ETV Bharat / education-and-career

ಚಾಲಕ ಕಂ ನಿರ್ವಾಹಕ ಹುದ್ದೆಗಳ ನೇಮಕಾತಿಗೆ ಕೆಎಸ್​ಆರ್​ಟಿಸಿ ಅಧಿಸೂಚನೆ

2020ರಲ್ಲಿ ಹೊರಡಿಸಿದ ನೇಮಕಾತಿಗೆ ತಡೆ ನೀಡಿದ್ದ ನಿಗಮ ಇದೀಗ ಮತ್ತೆ ಚಾಲನೆ ನೀಡಿದೆ.

author img

By ETV Bharat Karnataka Team

Published : Feb 28, 2024, 10:04 PM IST

ksrtc
ksrtc

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು (ಕೆಎಸ್​ಆರ್​ಟಿಸಿ) ಈ ಹಿಂದೆ (2020ರಲ್ಲಿ) ಕೋವಿಡ್​ ಸಂದರ್ಭದಲ್ಲಿ ಹೊರಡಿಸಿದ್ದ 3,745 ಚಾಲಕ ಕಂ ನಿರ್ವಾಹಕ ಹುದ್ದೆಗಳ ಭರ್ತಿಗೆ ಪರಿಷ್ಕೃತ ಅಧಿಸೂಚನೆ ಪ್ರಕಟಿಸಿದೆ. ಇದರಂತೆ ಹುದ್ದೆಗಳ ಸಂಖ್ಯೆಯನ್ನು 2,000ಕ್ಕೆ ಸೀಮಿತಗೊಳಿಸಿದೆ. ಈ ಹಿಂದೆ ಅಧಿಸೂಚನೆ ಸಂದರ್ಭದಲ್ಲಿ ಚಾಲ್ತಿಯಲ್ಲಿದ್ದ ಮೀಸಲಾತಿ ನಿಯಮಗಳನ್ವಯ ವರ್ಗವಾರು ಹುದ್ದೆಗಳ ಸಂಖ್ಯೆಯನ್ನು ಪರಿಷ್ಕರಿಸುವುದಾಗಿ ನಿಗಮ ತಿಳಿಸಿದೆ.

ಅಧಿಸೂಚನೆ
ಅಧಿಸೂಚನೆ

ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಮಾರ್ಚ್​ 6ರಿಂದ ದಾಖಲಾತಿ/ದೇಹದಾರ್ಢ್ಯತೆ ಪರಿಶೀಲನೆ ನಡೆಸಲು ನಿರ್ಧರಿಸಲಾಗಿದೆ. ಅಭ್ಯರ್ಥಿಗಳು ಮಾರ್ಚ್​ 3ರಿಂದ ನಿಗಮದ ಅಧಿಕೃತ ವೆಬ್‌ಸೈಟ್ ksrtcjobs.karnataka.gov.inರಲ್ಲಿ ಕರೆಪತ್ರವನ್ನು ಡೌನ್‌ಲೋಡ್ ಮಾಡಿಕೊಂಡು ಎಲ್ಲಾ ಮೂಲ ದಾಖಲಾತಿಗಳೊಂದಿಗೆ ನಿಗದಿತ ದಿನಾಂಕ ಹಾಗೂ ಸಮಯಕ್ಕೆ ಹಾಜರಾಗಲು ಸೂಚಿಸಲಾಗಿದೆ.

ಪ್ರಸ್ತುತ ಅಭ್ಯರ್ಥಿಗಳ ಮೂಲ ದಾಖಲಾತಿ/ದೇಹದಾರ್ಢ್ಯತೆ ಪರಿಶೀಲನೆ ಮಾತ್ರ ನಡೆಸಲಾಗುತ್ತಿದೆ. ಅರ್ಹರಾದ ಅಭ್ಯರ್ಥಿಗಳಿಗೆ ಚಾಲನಾ ವೃತ್ತಿ ಪರೀಕ್ಷೆ ನಡೆಸುವ ಕುರಿತು ಪ್ರತ್ಯೇಕ ದಿನಾಂಕ/ಸ್ಥಳವನ್ನು ನಿಗದಿಪಡಿಸಲಾಗುವುದು. ಅಭ್ಯರ್ಥಿಗಳನ್ನು ಹುದ್ದೆಯ ಆಯ್ಕೆಗೆ ಗಣಕೀಕೃತ ಚಾಲನಾ ವೃತ್ತಿ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಮೆರಿಟ್‌ ಮೇಲೆ ಪಾರದರ್ಶಕ ಆಯ್ಕೆ ನಡೆಸಲಾಗುವುದು. ಇದರಲ್ಲಿ ಯಾವುದೇ ಮಾನವ ಹಸ್ತಕ್ಷೇಪ ಇರುವುದಿಲ್ಲ ಎಂದು ಮಾಹಿತಿ ನೀಡಿದೆ. ಇದೇ ವೇಳೆ ನಿಗಮವು ಅಭ್ಯರ್ಥಿಗಳು ಯಾವುದೇ ಶಿಫಾರಸು, ಮಧ್ಯವರ್ತಿಗಳ ಆಮಿಷಗಳಿಗೆ ಒಳಗಾಗಬಾರದೆಂದು ಸ್ಪಷ್ಟಪಡಿಸಿದೆ.

ಇದನ್ನೂ ಓದಿ: ಬಿಎಂಟಿಸಿಯಲ್ಲಿ 2,500 ಕಂಡಕ್ಟರ್​ ಹುದ್ದೆಗಳ ಭರ್ತಿಗೆ ಅಧಿಸೂಚನೆ; ಇಲ್ಲಿದೆ ಸಂಪೂರ್ಣ ಮಾಹಿತಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.