ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದಿಂದ ಲೋಕೋಪಯೋಗಿ ಇಲಾಖೆಯಲ್ಲಿ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಅಕ್ಟೋಬರ್ನಲ್ಲಿ ಈ ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಹೊರಡಿಸಲಾಗಿತ್ತು. ಇದೀಗ ಸೇವಾ ನಿರತ ಅಭ್ಯರ್ಥಿಗಳ ಅರ್ಜಿ ಸಲ್ಲಿಕೆ ತಿದ್ದುಪಡಿ ಮಾಡಿ ಮತ್ತೊಮ್ಮೆ ಹೊಸದಾಗಿ ಪರಿಷ್ಕೃತ ಅಧಿಸೂಚನೆ ಹೊರಡಿಸಲಾಗಿದೆ.
ಹುದ್ದೆ ವಿವರ: ಒಟ್ಟು ಹುದ್ದೆ 42 ಆಗಿದ್ದು, ಇದರಲ್ಲಿ 12 ಹುದ್ದೆಗಳನ್ನು ಹೈದರಾಬಾದ್ ಕರ್ನಾಟಕ ಅಭ್ಯರ್ಥಿಗಳಿಗೆ ಮೀಸಲಿಸಲಾಗಿದೆ.

ವಿದ್ಯಾರ್ಹತೆ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಇಂಜಿನಿಯರಿಂಗ್ನಲ್ಲಿ ಪದವಿ, ಡಿಪ್ಲೊಮಾ ಪದವಿ ಹೊಂದಿರಬೇಕು.
ವಯೋಮಿತಿ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 21, ಗರಿಷ್ಠ 35 ವರ್ಷ ವಯೋಮಿತಿ ಹೊಂದಿರಬೇಕು. ಪ.ಜಾ, ಪ.ಪಂ ಹಾಗೂ ಪ್ರವರ್ಗ 1 ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.
ಅರ್ಜಿ ಸಲ್ಲಿಕೆ: ಈ ಹುದ್ದೆಗೆ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಪ.ಜಾ, ಪ.ಪಂ, ಪ್ರವರ್ಗ1 ಹಾಗೂ ವಿಕಲ ಚೇತನ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದ್ದು, ನಿವೃತ್ತ ಯೋಧರಿಗೆ 50 ರೂ ಹಾಗೂ ಪ್ರವರ್ಗ 2ಎ, 2ಬಿ, 2ಎ, 3ಬಿ ಅಭ್ಯರ್ಥಿಗಳಿಗೆ 300 ರೂ ಹಾಗೂ ಸಾಮಾನ್ಯ ಅಭ್ಯರ್ಥಿಗಳಿಗೆ 600 ಅರ್ಜಿ ಶುಲ್ಕ ವಿಧಿಸಲಾಗಿದೆ.
ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ ಮತ್ತು ಸಂದರ್ಶನ
ಅಭ್ಯರ್ಥಿಗಳು ಈ ಹುದ್ದೆಗೆ ಜನವರಿ 20ರಿಂದ ಅರ್ಜಿ ಸಲ್ಲಿಕೆ ಮಾಡಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕೊನೆಯ ದಿನ ಫೆಬ್ರವರಿ 3 ಆಗಿದೆ.
ಈ ಹುದ್ದೆ ಕುರಿತು ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ ಅಭ್ಯರ್ಥಿಗಳು kpsc.kar.nic.in ಭೇಟಿ ನೀಡಿ
ಇದನ್ನೂ ಓದಿ: ಕರ್ನಾಟಕ ಮುನಿಸಿಪಲ್ ಡಾಟಾ ಸೊಸೈಟಿಯಲ್ಲಿದೆ ಉದ್ಯೋಗಾವಕಾಶ
ಇದನ್ನೂ ಓದಿ: ಬೆಂಗಳೂರು ದೂರದರ್ಶನ ಕೇಂದ್ರದಲ್ಲಿದೆ ಉದ್ಯೋಗಾವಕಾಶ; 80,000 ರೂ ವೇತನ