ETV Bharat / education-and-career

ಕೆಪಿಎಸ್​ಸಿ ನೇಮಕಾತಿ: ಮೋಟಾರು ವಾಹನ ನಿರೀಕ್ಷಕರ ಹುದ್ದೆಗೆ ಇಂದಿನಿಂದ ಅರ್ಜಿ ಸಲ್ಲಿಕೆ ಆರಂಭ - KPSC Revised Notification - KPSC REVISED NOTIFICATION

ಸಾರಿಗೆ ಇಲಾಖೆಯ ಈ ಹುದ್ದೆಗಳ ಭರ್ತಿಗೆ ಕೆಪಿಎಸ್​ಸಿ ಹೊಸ ಪರಿಷ್ಕೃತ ಅಧಿಸೂಚನೆ ಪ್ರಕಟಿಸಿದೆ.

KPSC Revised Notification for Motor Vehicle Inspector Posts Apply

author img

By ETV Bharat Karnataka Team

Published : May 2, 2024, 12:32 PM IST

ಬೆಂಗಳೂರು: ಸಾರಿಗೆ ಇಲಾಖೆಯಲ್ಲಿನ 76 ಮೋಟಾರು ವಾಹನ ನಿರೀಕ್ಷಕರ ​​ಹುದ್ದೆಗಳ ಭರ್ತಿಗೆ ಇಂದಿನಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಿದೆ. ಈ ಹುದ್ದೆ ಸಂಬಂಧ ಪರಿಷ್ಕೃತ ಅಧಿಸೂಚನೆ ಹೊರಡಿಸಿರುವ ಕರ್ನಾಟಕ ಲೋಕಸೇವಾ ಆಯೋಗ ಮೇ 2 ರಿಂದ ಅರ್ಜಿ ಸಲ್ಲಿಕೆ ಪ್ರಾರಂಭವಾಗಲಿದ್ದು, ಅರ್ಜಿ ಸಲ್ಲಿಕೆಗೆ ಜೂನ್​ 1 ಕಡೆಯ ದಿನವಾಗಿದೆ.

ಅಧಿಸೂಚನೆ
ಅಧಿಸೂಚನೆ

ಈ ಹಿಂದಿನ ಅಧಿಸೂಚನೆಯಲ್ಲಿ ಏಪ್ರಿಲ್​ 22ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಲಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನ ಮೇ 21 ಆಗಿದೆ.

ಹುದ್ದೆ ವಿವರ: ಒಟ್ಟು 76 ಮೋಟಾರು ವಾಹನ ನಿರೀಕ್ಷಕರ ಹುದ್ದೆಗಳಲ್ಲಿ ಆರು ಹುದ್ದೆಗಳನ್ನು ಕಲ್ಯಾಣ ​ ​- ಕರ್ನಾಟಕ ಭಾಗದ ಅಭ್ಯರ್ಥಿಗಳಿಗೆ ಮೀಸಲಿಡಲಾಗಿದೆ.

ವಿದ್ಯಾರ್ಹತೆ: ಅಭ್ಯರ್ಥಿಗಳು ಆಟೋ ಮೊಬೈಲ್​ ಮತ್ತು ಮೆಕಾನಿಕಲ್​ ಇಂಜಿನಿಯರಿಂಗ್​ನಲ್ಲಿ ಬಿಟೆಕ್​ ಅಥವಾ ಡಿಪ್ಲೊಮಾ ಪದವಿ ಪೂರ್ಣಗೊಳಿಸಿರಬೇಕು.

ವೇತನ: 33,450 - 62,600 ರೂ. ಮಾಸಿಕ

ವಯೋಮಿತಿ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಗರಿಷ್ಟ ವಯೋಮಿತಿ 35 ವರ್ಷ. ಪ. ಜಾ, ಪ.ಪಂ, ಪ್ರವರ್ಗ 1 ಅಭ್ಯರ್ಥಿಗಳಿಗೆ 5 ಮತ್ತು ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 3 ವರ್ಷ ಹಾಗೂ ವಿಶೇಷಚೇತನ, ವಿಧವಾ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.

ಅರ್ಜಿ ಸಲ್ಲಿಕೆ: ಈ ಹುದ್ದೆಗಳಿಗೆ ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಪ. ಜಾ, ಪ. ಪಂ, ಪ್ರವರ್ಗ 1 ಹಾಗೂ ವಿಶೇಷಚೇತನ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಮಾಡಲಾಗಿದೆ. ನಿವೃತ್ತ ಸೇವಾ ನೌಕರರಿಗೆ 50 ರೂ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 300 ರೂ. ಹಾಗೂ ಸಾಮಾನ್ಯ ಅಭ್ಯರ್ಥಿಗಳಿಗೆ 600 ರೂ. ಅರ್ಜಿ ಶುಲ್ಕ ವಿಧಿಸಲಾಗಿದೆ.

ಆಯ್ಕೆ ಪ್ರಕ್ರಿಯೆ: ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ನಡೆಯಲಿದೆ. ಈ ಹುದ್ದೆ ಕುರಿತು ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ ಅಭ್ಯರ್ಥಿಗಳು kpsc.kar.nic.in ಇಲ್ಲಿಗೆ ಭೇಟಿ ನೀಡಿ.

ಸಹಾಯಕ ಇಂಜಿನಿಯರ್​ ಹುದ್ದೆಗೆ ಅರ್ಜಿ ಸಲ್ಲಿಕೆಗೆ ಮೇ 14 ಕಡೆಯ ದಿನ; ಬಿಬಿಎಂಪಿ, ಜಲಸಂಪನ್ಮೂಲ ಇಲಾಖೆ, ಭೂಮಾಪನ, ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಜಲ ಸಂಪನ್ಮೂಲ ಇಲಾಖೆ, ಕಾರ್ಖಾನೆಗಳು, ಬಾಯ್ಲರುಗಳು ಕೈಗಾರಿಕಾ ಸುರಕ್ಷತೆ ಮತ್ತು ಸ್ವಾಸ್ಥ್ಯ ಇಲಾಖೆ, ಅಂತರ್ಜಲ ನಿರ್ದೇಶನಾಲಯದಲ್ಲಿ ಖಾಲಿ ಇರುವ ಗ್ರೂಪ್​ ಬಿ 277 ಹುದ್ದೆಗಳಿಗೆ ಇಂದಿನಿಂದ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ.

ವಿದ್ಯಾರ್ಹತೆ - ವಯೋಮಿತಿ: ಬಿಇ ಪದವಿ. ಗರಿಷ್ಠ ವಯೋಮಿತಿ 35 ವರ್ಷ. ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 3, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ 1 ಅಭ್ಯರ್ಥಿಗಳಿಗೆ 5 ವರ್ಷ, ವಿಶೇಷಚೇತನ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಇದೆ.

ಅರ್ಜಿ ಸಲ್ಲಿಕೆ: ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಪ.ಜಾ, ಪ.ಪಂ, ಪ್ರವರ್ಗ 1 ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ವಿನಾಯಿತಿ ಇದೆ. ನಿವೃತ್ತ ಸೇವಾ ಅಭ್ಯರ್ಥಿಗಳಿಗೆ 50 ರೂ. ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 150 ರೂ., ಸಾಮಾನ್ಯ ಅಭ್ಯರ್ಥಿಗಳಿಗೆ 300 ರೂ. ಅರ್ಜಿ ಶುಲ್ಕವನ್ನು ನಿಗದಿ ಮಾಡಲಾಗಿದೆ. ಏಪ್ರಿಲ್​ 15 ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದ್ದು, ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ ಮೇ 14 ಆಗಿದೆ.

ಇದನ್ನೂ ಓದಿ: ನವೋದಯ ವಿದ್ಯಾಲಯ ಸಮಿತಿಯ 1,377 ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.