ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾನಿಲಯದಿಂದ ಪ್ರಸಕ್ತ ಸಾಲಿನ ಒಂದು ವರ್ಷದ ಅವಧಿಗೆ ಲೈಬ್ರರಿ ಅಪ್ರೆಂಟಿಸ್ ತರಬೇತುದಾರರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
ಹುದ್ದೆಗಳು: 3
ವಿದ್ಯಾರ್ಹತೆ: ಯಾವುದೇ ಅಂಗೀಕೃತ ವಿಶ್ವವಿದ್ಯಾಲಯದಿಂದ ಮಾಸ್ಟರ್ ಆಫ್ ಲೈಬ್ರರಿ ಸೈನ್ಸ್ ಪದವಿ ಅಥವಾ ಕರ್ನಾಟಕ ಸರ್ಕಾರ ತಾಂತ್ರಿಕ ನಿರ್ದೇಶನಾಲಯದ ಅಡಿಯಲ್ಲಿ ಡಿಪ್ಲೊಮಾ ಇನ್ ಲೈಬ್ರರಿ ಸೈನ್ಸ್ (ದ್ವಿತೀಯ ಪಿಯುಸಿ ನಂತರದ ಎರಡು ವರ್ಷದ ಕೋರ್ಸ್)ನಲ್ಲಿ ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿರಬೇಕು.
ಸೂಚನೆ: 2024-25ನೇ ಸಾಲಿನಲ್ಲಿ ಪರೀಕ್ಷೆ ಬರೆದು ಫಲಿತಾಂಶಕ್ಕಾಗಿ ಕಾಯುತ್ತಿರುವ ಅಭ್ಯರ್ಥಿಗಳು ಕೂಡಾ ಅರ್ಜಿ ಸಲ್ಲಿಸಬಹುದು. ಈಗಾಗಲೇ 2023-24ನೇ ಸಾಲಿನಲ್ಲಿ ಅಪ್ರೆಂಟಿಸ್‌ಗಳಾಗಿ ತರಬೇತಿ ಪಡೆದಿರುವ ಹಾಗೂ ಅದರ ಹಿಂದಿನ ವರ್ಷಗಳಲ್ಲಿ ತರಬೇತಿ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಲ್ಲ.
ವೇತನ: 17,000 ರೂಪಾಯಿ ಮಾಸಿಕ ಶಿಷ್ಯವೇತನ.
ಅರ್ಜಿ ಸಲ್ಲಿಕೆ: ಆಸಕ್ತರು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ವಿಶ್ವವಿದ್ಯಾಲಯದ ಅಧಿಕೃತ ಜಾಲತಾಣದಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ಭರ್ತಿ ಮಾಡಿ, ಸ್ವಯಂ ದೃಢೀಕರಿಸಿ ಈ ವಿಳಾಸಕ್ಕೆ ಸಲ್ಲಿಸಬೇಕು.
ವಿಳಾಸ: ಕುಲಸಚಿವರು, ಬೆಂಗಳೂರು ನಗರ ವಿಶ್ವವಿದ್ಯಾನಿಲಯ, ಜ್ಞಾನಜ್ಯೋತಿ ಸೆಂಟ್ರಲ್ ಕಾಲೇಜು ಆವರಣ, ಬೆಂಗಳೂರು- 560 001
ಈ ಹುದ್ದೆಗೆ ಸಂದರ್ಶನದ ಮೂಲಕ ಅಭ್ಯರ್ಥಿಗಳ ನೇಮಕಾತಿ ನಡೆಸಲಾಗುವುದು. ಅರ್ಜಿ ಸಲ್ಲಿಸಲು ಕಡೇಯ ದಿನಾಂಕ ನವೆಂಬರ್ 26. ಹೆಚ್ಚಿನ ಮಾಹಿತಿಗೆ www.bcu.ac.in ಭೇಟಿ ನೀಡಿ.

ಧಾರವಾಡ ಜಿಲ್ಲಾ ಪಂಚಾಯತ್- ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗೆ ಅರ್ಜಿ ಆಹ್ವಾನ: ಧಾರವಾಡ ಜಿಲ್ಲಾ ಪಂಚಾಯತ್ನಿಂದ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 32 ಹುದ್ದೆಗಳಿವೆ. ಪಿಯುಸಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ 1ರ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.
ಮೆರಿಟ್ ಆಧಾರದ ಮೇಲೆ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಅರ್ಜಿ ಸಲ್ಲಿಸಲು ಕಡೇಯ ದಿನ ಡಿಸೆಂಬರ್ 4. ಹೆಚ್ಚಿನ ಮಾಹಿತಿಗೆ zpdharwad.karnataka.gov.in ಇಲ್ಲಿಗೆ ಭೇಟಿ ನೀಡಿ.
ಇದನ್ನೂ ಓದಿ: ಕರಾಮುವಿ ಪ್ರವೇಶಕ್ಕೆ ನ.15 ಕಡೆ ದಿನಾಂಕ: ವಿವಿಯಿಂದ ಕೆಎಎಸ್ ಪರೀಕ್ಷೆಗೂ ಸಿಗಲಿದೆ ತರಬೇತಿ