ETV Bharat / education-and-career

364 ಭೂ ಮಾಪಕರ ಹುದ್ದೆಗಳ ಭರ್ತಿಗೆ ಕೆಪಿಎಸ್​ಸಿ ಅಧಿಸೂಚನೆ - ಭೂ ಮಾಪಕರ ಹುದ್ದೆ ಅಧಿಸೂಚನೆ

ಭೂ ಮಾಪಕರ ಹುದ್ದೆಗಳಿಗೆ ಮಾರ್ಚ್​ 11 ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ.

Land Surveyor job notification from Karnataka Public Service Commission

author img

By ETV Bharat Karnataka Team

Published : Mar 1, 2024, 11:22 AM IST

ಬೆಂಗಳೂರು: ಭೂ ಮಾಪನ ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಇಲಾಖೆಯಲ್ಲಿನ ಭೂ ಮಾಪಕರ ಹುದ್ದೆಗಳಿಗೆ ಕರ್ನಾಟಕ ಲೋಕ ಸೇವಾ ಆಯೋಗ (ಕೆಪಿಎಸ್​ಸಿ) ಅಧಿಸೂಚನೆ ಹೊರಡಿಸಿದೆ. ಒಟ್ಟು 364 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಗ್ರೂಪ್​ ಸಿ ಹುದ್ದೆಗಳ ಭರ್ತಿ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.

ಹುದ್ದೆ ವಿವರ: ಒಟ್ಟು 364 ಹುದ್ದೆಗಳಲ್ಲಿ ಹೈದರಾಬಾದ್​ ಕರ್ನಾಟಕಕ್ಕೆ 100 ಮತ್ತು ಉಳಿಕೆ ಮೂಲ ವೃಂದದಲ್ಲಿ 264 ಹುದ್ದೆಗಳ ನೇಮಕಾತಿ ನಡೆಯಲಿದೆ.

ವಿದ್ಯಾರ್ಹತೆ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಿವಿಲ್​ ಇಂಜಿನಿಯರಿಂಗ್​ನಲ್ಲಿ ಬಿಇ ಅಥವಾ ವಿಜ್ಞಾನ ವಿಭಾಗದಲ್ಲಿ ಗಣಿತ ವಿಷಯದೊಂದಿಗೆ ಪಿಯುಸಿ ವಿದ್ಯಾರ್ಹತೆ ಅಥವಾ ಲ್ಯಾಂಡ್​ ಅಂಡ್​ ಸಿಟಿ ಸರ್ವೆ ಪದವಿ ಪೂರ್ವ ಡಿಪ್ಲೊಮಾ ಅಥವಾ ಐಟಿಐ ಇನ್​ ಸರ್ವೆ ಟ್ರೇಡ್​ನಲ್ಲಿ ಉತ್ತೀರ್ಣರಾಗಿರಬೇಕು.

ವಯೋಮಿತಿ: ಅಭ್ಯರ್ಥಿಗಳಿಗೆ ಕನಿಷ್ಠ 18 ರಿಂದ ಗರಿಷ್ಠ 35 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ. ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 3, ಪ. ಜಾ, ಪ. ಪಂ, ಪ್ರವರ್ಗ 1 ಅಭ್ಯರ್ಥಿಗಳಿಗೆ 5 ವರ್ಷ, ವಿಕಲಚೇತನ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.

ವೇತನ: ಮಾಸಿಕ 23500-47650 ರೂ

ಅರ್ಜಿ ಸಲ್ಲಿಕೆ: ಈ ಹುದ್ದೆಗಳಿಗೆ ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಪ.ಜಾ, ಪ.ಪಂ, ಪ್ರವರ್ಗ 1 ಮತ್ತ ವಿಕಲ ಚೇತನ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ. ನಿವೃತ್ತ ಸೇವಾದಾರರಿಗೆ 50 ರೂ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 300 ರೂ ಮತ್ತು ಸಾಮಾನ್ಯ ಅಭ್ಯರ್ಥಿಗಳಿಗೆ 600 ರೂ ಅರ್ಜಿ ಶುಲ್ಕ ವಿಧಿಸಲಾಗಿದೆ.

ಅಧಿಸೂಚನೆ
ಅಧಿಸೂಚನೆ

ಆಯ್ಕೆ ಪ್ರಕ್ರಿಯೆ: ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಈ ಹುದ್ದೆಗಳಿಗೆ ಮಾರ್ಚ್​​ 11 ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಏಪ್ರಿಲ್​ 10 ಆಗಿದೆ. ಜುಲೈನಲ್ಲಿ ಈ ಹುದ್ದೆಗಳಿಗೆ ಸ್ಪರ್ಥಾತ್ಮಕ ಪರೀಕ್ಷೆ ನಡೆಯುವ ಸಾಧ್ಯತೆ ಇದ್ದು, ಈ ಕುರಿತು ತಾತ್ಕಾಲಿಕ ದಿನಾಂಕವನ್ನು ಅಧಿಸೂಚನೆಯಲ್ಲಿ ಪ್ರಕಟಿಸಲಾಗಿದೆ.

ಈ ಹುದ್ದೆ ಕುರಿತು ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆ ಸೇರಿದಂತೆ ಸಂಪೂರ್ಣ ಮಾಹಿತಿಗೆ ಅಭ್ಯರ್ಥಿಗಳು kpsc.kar.nic.in ಇಲ್ಲಿಗೆ ಭೇಟಿ ನೀಡಬಹುದಾಗಿದೆ.

ಇದನ್ನೂ ಓದಿ: ಬೆಂಗಳೂರು ಗ್ರಾಮಾಂತರ ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗಾವಕಾಶ; ಹುದ್ದೆಗಳ ಭರ್ತಿಗೆ ಅಧಿಸೂಚನೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.