ETV Bharat / education-and-career

902 ಹುದ್ದೆಗಳಿಗೆ ನೇಮಕಾತಿ ಆದೇಶ ಹೊರಡಿಸಿದ ಕೆಪಿಟಿಸಿಎಲ್‌ - KPTCL Appointment - KPTCL APPOINTMENT

ಕರ್ನಾಟಕ ವಿದ್ಯುತ್‌ ಪ್ರಸರಣ ನಿಗಮ ನಿಯಮಿತವು 902 ಹುದ್ದೆಗಳ ಭರ್ತಿಗೆ ನೇಮಕಾತಿ ಆದೇಶ ಪ್ರಕಟಿಸಿದೆ.

kptcl appointment
ಸಾಂದರ್ಭಿಕ ಚಿತ್ರ (ETV Bharat)
author img

By ETV Bharat Karnataka Team

Published : May 24, 2024, 10:10 AM IST

ಬೆಂಗಳೂರು: ಕರ್ನಾಟಕ ವಿದ್ಯುತ್‌ ಪ್ರಸರಣ ನಿಗಮ ನಿಯಮಿತವು (ಕೆಪಿಟಿಸಿಎಲ್) ಒಟ್ಟು 902 ಹುದ್ದೆಗಳ ಭರ್ತಿಗೆ ನೇಮಕಾತಿ ಆದೇಶ ಹೊರಡಿಸಿದೆ. ಚುನಾವಣಾ ನೀತಿ ಸಂಹಿತೆ ಜಾರಿಗೊಳ್ಳುವ ಮುನ್ನ ಅಂದರೆ ಕಳೆದ ಮಾರ್ಚ್‌ನಲ್ಲಿ ನೇಮಕ ಪ್ರಕ್ರಿಯೆ ಅಂತಿಮಗೊಂಡ 368 ಸಹಾಯಕ ಇಂಜಿನಿಯರ್‌ (ವಿದ್ಯುತ್‌), 17 ಸಹಾಯಕ ಇಂಜಿನಿಯರ್ (ಸಿವಿಲ್), 15 ಕಿರಿಯ ಇಂಜಿನಿಯರ್ (ಸಿವಿಲ್) ಅಭ್ಯರ್ಥಿಗಳಿಗೆ ಕೌನ್ಸಿಲಿಂಗ್ ನಡೆಸಿ ನೇಮಕಾತಿ ಆದೇಶ ನೀಡಲಾಗಿದೆ.

ಜೊತೆಗೆ, 535 ಅಭ್ಯರ್ಥಿಗಳ ಪೈಕಿ 502 (ಕಿರಿಯ ಇಂಜಿನಿಯರ್) ಅಭ್ಯರ್ಥಿಗಳಿಗೆ ಬುಧವಾರ ಮತ್ತು ಗುರುವಾರ ಕೌನ್ಸಿಲಿಂಗ್‌ ನಡೆಸಿ ನೇಮಕ ಆದೇಶ ನೀಡಲಾಗಿದೆ. ಈ ಪೈಕಿ 73 ಅಭ್ಯರ್ಥಿಗಳು ಕಲ್ಯಾಣ ಕರ್ನಾಟಕ ಪ್ರದೇಶ ವೃಂದಕ್ಕೆ ಸೇರಿದವರಾಗಿದ್ದು, ಉಳಿದ 429 ಅಭ್ಯರ್ಥಿಗಳು ಇತರೆ ವೃಂದದವರು.

ಇನ್ನುಳಿದಂತೆ, 360 ಕಿರಿಯ ಸಹಾಯಕ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ಶುಕ್ರವಾರ (ಮೇ 24, 2024) ಕಡೆಯ ದಿನವಾಗಿದೆ. ಸ್ವೀಕರಿಸಿದ ಆಕ್ಷೇಪಣೆಗಳನ್ನು ಪರಿಶೀಲಿಸಿದ ನಂತರ ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸಲು ಕ್ರಮ ವಹಿಸಲಾಗುವುದು. ಅಂತಿಮ ಆಯ್ಕೆ ಪಟ್ಟಿ ಪ್ರಕಟಣೆಗೊಂಡ ನಂತರ, ಎಲ್ಲಾ ಅಭ್ಯರ್ಥಿಗಳ ವಿದ್ಯಾರ್ಹತೆ ಹಾಗೂ ಮೀಸಲು ಕೋರಿರುವ ದಾಖಲೆಗಳ ಬಗ್ಗೆ ಸಂಬಂಧಿಸಿದ ಪ್ರಾಧಿಕಾರದಿಂದ ದೃಢೀಕರಣ ಪಡೆದು ತ್ವರಿತವಾಗಿ ಸ್ಥಳ ನಿಯುಕ್ತಿ ಹಾಗೂ ನೇಮಕ ಆದೇಶ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಕೆಪಿಟಿಸಿಎಲ್‌ ಪ್ರಕಟಣೆ ತಿಳಿಸಿದೆ.

ಇಂಧನ ಸಚಿವ ಕೆ.ಜೆ.ಜಾರ್ಜ್ ಪ್ರತಿಕ್ರಿಯೆ: ''ರಾಜ್ಯಾದ್ಯಂತ ವಿಶ್ವಾಸಾರ್ಹ ಮತ್ತು ಪರಿಣಾಮಕಾರಿ ವಿದ್ಯುತ್‌ ಪ್ರಸರಣ ಸೇವೆ ಒದಗಿಸುವುದು ನಮ್ಮ ಬದ್ಧತೆ. ಈ ನಿಟ್ಟಿನಲ್ಲಿ ಪಾರದರ್ಶಕವಾಗಿ ನೇಮಕ ಪ್ರಕ್ರಿಯೆ ನಡೆಸಿ, ಅಭ್ಯರ್ಥಿಗಳಿಗೆ ಕೆಲಸದ ಆದೇಶ ನೀಡಲಾಗಿದೆ. ಆಯ್ಕೆಯಾದ ಎಲ್ಲಾ ಅಭ್ಯರ್ಥಿಗಳಿಗೆ ಅಭಿನಂದನೆಗಳು'' ಎಂದು ಸಚಿವ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ.

''902 ಹೊಸ ಉದ್ಯೋಗಿಗಳ ನೇಮಕದ ಮೂಲಕ ಕೆಪಿಟಿಸಿಎಲ್‌ ಇನ್ನಷ್ಟು ಬಲಗೊಂಡು, ಗುಣಮಟ್ಟದ ಸೇವೆಯನ್ನು ಮುಂದುವರೆಸಲಿದೆ. ಆಯ್ಕೆ ಪ್ರಕ್ರಿಯೆಯನ್ನು ಅತ್ಯಂತ ಪಾರದರ್ಶಕ ಮತ್ತು ಸಮರ್ಥವಾಗಿ ನಡೆಸಲಾಗಿದೆ'' ಎಂದು ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕ ಪಂಕಜ್ ಕುಮಾರ್ ಪಾಂಡೆ ಹೇಳಿದ್ದಾರೆ.

ಇದನ್ನೂ ಓದಿ: ಹೊರಗುತ್ತಿಗೆ ನೇಮಕಾತಿಯಲ್ಲಿ ಮೀಸಲಾತಿ: ರಾಜ್ಯ ಸರ್ಕಾರದ ಆದೇಶ - Outsourcing Job Reservation

ETV Bharat Logo

Copyright © 2025 Ushodaya Enterprises Pvt. Ltd., All Rights Reserved.