ಬೆಂಗಳೂರು: ತುಮಕೂರು ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಗ್ರಾಮ ಪಂಚಾಯಿತಿ ಗ್ರಂಥಾಲಯಗಳಲ್ಲಿ ಮೇಲ್ವಿಚಾರಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 33 ಹುದ್ದೆಗಳಿವೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ವಿವರ: ಜಿಲ್ಲೆಯ ಈ ತಾಲೂಕುಗಳಲ್ಲಿ ಹುದ್ದೆಗಳ ಭರ್ತಿ ಪ್ರಕ್ರಿಯೆ ನಡೆಯಲಿದೆ.
- ಚಿಕ್ಕನಾಯಕನ ಹಳ್ಳಿ 4
- ಕುಣಿಗಲ್ 3
- ಪಾವಗಡ 4
- ಶಿರಾ 8
- ತುರುವೇಕೆರೆ 3
- ತುಮಕೂರು 5
- ಮಧುಗಿರಿ 2
- ಗುಬ್ಬಿ 2
- ಕೊರಟಗೆರೆ 2
ವಿದ್ಯಾರ್ಹತೆ: ಪಿಯುಸಿ ವಿದ್ಯಾರ್ಹತೆ. ಸರ್ಟಿಫಿಕೇಷನ್ ಕೋರ್ಸ್ ಇನ್ ಲೈಬ್ರರಿ ಸೈನ್ಸ್ ಪ್ರಮಾಣಪತ್ರ ಪಡೆದಿರಬೇಕು. ಕನಿಷ್ಠ 3 ತಿಂಗಳ ಕಂಪ್ಯೂಟರ್ ಕೋರ್ಸ್ ಉತ್ತೀರ್ಣರಾಗಿರಬೇಕು. ಸರ್ಟಿಫಿಕೇಷನ್ ಕೋರ್ಸ್ ಇನ್ ಲೈಬ್ರರಿ ಸೈನ್ಸ್ ಪದವಿ ಪಡದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸದೇ ಇದ್ದಲ್ಲಿ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳನ್ನು ಪರಿಗಣಿಸಲಾಗುತ್ತದೆ.
ವೇತನ: ₹15,197 ಮಾಸಿಕ
ವಿಶೇಷ ಸೂಚನೆ: ಅಭ್ಯರ್ಥಿಗಳು ಸಂಬಂಧಪಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಿವಾಸಿಯಾಗಿರಬೇಕು.
ವಯೋಮಿತಿ: ಕನಿಷ್ಠ 18, ಗರಿಷ್ಠ 35 ವರ್ಷ ವಯೋಮಿತಿ ಹೊಂದಿರಬೇಕು. ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪ.ಜಾತಿ, ಪ.ಪಂ ಮತ್ತು ಪ್ರವರ್ಗ 1 ಅಭ್ಯರ್ಥಿಗಳಿಗೆ 5 ವರ್ಷದವರೆಗೆ ವಯೋಮಿತಿ ಸಡಿಲಿಕೆ ಇದೆ.
ಆಯ್ಕೆ: ಮೆರಿಟ್ ಆಧಾರದ ಮೇಲೆ ದಾಖಲಾತಿ ಪರಿಶೀಲನೆ ಬಳಿಕ ಆಯ್ಕೆ.
ಅರ್ಜಿ ಸಲ್ಲಿಕೆ: ಅಭ್ಯರ್ಥಿಗಳು ತುಮಕೂರು ಜಿಲ್ಲಾ ಪಂಚಾಯಿತಿಯ ಅಧಿಕೃತ ವೆಬ್ಸೈಟ್ನಲ್ಲಿ ಲಭ್ಯವಿರುವ ಅರ್ಜಿ ಪಡೆಯಬಹುದು ಅಥವಾ ಉಪ ಕಾರ್ಯದರ್ಶಿ (ಆಡಳಿತ), ಜಿಲ್ಲಾ ಪಂಚಾಯತ್, ತುಮಕೂರು ಇಲ್ಲಿಯೂ ಕೂಡ ಪಡೆಯಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನ ಏಪ್ರಿಲ್ 25. ಈ ಕುರಿತು ಸಂಪೂರ್ಣ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ zptumakuru.karnataka.gov.in ಇಲ್ಲಿಗೆ ಭೇಟಿ ನೀಡಿ.
1930 ನರ್ಸಿಂಗ್ ಹುದ್ದೆಗಳಿಗೆ ಯುಪಿಎಸ್ಸಿ ಅಧಿಸೂಚನೆ: ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದ ಉದ್ಯೋಗಿ ರಾಜ್ಯ ವಿಮಾ ನಿಗಮದಲ್ಲಿ ಖಾಲಿ ಇರುವ 1930 ನರ್ಸಿಂಗ್ ಹುದ್ದೆಗಳ ಭರ್ತಿಗೆ ಕೇಂದ್ರ ಲೋಕಸೇವಾ ಆಯೋಗ ಅಧಿಸೂಚನೆ ಪ್ರಕಟಿಸಿದೆ. ಡಿಪ್ಲೊಮಾ, ಬಿಎಸ್ಸಿ ನರ್ಸಿಂಗ್ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಗರಿಷ್ಠ ವಯೋಮಿತಿ 30 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3, ಪ.ಜಾ, ಪ.ಪಂ ಅಭ್ಯರ್ಥಿಗಳಿಗೆ 5 ಮತ್ತು ವಿಶೇಷಚೇತನ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಇದೆ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದು. ಪ.ಜಾ, ಪ. ಪಂ, ಮಹಿಳಾ ಮತ್ತು ವಿಕಲಚೇತನ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದ್ದು, ಇತರೆ ಅಭ್ಯರ್ಥಿಗಳಿಗೆ 25 ರೂ ಅರ್ಜಿ ಶುಲ್ಕ ವಿಧಿಸಲಾಗಿದೆ.
ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಆಯ್ಕೆ ಮಾರ್ಚ್ 7ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಮಾರ್ಚ್ 27 ಕಡೇಯ ದಿನಾಂಕ. ಈ ಕುರಿತು ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ ಅಭ್ಯರ್ಥಿಗಳು upsconline.nic.in. ಇಲ್ಲಿಗೆ ಭೇಟಿ ನೀಡಿ.
ಇದನ್ನೂ ಓದಿ: ಕೆಪಿಎಸ್ಸಿ ನೇಮಕಾತಿ: ಮೋಟಾರು ವಾಹನ ನಿರೀಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ