಿ ಪ್ರಕಟಿಸಲಾಗುವುದು.
ಹುದ್ದೆಗಳ ವಿವರ: ಒಟ್ಟು 364 ಹುದ್ದೆಗಳಲ್ಲಿ ಹೈದರಾಬಾದ್ ಕರ್ನಾಟಕಕ್ಕೆ 100 ಮತ್ತು ಉಳಿಕೆ ಮೂಲ ವೃಂದದಲ್ಲಿ 264 ಹುದ್ದೆಗಳಿವೆ.
ವಿದ್ಯಾರ್ಹತೆ: ಸಿವಿಲ್ ಇಂಜಿನಿಯರಿಂಗ್ನಲ್ಲಿ ಬಿಇ ಅಥವಾ ವಿಜ್ಞಾನ ವಿಭಾಗದಲ್ಲಿ ಗಣಿತ ವಿಷಯದೊಂದಿಗೆ ಪಿಯುಸಿ ವಿದ್ಯಾರ್ಹತೆ ಅಥವಾ ಲ್ಯಾಂಡ್ ಅಂಡ್ ಸಿಟಿ ಸರ್ವೇ ಪದವಿ ಪೂರ್ವ ಡಿಪ್ಲೊಮಾ ಅಥವಾ ಐಟಿಐ ಇನ್ ಸರ್ವೆ ಟ್ರೇಡ್ನಲ್ಲಿ ಉತ್ತೀರ್ಣರಾಗಿರಬೇಕು.
ವಯೋಮಿತಿ: ಕನಿಷ್ಠ 18, ಗರಿಷ್ಠ 38 ವರ್ಷ ವಯೋಮಿತಿ. ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 3, ಪ. ಜಾ, ಪ. ಪಂ, ಪ್ರವರ್ಗ 1 ಅಭ್ಯರ್ಥಿಗಳಿಗೆ 5 ವರ್ಷ, ವಿಕಲಚೇತನ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.
ವೇತನ: ಮಾಸಿಕ 23,500 - 47,650 ರೂ.
ಅರ್ಜಿ ಸಲ್ಲಿಕೆ: ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಪ.ಜಾ, ಪ.ಪಂ, ಪ್ರವರ್ಗ 1 ಮತ್ತ ವಿಕಲಚೇತನ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ. ನಿವೃತ್ತ ಸೇವಾದಾರರಿಗೆ 50 ರೂ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 300 ರೂ ಮತ್ತು ಸಾಮಾನ್ಯ ಅಭ್ಯರ್ಥಿಗಳಿಗೆ 600 ರೂ ಅರ್ಜಿ ಶುಲ್ಕ ವಿಧಿಸಲಾಗಿದೆ.
ಈ ಹುದ್ದೆಗೆ ನವೆಂಬರ್ 25ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಲಿದ್ದು, ಅರ್ಜಿ ಸಲ್ಲಿಕೆಗೆ ಕೊನೆಯ ದಿನ ಡಿಸೆಂಬರ್ 9 ಆಗಿದೆ.
ಆಯ್ಕೆ ಪ್ರಕ್ರಿಯೆ: ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಆಯ್ಕೆ. ಈ ಕುರಿತು ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆ ಸೇರಿದಂತೆ ಸಂಪೂರ್ಣ ಮಾಹಿತಿಗೆ ಅಭ್ಯರ್ಥಿಗಳು kpsc.kar.nic.in ಇಲ್ಲಿಗೆ ಭೇಟಿ ನೀಡಿ.
ಇದನ್ನೂ ಓದಿ: ನ. 26ರಿಂದ ಕೊಪ್ಪಳದಲ್ಲಿ ಅಗ್ನಿವೀರ್ ನೇಮಕಾತಿ; ಇಲ್ಲಿದೆ ಸಂಪೂರ್ಣ ವಿವರ